ನಕಲಿ ವೈದ್ಯರ ಹಾವಳಿಗೆ ಕಟ್ಟುನಿಟ್ಟಿನ ಕ್ರಮ: ಸಚಿವ ಡಾ‌ ಶರಣಪ್ರಕಾಶ್‌ ಪಾಟೀಲ್

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಕಲಿ ವೈದ್ಯರ ದಂಧೆಗೆ ಕಡಿವಾಣ ಹಾಕಲು ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಲು ನಿರ್ಧರಿಸಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಹೇಳಿದ್ದಾರೆ.
ಡಾ. ಶರಣ ಪ್ರಕಾಶ್ ಪಾಟೀಲ್
ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಕಲಿ ವೈದ್ಯರ ದಂಧೆಗೆ ಕಡಿವಾಣ ಹಾಕಲು ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಲು ನಿರ್ಧರಿಸಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಹೇಳಿದ್ದಾರೆ.

ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬುಧವಾರ ಕರ್ನಾಟಕ ಖಾಸಗಿ ಹೋಮಿಯೋಪತಿ ವೈದ್ಯಕೀಯ ಕಾಲೇಜುಗಳ ಆಡಳಿತ ಸಂಘದ ವತಿಯಿಂದ ನಡೆದ ವಿಶ್ವ ಹೋಮಿಯೋಪತಿ ದಿನಾಚರಣೆ ಹಾಗೂ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದೆ. ಯಾವುದೇ ವೈದ್ಯಕೀಯ ಕೋರ್ಸ್ ಮುಗಿಸದೇ ಇರುವವರು ಕ್ಲಿನಿಕ್ ಗಳನ್ನು ಸ್ಥಾಪಿಸಿ ಜನರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ನಕಲಿ ವೈದ್ಯರ ಕಾರ್ಯವೈಖರಿ ಬಗ್ಗೆ ನಮಗೆ ಸಾಕಷ್ಟು ದೂರುಗಳು ಬಂದಿವೆ ಎಂದು ಡಾ.ಪಾಟೀಲ ಹೇಳಿದರು.

ಡಾ. ಶರಣ ಪ್ರಕಾಶ್ ಪಾಟೀಲ್
ನಕಲಿ ವೈದ್ಯಕೀಯ ಹಾವಳಿ ವಿರುದ್ಧ ಕಠಿಣ ಕ್ರಮ: ಖಾಸಗಿ ಆಸ್ಪತ್ರೆಗಳಿಗೆ KPME ಸಂಖ್ಯೆ ಪ್ರದರ್ಶನ ಇನ್ಮುಂದೆ ಕಡ್ಡಾಯ!

ಕೆಲವರು ಮೋಸಗಾರರು ಅದರಲ್ಲೂ ಗ್ರಾಮೀಣ ಭಾಗದ ಜನರ ಲಾಭ ಪಡೆದು ಅವರಿಗೆ ನಕಲಿ ಚಿಕಿತ್ಸೆ ನೀಡುತ್ತಿದ್ದಾರೆ. ಅಕ್ರಮ ಎಂದು ಗೊತ್ತಿದ್ದರೂ ಕೆಲವರು ನಕಲಿ ಚಿಕಿತ್ಸೆ ನೀಡುತ್ತಲೇ ಇದ್ದಾರೆ. ನಕಲಿ ವೈದ್ಯರು ಮತ್ತು ಅವರ ನಕಲಿ ಚಿಕಿತ್ಸೆಗೆ ಕಡಿವಾಣ ಹಾಕಲು ನಮ್ಮ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಡಾ.ಪಾಟೀಲ್ ಹೇಳಿದರು. ನಕಲಿ ಚಿಕಿತ್ಸಾಲಯಗಳು ಮತ್ತು ನಕಲಿ ವೈದ್ಯರ ಕಾರ್ಯಚಟುವಟಿಕೆಗಳ ಬಗ್ಗೆ ಸರ್ಕಾರದೊಂದಿಗೆ ವಿವರಗಳನ್ನು ಹಂಚಿಕೊಳ್ಳಲು ಜನರಿಗೆ ಕರೆ ನೀಡಿದರು.

ರಾಜೀವ್‌ ಗಾಂಧಿ ಆರೋಗ್ಯ ವಿವಿಗೆ ಹೋಮಿಯೋಪತಿಯ ಪ್ರತಿನಿಧಿಯೊಬ್ಬರನ್ನು ಸಿಂಡಿಕೇಟ್ ಸದಸ್ಯನಾಗಿ ನೇಮಿಸಬೇಕೆಂದು ಸಂಘದ ಪ್ರತಿನಿಧಿಗಳು ಮನವಿ ಮಾಡಿದರು. ಇದಕ್ಕೂ ಸಕಾರಾತವಾಗಿ ಸ್ಪಂದಿಸಿದ ಶರಣಪ್ರಕಾಶ್‌ ಪಾಟೀಲ್‌ ಅವರು ಈ ಕುರಿತು ವಿಶ್ವವಿದ್ಯಾನಿಲಯದ ಕುಲಪತಿಗಳ ಜೊತೆ ಮಾತುಕತೆ ನಡೆಸುವ ಆಶ್ವಾಸನೆಯನ್ನು ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com