ರಾಮನಗರ: ರಾಜ್ಯದ ಹಲವು ಸಮಸ್ಯೆಗಳ ಪರಿಹಾರಕ್ಕೆ ಪ್ರಮಾಣಿಕ ಯತ್ನ ಮಾಡುವ ಮೂಲಕ ರಾಜ್ಯದ ಅಭಿವೃದ್ದಿಗೆ ಆದ್ಯತೆ ಮೇಲೆ ಕ್ರಮ ವಹಿಸುವೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆಯ ಸಚಿವ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.
ಚನ್ನಪಟ್ಟಣ ತಾಲ್ಲೂಕಿನ ವಿವಿಧ ಇಲಾಖೆಗಳ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದ ಅಭಿವೃದ್ಧಿ ಅದರಲ್ಲೂ ನಿರುದ್ಯೋಗ ಸಮಸ್ಯೆ ನಿವಾರಣೆಗೆ ತಮ್ಮ ಖಾತೆಯಲ್ಲಿ ಸಾಕಷ್ಟು ಉದ್ಯೋಗಾವಕಾಶಗಳ ಸೃಷ್ಟಿಗೆ ಅವಕಾಶವಿದೆ. ಐಟಿಐ, ಮೆಕ್ಯಾನಿಕ್, ಕಂಪ್ಯೂಟರ್ ಇಂಜಿನಿಯರಿಂಗ್ ಮಾಡಿದ ವಿದ್ಯಾರ್ಥಿಗಳು ರಾಜ್ಯದಿಂದ ಹೊರ ರಾಜ್ಯಕ್ಕೂ ಹೋಗಿ ಕೆಲಸಮಾಡುವ ನಿರ್ಧಾರ ಮಾಡಬೇಕು. ಅದಕ್ಕಾಗಿ ಮಾನಸಿಕವಾಗಿ ಸಿದ್ದರಾಗಬೇಕು ಎಂದು ಹೇಳಿದ ಅವರು, ರೈತರ ಆತ್ಮಹತ್ಯೆ ಸೇರಿದಂತೆ ರಾಜ್ಯದ ಹಲವು ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಯತ್ನ ಮಾಡುವೆ ಎಂದು ತಿಳಿಸಿದರು.
ರಾಮನಗರ ಜಿಲ್ಲಾಸ್ಪತ್ರೆಗೆ ಮುಂಬರುವ ದಿನಗಳಲ್ಲಿ ಎಂ.ಆರ್.ಐ ಸ್ಕ್ಯಾನಿಂಗ್ ವ್ಯವಸ್ಥೆ ಒದಗಿಸಲಾಗುವುದು. ಅದಕ್ಕೂ ಮುನ್ನು ಸಿಟಿ ಸ್ಕ್ಯಾನಿಂಗ್ ಯಂತ್ರವನ್ನು ಜಿಲ್ಲಾಸ್ಪತ್ರೆಯಲ್ಲಿ ಅಳವಡಿಸಲಾಗುವುದು. ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಇನ್ನೂ 100 ಹಾಸಿಗೆಗಳ ಹೆಚ್ಚುವರಿಯಾಗಿ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗಿದೆ. ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಚನ್ನಪಟ್ಟಣದ ಯುಜಿಡಿ ಕಾಮಗಾರಿಗೆ 98 ಕೋಟಿ ರೂ.ಗಳ ಅನುದಾನ ಮಂಜೂರು ಮಾಡಲಾಗಿದ್ದು, ಅದು ಈಗ ನೆರವೇರುತ್ತಿದೆ. ನನ್ನ ವೇಗಕ್ಕೆ ಅಧಿಕಾರಿಗಳು ಕೆಲಸ ಮಾಡಲು ಸಿದ್ಧರಾಗಬೇಕು ಎಂದು ತಿಳಿಸಿದರು.

Advertisement