ಕರ್ತವ್ಯದ ವೇಳೆ ಅಪಘಾತದಲ್ಲಿ ಸಾವು: ನಾಲ್ವರು KSRTC ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಣೆ

ಕರ್ತವ್ಯದ ವೇಳೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ನಾಲ್ವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ನೌಕರರ ಕುಟುಂಬದವರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬುಧವಾರ ತಲಾ 1 ಕೋಟಿ ರೂಪಾಯಿ ಪರಿಹಾರವನ್ನು ವಿತರಿಸಿದ್ದಾರೆ. ಕೆಎಸ್‌ಆರ್‌ಟಿಸಿಯ ಅಪಘಾತ ವಿಮೆ (ಸಾರಿಗೆ ಸುರಕ್ಷಾ) ಅಡಿಯಲ್ಲಿ ಈ ಮೊತ್ತವನ್ನು ನೀಡಲಾಯಿತು.
ಕರ್ತವ್ಯದ ವೇಳೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕೆಎಸ್‌ಆರ್‌ಟಿಸಿ ನೌಕರನ ಕುಟುಂಬಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬುಧವಾರ ಪರಿಹಾರ ವಿತರಿಸಿದರು.
ಕರ್ತವ್ಯದ ವೇಳೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕೆಎಸ್‌ಆರ್‌ಟಿಸಿ ನೌಕರನ ಕುಟುಂಬಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬುಧವಾರ ಪರಿಹಾರ ವಿತರಿಸಿದರು.
Updated on

ಬೆಂಗಳೂರು: ಕರ್ತವ್ಯದ ವೇಳೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ನಾಲ್ವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ನೌಕರರ ಕುಟುಂಬದವರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬುಧವಾರ ತಲಾ 1 ಕೋಟಿ ರೂಪಾಯಿ ಪರಿಹಾರವನ್ನು ವಿತರಿಸಿದ್ದಾರೆ. ಕೆಎಸ್‌ಆರ್‌ಟಿಸಿಯ ಅಪಘಾತ ವಿಮೆ (ಸಾರಿಗೆ ಸುರಕ್ಷಾ) ಅಡಿಯಲ್ಲಿ ಈ ಮೊತ್ತವನ್ನು ನೀಡಲಾಯಿತು.

ಇಲ್ಲಿನ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರು ಕೆಎಸ್‌ಆರ್‌ಟಿಸಿ ನೌಕರರ ಕುಟುಂಬ ಕಲ್ಯಾಣ ಪರಿಹಾರ ಯೋಜನೆಯಡಿ ಅಪಘಾತ ಹೊರತುಪಡಿಸಿ ವಿವಿಧ ಕಾಯಿಲೆಗಳಿಂದ ಮೃತಪಟ್ಟ 23 ನೌಕರರ ಅವಲಂಬಿತರಿಗೆ ತಲಾ 10 ಲಕ್ಷ ರೂ. ಮತ್ತು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಸಂಚರಿಸುವ ವೇಳೆ ಅಪಘಾತದಲ್ಲಿ ಮೃತಪಟ್ಟ ನಾಲ್ವರು ಪ್ರಯಾಣಿಕರ ಅವಲಂಬಿತರಿಗೆ ತಲಾ 10 ಲಕ್ಷ ರೂ.ಗಳನ್ನು ವಿತರಿಸಿದರು.

ಕಾರ್ಮಿಕರ ಕಲ್ಯಾಣಕ್ಕಾಗಿ ಮತ್ತು ಪ್ರಯಾಣಿಕರಿಗಾಗಿ ನಿಗಮವು ಹಲವಾರು ಕಾರ್ಯಕ್ರಮಗಳನ್ನು ರೂಪಿಸಿ, ಜಾರಿಗೊಳಿಸಿದೆ. ಮೃತಪಟ್ಟವರ ಜೀವವು ಅಮೂಲ್ಯವಾಗಿದ್ದು, ಅದನ್ನು ಮರಳಿ ತರಲು ಸಾಧ್ಯವಿಲ್ಲ. ಆದರೆ, ಅವರ ಕುಟುಂಬದ ಆರ್ಥಿಕ ಭದ್ರತೆಗಾಗಿ ನಿಗಮವು 1 ಕೋಟಿ ರೂ. ವಿಮೆ ಯೋಜನೆ ದೂರದೃಷ್ಟಿಯನ್ನು ಹೊಂದಿದೆ. ಇಲ್ಲಿಯವರೆಗೆ ಅಪಘಾತದಲ್ಲಿ ಮೃತಪಟ್ಟ 17 ಮಂದಿಯ ಕುಟುಂಬಕ್ಕೆ ಈ ವಿಮೆ ತಲುಪಿದೆ' ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

ಕರ್ತವ್ಯದ ವೇಳೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕೆಎಸ್‌ಆರ್‌ಟಿಸಿ ನೌಕರನ ಕುಟುಂಬಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬುಧವಾರ ಪರಿಹಾರ ವಿತರಿಸಿದರು.
ಕೆಎಸ್ ಆರ್ ಟಿಸಿಯಿಂದ ಮೃತ ಉದ್ಯೋಗಿಗಳ ಕುಟುಂಬಗಳಿಗೆ ತಲಾ 1 ಕೋಟಿ ರೂಪಾಯಿ ಪರಿಹಾರ ವಿತರಣೆ

ಕುಟುಂಬದ ಸದಸ್ಯರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಮತ್ತು ಮನೆ ನಿರ್ಮಾಣಕ್ಕೆ ಈ ಮೊತ್ತವನ್ನು ಬಳಸಿಕೊಳ್ಳುವಂತೆ ಒತ್ತಾಯಿಸಿದರು. ಶಕ್ತಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ನಿಗಮದ ಕಾರ್ಮಿಕರು, ಅಧಿಕಾರಿಗಳು ಮತ್ತು ಕಾರ್ಮಿಕ ಮುಖಂಡರನ್ನು ಅಭಿನಂದಿಸಿದರು.

ವಿದ್ಯಾ ಚೇತನ ಯೋಜನೆಯಡಿ ವಿದ್ಯಾರ್ಥಿವೇತನದ ಮೊತ್ತವನ್ನು ಹೆಚ್ಚಿಸುವ ಸಾಧ್ಯತೆಯನ್ನು ಅನ್ವೇಷಿಸಲು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬು ಕುಮಾರ್ ಅವರಿಗೆ ರೆಡ್ಡಿ ಸೂಚಿಸಿದರು.

ನಿಗಮದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಶ್ರಮಜೀವಿಗಳು, ಅವರಿಗೆ ಸಲ್ಲಬೇಕಾದ ಎಲ್ಲ ಸೌಲಭ್ಯಗಳನ್ನು ಕಲ್ಪಿಸಬೇಕು. ಇಂದು ಪರಿಹಾರ ಮೊತ್ತವನ್ನು ಪಡೆದವರು ಅದನ್ನು ಸಮರ್ಪಕವಾಗಿ ಬಳಸಿಕೊಂಡು ಕುಟುಂಬವನ್ನು ಸ್ವಾವಲಂಬಿಯನ್ನಾಗಿ ಮಾಡಬೇಕು ಎಂದು ಕೆಎಸ್ಆರ್‌ಟಿಸಿ ಅಧ್ಯಕ್ಷ ಎಸ್ಆರ್ ಶ್ರೀನಿವಾಸ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com