ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 17 ರಂದು ಸಿಐಡಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಶನಿವಾರ ಹೇಳಿದ್ದಾರೆ.
ಇಂದು ನಗರಕ್ಕೆ ಆಗಮಿಸಿದ ಮಾಜಿ ಸಿಎಂ, ತಮ್ಮ ವಿರುದ್ಧ ಷಡ್ಯಂತ್ರ ನಡೆಸುತ್ತಿರುವವರಿಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ಸಿಐಡಿಗೆ ಸೂಚಿಸಿದೆ. ಅಲ್ಲದೆ
ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಮುಂದೆ ಜೂನ್ 17 ರಂದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಿಎಂ ಸೂಚಿಸಿದೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, "ನಾನು ಪೂರ್ವ ನಿಗದಿತ ಕಾರ್ಯಕ್ರಮಕ್ಕಾಗಿ ದೆಹಲಿಗೆ ಹೋಗಿದ್ದೆ. ಜೂನ್ 17 ರಂದು ವಿಚಾರಣೆಗೆ ಹಾಜರಾಗುವುದಾಗಿ ಲಿಖಿತವಾಗಿ ಮೊದಲೇ ತಿಳಿಸಿದ್ದೆ. ಸಿಐಡಿಗೆ ಬಂಧಿಸದಂತೆ ಹೈಕೋರ್ಟ್ ಆದೇಶಿಸಿದೆ. ಸೋಮವಾರ ವಿಚಾರಣೆಗೆ ಹಾಜರಾಗುತ್ತೇನೆ. ಅನಗತ್ಯವಾಗಿ ಕೆಲವರು ಗೊಂದಲ ಸೃಷ್ಟಿಸಲು ಯತ್ನಿಸಿದ್ದಾರೆ. ನಾನು ಯಾರನ್ನೂ ದೂಷಿಸಲು ಬಯಸುವುದಿಲ್ಲ. ಎಲ್ಲರಿಗೂ ಸತ್ಯ ತಿಳಿದಿದೆ. ಪಿತೂರಿ ನಡೆಸುತ್ತಿರುವವರಿಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಈ ವರ್ಷ ಮಾರ್ಚ್ 14 ರಂದು ಮಕ್ಕಳ ಲೈಂಗಿಕ ಅಪರಾಧಗಳ ರಕ್ಷಣೆ(ಪೋಕ್ಸೋ) ಕಾಯ್ದೆಯಡಿ ಯಡಿಯೂರಪ್ಪ ವಿರುದ್ಧ ದಾಖಲಾಗಿದೆ. ಈ ಪ್ರಕರಣ ಸಂಬಂಧ ಗುರುವಾರ ಕೋರ್ಟ್ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿತ್ತು.
Advertisement