ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪೊಲೀಸರೆದುರು ಶರಣಾಗಿದ್ದ ಅನುಕುಮಾರ್ ತಂದೆ ಹೃದಯಾಘಾತದಿಂದ ಸಾವು

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ತಮ್ಮ ಪುತ್ರ ಪೊಲೀಸರಿಗೆ ಶರಣಾಗಿರುವ ಸುದ್ದಿ ತಿಳಿದು ಆರೋಪಿ ಅನುಕುಮಾರ್ ತಂದೆ ಚಂದ್ರಪ್ಪ (60) ಕುಸಿದುಬಿದ್ದು ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದಾರೆ.
accused renukaswamy and jagadish
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರಿಗೆ ಶರಣಾದ ಅನುಕುಮಾರ್ ಹಾಗೂ ಜಗದೀಶ್ online desk
Updated on

ಚಿತ್ರದುರ್ಗ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ತಮ್ಮ ಪುತ್ರ ಪೊಲೀಸರಿಗೆ ಶರಣಾಗಿರುವ ಸುದ್ದಿ ತಿಳಿದು ಆರೋಪಿ ಅನುಕುಮಾರ್ ತಂದೆ ಚಂದ್ರಪ್ಪ (60) ಕುಸಿದುಬಿದ್ದು ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದಾರೆ.

ಸಿಹಿ ನೀರು ಹೊಂಡ ಎಂಬಲ್ಲಿ ಈ ಘಟನೆ ನಡೆದಿದೆ. ಕುಸಿದುಬೀಳುತ್ತಿದ್ದಂತೆಯೇ ಚಂದ್ರಪ್ಪ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಕಡಿಮೆ ರಕ್ತದೊತ್ತಡದಿಂದಾಗಿ ಹೃದಯ ಸ್ತಂಭನ ಸಂಭವಿಸಿ ಅವರು ಸಂಜೆ 7 ಗಂಟೆ ವೇಳೆಗೆ ಮೃತಪಟ್ಟಿದ್ದಾರೆ.

accused renukaswamy and jagadish
ರೇಣುಕಾಸ್ವಾಮಿ ಕೊಲೆ ಪ್ರಕರಣ; ನಟ ದರ್ಶನ್ ಪರವಾಗಿ ಸರ್ಕಾರದ ಮೇಲೆ ಒತ್ತಡ; ಆರೋಪ ತಳ್ಳಿಹಾಕಿದ ಡಿಕೆ ಶಿವಕುಮಾರ್

ಒಂದೆಡೆ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಅನುಕುಮಾರ್ ಪೊಲೀಸರ ಮುಂದೆ ಶರಣಾಗಿದ್ದರೆ ಮತ್ತೊಂದೆಡೆ ಅವರ ತಂದೆ ಚಂದ್ರಪ್ಪ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಆಟೋ ಚಾಲಕನಾಗಿದ್ದ ಅನುಕುಮಾರ್ ಕುಟುಂಬದಲ್ಲಿ ದುಡಿಯುತ್ತಿದ್ದ ಏಕೈಕ ವ್ಯಕ್ತಿಯಾಗಿದ್ದು ಅವರು ಕುಟುಂಬದ ಆಧಾರವಾಗಿದ್ದರು.

ಮಗನ ಬಂಧನ ಮತ್ತು ಪತಿ ಚಂದ್ರಪ್ಪನ ಸಾವಿನಿಂದ ಅನುಕುಮಾರ್ ಅವರ ತಾಯಿ ಜಯಮ್ಮ ತೀವ್ರ ಅಘಾತಕ್ಕೆ ಒಳಗಾಗಿ, ನಡೆದ ಘಟನೆಗಳಿಗೆ ದರ್ಶನ್‌ಗೆ ಶಾಪ ಹಾಕುತ್ತಿದ್ದದ್ದು ಕಂಡುಬಂದಿತು.

ತನ್ನ ಮಗ ನಿರಪರಾಧಿಯಾಗಿದ್ದು, ಆತನನ್ನು ಬಿಡುಗಡೆ ಮಾಡುವಂತೆ ಪೊಲೀಸರನ್ನು ಜಯಮ್ಮ ವಿನಂತಿಸುತ್ತಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com