35,000 ಅತಿಥಿ ಶಿಕ್ಷಕರ ನೇಮಕಕ್ಕೆ ಸರ್ಕಾರ ಅನುಮತಿ!

ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 35 ಸಾವಿರ ಮತ್ತು ಪ್ರೌಢಶಾಲೆ ಗಳಿಗೆ 10 ಸಾವಿರ ಸೇರಿ ಒಟ್ಟು 45 ಸಾವಿರ ಅತಿಥಿ ಶಿಕ್ಷಕರನ್ನು ನೇಮಕಕ್ಕೆ ಶಾಲಾ ಶಿಕ್ಷಣ ಇಲಾಖೆ ಅನುಮತಿ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 35 ಸಾವಿರ ಮತ್ತು ಪ್ರೌಢಶಾಲೆ ಗಳಿಗೆ 10 ಸಾವಿರ ಸೇರಿ ಒಟ್ಟು 45 ಸಾವಿರ ಅತಿಥಿ ಶಿಕ್ಷಕರನ್ನು ನೇಮಕಕ್ಕೆ ಶಾಲಾ ಶಿಕ್ಷಣ ಇಲಾಖೆ ಅನುಮತಿ ನೀಡಿದೆ.

ರಾಜ್ಯದಲ್ಲಿ ಸುಮಾರು 49,679 ಸರ್ಕಾರಿ ಶಾಲೆಗಳಲ್ಲಿ ಹಲವು ಹುದ್ದೆಗಳು ಬಹಳ ಸಮಯದಿಂದ ಖಾಲಿ ಇತ್ತು. ಹೀಗಾಗಿ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಣದ ಗುಣಮಟ್ಟದ ಬಗ್ಗೆ ಹಲವಾರು ಪ್ರಶ್ನೆಗಳನ್ನು ಎದ್ದಿದ್ದವು. ಹೊಸ ಶೈಕ್ಷಣಿಕ ವರ್ಷವು ಈಗಾಗಲೇ ಜೂನ್ ಮೊದಲ ವಾರದಿಂದ ಪ್ರಾರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರ ಹುದ್ದೆ ಭರ್ತಿಗೆ ಅನುಮತಿ ನೀಡಿದೆ.

ಅತಿಥಿ ಉಪನ್ಯಾಸಕರ ನೇಮಕ ವಿಚಾರ ಪ್ರಕ್ರಿಯೆಯನ್ನು ವೇಗಗೊಳಿಸಲು ಶಾಲಾ ಮಟ್ಟದ ನೇಮಕಾತಿಗೆ ನೇಮಿಸಿಕೊಳ್ಳಲು ಶಿಕ್ಷಣ ಇಲಾಖೆಯು ಶಾಲೆಗಳ ಮುಖ್ಯ ಶಿಕ್ಷಕರನ್ನು (ಎಚ್‌ಎಂ) ನಿಯೋಜಿಸಿದೆ.

2024-25ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಕಾಯಂ ಶಿಕ್ಷಕರ ನೇಮಕವಾಗುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಯಾವುದು ಮೊದಲೋ ಅಲ್ಲಿಯವರೆಗೆ ಶಿಕ್ಷಕರ ಕೊರತೆ ನೀಗಿಸಲು ಆದ್ಯತೆ ನೀಡಲಾಗಿದೆ. ಈ ಉದ್ದೇಶದಿಂದ 35 ಸಾವಿರ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅನುಮತಿ ನೀಡಿದೆ.

ಸಂಗ್ರಹ ಚಿತ್ರ
ವೇತನಕ್ಕೆ ಒತ್ತಾಯ: ಮಡಿಕೇರಿಯಲ್ಲಿ ಅತಿಥಿ ಉಪನ್ಯಾಸಕರ ಪ್ರತಿಭಟನೆ 2ನೇ ವಾರಕ್ಕೆ, ವಿದ್ಯಾರ್ಥಿಗಳ ಬೆಂಬಲ

ಖಾಲಿ ಇರುವ 33,863 ಹುದ್ದೆಗಳಿಗೆ ಜಿಲ್ಲಾವಾರು, ತಾಲೂಕುವಾರು ಅತಿಥಿ ಶಿಕ್ಷಕರನ್ನು ಮೊದಲ ಹಂತದಲ್ಲಿ ನೇಮಕ ಮಾಡಿಕೊಳ್ಳಲು ತಿಳಿಸಿದೆ. ಪ್ರೌಢಶಾಲೆಗೆ 10 ಸಾವಿರ ಶಿಕ್ಷಕರು: ಪ್ರೌಢಶಾಲೆಗಳಿಗೆ 10 ಸಾವಿರ ಶಿಕ್ಷಕರ ನೇಮಕಾತಿಗೂ ಸರ್ಕಾರ ಅನುಮತಿ ನೀಡಿದೆ. ಸದ್ಯ ಪ್ರೌಢಶಾಲೆಯಲ್ಲಿ 8,954 ವಿಷಯ ಶಿಕ್ಷಕರ ಕೊರತೆ ಇದೆ. ನೇರ ನೇಮಕಾತಿ, ಬಡ್ತಿ, ವರ್ಗಾವಣೆ ಮೂಲಕ ಭರ್ತಿ ಮಾಡುವವರೆಗೆ ಅಥವಾ ಪ್ರಸಕ್ತ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಯಾವುದು ಮೊದಲೋ ಅಲ್ಲಿಯವರೆಗೂ 8,954 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವಂತೆ ತಿಳಿಸಿದೆ.

