Darshan Case: ತೀವ್ರ ಆಘಾತ, ರಕ್ತಸ್ರಾವದಿಂದ ರೇಣುಕಾಸ್ವಾಮಿ ಸಾವು: ಮರಣೋತ್ತರ ವರದಿ

ನಟ ದರ್ಶನ್ ಅಭಿಮಾನಿ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮರಣೋತ್ತರ ಪರೀಕ್ಷಾ ವರದಿ ಬಹಿರಂಗವಾಗಿದ್ದು, ತೀವ್ರ ಆಘಾತ ರಕ್ತಸ್ರಾವದಿಂದ ರೇಣುಕಾಸ್ವಾಮಿ ಸಾವಾಗಿದೆ ಎಂದು ಹೇಳಲಾಗಿದೆ.
Darshan Case Victim Renukaswamy
ನಟ ದರ್ಶನ್ ಮತ್ತು ರೇಣುಕಾಸ್ವಾಮಿ
Updated on

ಬೆಂಗಳೂರು: ನಟ ದರ್ಶನ್ ಅಭಿಮಾನಿ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮರಣೋತ್ತರ ಪರೀಕ್ಷಾ ವರದಿ ಬಹಿರಂಗವಾಗಿದ್ದು, ತೀವ್ರ ಆಘಾತ ರಕ್ತಸ್ರಾವದಿಂದ ರೇಣುಕಾಸ್ವಾಮಿ ಸಾವಾಗಿದೆ ಎಂದು ಹೇಳಲಾಗಿದೆ.

ಕನ್ನಡದ ಖ್ಯಾತ ನಟ ದರ್ಶನ್ ತೂಗುದೀಪ ಅವರು ಚಿತ್ರಹಿಂಸೆ ನೀಡಿ ಹತ್ಯೆಗೈದಿದ್ದಾರೆ ಎನ್ನಲಾದ ರೇಣುಕಾಸ್ವಾಮಿ ಅವರ ಮರಣೋತ್ತರ ಪರೀಕ್ಷೆಯ ವರದಿ ಬಂದಿದ್ದು, ರೇಣುಕಾಸ್ವಾಮಿ ತೀವ್ರ ಆಘಾತ, ಚಿತ್ರಹಿಂಸೆ ಮತ್ತು ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ ಎಂದು ಶವಪರೀಕ್ಷೆ ವರದಿಯಲ್ಲಿ ತಿಳಿಸಲಾಗಿದೆ.

ಶವಪರೀಕ್ಷೆಯಲ್ಲಿ ರೇಣುಕಾ ಸ್ವಾಮಿ ಅವರ ದೇಹದ ಮೇಲೆ 15 ಗಾಯಗಳು ಕಂಡುಬಂದಿವೆ ಎಂದು ಹೇಳಿದ್ದು, ರೇಣುಕಾ ಸ್ವಾಮಿ ಅವರ ದೇಹದ ತಲೆ, ಹೊಟ್ಟೆ, ಎದೆ ಮತ್ತು ಇತರ ಭಾಗಗಳಲ್ಲಿ ಗಾಯದ ಗುರುತುಗಳಿವೆ.

ರೇಣುಕಾಸ್ವಾಮಿ ಮೈ ಮೇಲೆ ಇರುವ ಗಾಯದ ಗುರುತುಗಳು ಮರದ ಕೋಲು, ಚರ್ಮದ ಬೆಲ್ಟ್ ಹಾಗೂ ಹಗ್ಗದಿಂದ ಹೊಡೆದ ಗುರುತುಗಳಾಗಿವೆ ಎಂದು ವರದಿಯಲ್ಲಿ ಹೇಳಲಾಗಿದೆ.

Darshan Case Victim Renukaswamy
ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರ ಬಂಧನ, ನಟ ದರ್ಶನ್ ಸೇರಿ ಬಂಧಿತ ಆರೋಪಿಗಳ ಸಂಖ್ಯೆ 16!

ತಲೆಗೆ ತೀವ್ರ ಗಾಯ

ಇನ್ನು ರೇಣುಕಾಸ್ವಾಮಿ ಅವರ ತಲೆಯನ್ನು ಶೆಡ್ಡಿನಲ್ಲಿ ನಿಂತಿದ್ದ ಮಿನಿ ಟ್ರಕ್‌ಗೆ ಹೊಡೆಯಲಾಗಿದೆ ಎಂದು ಶವಪರೀಕ್ಷೆ ವರದಿ ಹೇಳಲಾಗಿದ್ದು, ಈ ವಾಹನವನ್ನು ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ. ರೇಣುಕಾ ಸ್ವಾಮಿಗೆ ಚಿತ್ರಹಿಂಸೆ ನೀಡಲು ಬಳಸಿದ ಮರದ ಕೋಲುಗಳು, ಚರ್ಮದ ಬೆಲ್ಟ್ ಮತ್ತು ಹಗ್ಗವನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ತಲಾ 5 ಲಕ್ಷ ರೂ ನೀಡಿದ್ದ ದರ್ಶನ್?

ಇನ್ನು ಕೊಲೆ ಬಳಿಕ ತಾವೇ ಕೊಲೆ ಮಾಡಿದ್ದು ಎಂದು ಆರೋಪ ಹೊತ್ತುಕೊಳ್ಳಲು ಮೂವರು ಆರೋಪಿಗಳಿಗೆ ನಟ ದರ್ಶನ್ ತಲಾ 5 ಲಕ್ಷ ರೂ ನೀಡಿದ್ದರು ಎಂದು ಹೇಳಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ತನಿಖೆ ವೇಳೆ ಈ ಮಾಹಿತಿಯನ್ನು ಆರೋಪಿಗಳು ಬಾಯಿಬಿಟ್ಟಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com