ನಮ್ಮ ಮೆಟ್ರೊ
ನಮ್ಮ ಮೆಟ್ರೊ

Namma Metro: ನಾಳೆ ಭಾನುವಾರ ಬೆಳಗ್ಗೆ 6 ಗಂಟೆಗೆ ನಮ್ಮ ಮೆಟ್ರೊ ರೈಲು ಸಂಚಾರ ಆರಂಭ

ವೈಟ್​​ಫೀಲ್ಡ್​ (ಕಾಡುಗೋಡಿ), ಚಲ್ಲಘಟ್ಟ, ನಾಗಸಂದ್ರ ಮತ್ತು ರೇಷ್ಮೆಸಂಸ್ಥೆ ನಿಲ್ದಾಣಗಳಿಂದ ಮೆಟ್ರೋ ರೈಲು ಸೇವೆಗಳು ಬೆಳಗ್ಗೆ 7 ಗಂಟೆ ಬದಲಾಗಿ 6 ಗಂಟೆಗೆ ಪ್ರಾರಂಭವಾಗಲಿದೆ.
Published on

ಬೆಂಗಳೂರು: ನಾಳೆ ಭಾನುವಾರ ಯುಪಿಎಸ್ ಸಿ ಪ್ರಾಥಮಿಕ ಸುತ್ತಿನ ಪರೀಕ್ಷೆ ಇರುವುದರಿಂದ ಪರೀಕ್ಷಾರ್ಥಿಗಳಿಗೆ ಸಂಚರಿಸಲು ಅನುಕೂಲವಾಗಲು ಹಾಗೂ ಸಾಮಾನ್ಯ ನಾಗರಿಕರ ಅನುಕೂಲಕ್ಕೆಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಎಲ್ಲ ನಿಲ್ದಾಣಗಳಿಂದ ಬೆಳಗ್ಗೆ ಒಂದು ಗಂಟೆ ಮುಂಚಿತವಾಗಿ ರೈಲು ಸೇವೆ ಆರಂಭವಾಗಲಿದೆ ಎಂದು ಬಿಎಂಆರ್​ಸಿಎಲ್​​ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ವೈಟ್​​ಫೀಲ್ಡ್​ (ಕಾಡುಗೋಡಿ), ಚಲ್ಲಘಟ್ಟ, ನಾಗಸಂದ್ರ ಮತ್ತು ರೇಷ್ಮೆಸಂಸ್ಥೆ ನಿಲ್ದಾಣಗಳಿಂದ ಮೆಟ್ರೋ ರೈಲು ಸೇವೆಗಳು ಬೆಳಗ್ಗೆ 7 ಗಂಟೆ ಬದಲಾಗಿ 6 ಗಂಟೆಗೆ ಪ್ರಾರಂಭವಾಗಲಿದೆ. ಪ್ರಯಾಣಿಕರು ಮತ್ತು ಪರೀಕ್ಷಾರ್ಥಿಗಳು ಈ ಸೇವೆಯ ಪ್ರಯೋಜನ ಪಡೆದುಕೊಳ್ಳುವಂತೆ ಬಿಎಂಆರ್​ಸಿಎಲ್​​ ಕೋರಿದೆ.

ಬೆಂಗಳೂರು ನಗರದ ಸಂಚಾರ ದಟ್ಟಣೆ, ವಾಹನಗಳ ಕಿರಿಕಿರಿ, ಸಂಚಾರ ವೆಚ್ಚದ ದೃಷ್ಟಿಯಿಂದ ವಾಹನ ಇರುವವರು ಅನೇಕರು ನಿತ್ಯ ಕಚೇರಿಗಳಿಗೆ ಹೋಗಲು ಮತ್ತು ಕೆಲಸ ಕಾರ್ಯಗಳಿಗೆ ಸಂಚರಿಸಲು ಮೆಟ್ರೊ ರೈಲನ್ನು ಹೆಚ್ಚು ನೆಚ್ಚಿಕೊಂಡಿದ್ದಾರೆ. ನಗರದ ಟ್ರಾಫಿಕ್​ ಸಮಸ್ಯೆಯನ್ನು ಕಡಿಮೆ ಮಾಡಲು ಮೆಟ್ರೊದ ಹಳದಿ ಮಾರ್ಗ ಪ್ರಾರಂಭಿಸಲಾಗುತ್ತಿದೆ. ಹಳದಿ ಮಾರ್ಗದ ಪ್ರಯೋಗ ಸಂಚಾರ ಆರಂಭವಾಗಿದೆ.

ಬೆಂಗಳೂರು ಮೆಟ್ರೋ ಹಳದಿ ಮಾರ್ಗ ಆರ್.ವಿ. ರಸ್ತೆ ನಿಲ್ದಾಣದಿಂದ ಬೊಮ್ಮಸಂದ್ರ ನಿಲ್ದಾಣ ನಡುವಿನ ಮಾರ್ಗದಲ್ಲಿ ಪರೀಕ್ಷಾರ್ಥ ರೈಲು ಸಂಚಾರ ಆರಂಭವಾಗಿದೆ. 18.82 ಕಿ.ಮೀ ಉದ್ದದ ಈ ಮಾರ್ಗದಲ್ಲಿ 16 ನಿಲ್ದಾಣಗಳಿವೆ.

ಜುಲೈ ಅಂತ್ಯಕ್ಕೆ ನಾಗಸಂದ್ರ-ಮಾದಾವರ ನಡುವಿನ ಮೆಟ್ರೋ ಸಂಚಾರ ಆರಂಭ?: ಮೆಟ್ರೊ ಕಾರಿಡಾರ್​ನ ನಾಗಸಂದ್ರ ಹಾಗೂ ಮಾದಾವರದ ನಡುವಿನ 3.7 ಕಿಮೀ ಮಾರ್ಗ ಕಾಮಗಾರಿ ಅಂತಿಮ ಹಂತ ತಲುಪಿದ್ದು ಜುಲೈ ಅಂತ್ಯದ ವೇಳೆಗೆ ಕಾಮಗಾರಿ ಪೂರ್ಣಗೊಂಡು ಮೆಟ್ರೋ ಸಂಚಾರ ಆರಂಭವಾಗಲಿದೆ ಎಂದು ಹೇಳಲಾಗುತ್ತಿದೆ.

ಈ ಮಾರ್ಗದಲ್ಲಿ ಮಂಜುನಾಥ ನಗರ, ಚಿಕ್ಕಬಿದರಕಲ್ಲು ಹಾಗೂ ಮಾದಾವರದ ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರ (BIEC) ಮೆಟ್ರೋ ನಿಲ್ದಾಣಗಳಿವೆ.

X

Advertisement

X
Kannada Prabha
www.kannadaprabha.com