ಮಂಜೂರಾದ ಖಾಲಿ ಹುದ್ದೆಗಳಿಗೆ ಅನುಗುಣವಾಗಿ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುವುದು. ಅತಿಥಿ ಶಿಕ್ಷಕರ ನೇಮಕವನ್ನು ಮುಖ್ಯ ಶಿಕ್ಷಕರ ಮೂಲಕವೇ ಮಾಡುವುದು. ಆದ್ಯತೆ ಮೇರೆಗೆ ಗ್ರಾಮೀಣ ಪ್ರದೇಶದಲ್ಲಿನ ಖಾಲಿ ಹುದ್ದೆಗಳಿಗೆ ಹಾಗೂ ಶಿಕ್ಷಕ ರಹಿತ ಶಾಲೆಗಳಿಗೆ/ಹೆಚ್ಚು ವಿದ್ಯಾರ್ಥಿಗಳಿರುವ ಖಾಲಿ ಹುದ್ದೆಗಳಿಗೆ ಮೊದಲ ಆದ್ಯತೆ ನೀಡುವುದು. ವಿಶೇಷವಾಗಿ ಕರ್ನಾಟಕ ಪಬ್ಲಿಕ್ ಶಾಲೆಗಳು, ದ್ವಿಭಾಷಾ, ಆಂಗ್ಲ ಭಾಷಾ ಮಾಧ್ಯಮದ ತರಗತಿಗಳಿರುವ ಶಾಲೆಗಳು ಹಾಗೂ ಆದರ್ಶ ವಿದ್ಯಾಲಯಗಳಲ್ಲಿ ಶೇ.100 ಅತಿಥಿ ಶಿಕ್ಷಕರನ್ನು ನೇಮಕ ಮಾಡಬೇಕು. ಹುದ್ದೆಗೆ ನಿಗದಿಪಡಿಸಿರುವ ಕನಿಷ್ಠ ವಿದ್ಯಾರ್ಹತೆಯನ್ನು ಪರಿಗಣಿಸಿ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳತಕ್ಕದ್ದು.

ಅತಿಥಿ ಶಿಕ್ಷಕರ ಹುದ್ದೆಗಳಿಗೆ ಕಾಯಂಗೊಂಡ ಶಿಕ್ಷಕರು ವರ್ಗಾವಣೆ ಅಥವಾ ನೇಮಕ ಹೊಂದಿದ್ದಲ್ಲಿ ಅತಿಥಿ ಶಿಕ್ಷಕರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸುವುದು. ಬಳಿಕ ತಾಲೂಕಿನಲ್ಲಿ ಅಗತ್ಯಕ್ಕೆ ಅನುಸಾರವಾಗಿ ಹಂಚಿಕೆ ಮಾಡುವುದು. ಗಣಿತ, ವಿಜ್ಞಾನ ಮತ್ತು ಇಂಗ್ಲಿಷ್ ವಿಷಯಗಳ ಶಿಕ್ಷಕರ ನೇಮಕಕ್ಕೆ ಮೊದಲ ಆದ್ಯತೆ ನೀಡಬೇಕು. ಹೆಚ್ಚುವರಿ ಶಿಕ್ಷಕರು ಇರುವ ಶಾಲೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡದಂತೆ ಸೂಚಿಸಲಾಗಿದೆ. ಪ್ರಾಥಮಿಕ ಶಾಲೆಗೆ 10 ಸಾವಿರ ರೂ. ಮತ್ತು ಪ್ರೌಢಶಾಲೆಗೆ 10,500 ರೂ. ಗೌರವಧನ ನಿಗದಿ ಮಾಡಿದೆ.

ಡಿಎಸ್‌ಇಎಲ್‌ನ ಶಿಕ್ಷಣ ಆಯುಕ್ತ ಬಿಬಿ ಕಾವೇರಿ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ವಿಜ್ಞಾನ, ಗಣಿತ ಮತ್ತು ಇಂಗ್ಲಿಷ್‌ಗೆ ನೇಮಕ ಮಾಡಿಕೊಳ್ಳುವಂತೆ ಮನವಿ ಮಾಡಿದ್ದೇವೆ. ಏಕೆಂದರೆ, ಈ ವಿಷಯಗಳಿಗೆ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಗಳಿಗೆ ಹೆಚ್ಚಿನ ಬೋಧನೆಯ ಅಗತ್ಯವಿದೆ. ಮತ್ತೊಂದು ಕಾರಣವೆಂದರೆ ಈ ಮೂರು ವಿಷಯಗಳಲ್ಿ ವಿದ್ಯಾರ್ಥಿಗಳು ಕಡಿಮೆ ಅಂಕ ಗಳಿಸುತ್ತಿರುವುದು ಕಂಡು ಬಂದಿದೆ. ವಿವಿಧ ವಿಷಯಗಳ ಖಾಲಿ ಹುದ್ದೆಗಳು ತಾಲೂಕಿನಿಂದ ತಾಲೂಕಿಗೆ ಬದಲಾಗುತ್ತವೆ. ಸಾರ್ವಜನಿಕ ಶಿಕ್ಷಣದ ಉಪ ನಿರ್ದೇಶಕರು (ಡಿಡಿಪಿಐ) ನೇಮಕಾತಿಗೆ ಜವಾಬ್ದಾರರಾಗಿರುತ್ತಾರೆ. ಹೀಗಾಗಿ ಸಮಯಕ್ಕೆ ಅನುಗುಣವಾಗಿ ನವೀಕರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ನಾಗೇಶ್ ಮಾತನಾಡಿ, ಶಿಕ್ಷಕರ ಮೇಲಿನ ಹೊರೆ ಇಳಿಸುವ ಸರ್ಕಾರದ ಕ್ರಮ ಸ್ವಾಗತಾರ್ಹವಾದರೂ ಇಲಾಖೆ ಖಾಯಂ ಅಧ್ಯಾಪಕರ ನೇಮಕಕ್ಕೆ ಒತ್ತು ನೀಡಬೇಕು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com