ಬೆಂಗಳೂರು: 3,843 ಅನಧಿಕೃತ ಫ್ಲೆಕ್ಸ್-ಬ್ಯಾನರ್‌ಗಳ ತೆರವು, 48 FIR ದಾಖಲು

ನಗರದಲ್ಲಿ ಅನಧಿಕೃತ ಫ್ಲೆಕ್ಸ್​​ಗಳ ವಿರುದ್ಧ ಬಿಬಿಎಂಪಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಜೂನ್‌ 1ರಿಂದ 3,843 ಅನಧಿಕೃತ ಫ್ಲೆಕ್ಸ್/ಬ್ಯಾನರ್‌, ಎಲ್​​ಇಡಿ ಹಾಗೂ ಹೋರ್ಡಿಂಗ್ಸ್​ಗಳನ್ನು ತೆರವುಗೊಳಿಸಿದೆ.
ಅನಧಿಕೃತ ಫ್ಲೆಕ್ಸ್
ಅನಧಿಕೃತ ಫ್ಲೆಕ್ಸ್

ಬೆಂಗಳೂರು: ನಗರದಲ್ಲಿ ಅನಧಿಕೃತ ಫ್ಲೆಕ್ಸ್​​ಗಳ ವಿರುದ್ಧ ಬಿಬಿಎಂಪಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಜೂನ್‌ 1ರಿಂದ 3,843 ಅನಧಿಕೃತ ಫ್ಲೆಕ್ಸ್/ಬ್ಯಾನರ್‌, ಎಲ್​​ಇಡಿ ಹಾಗೂ ಹೋರ್ಡಿಂಗ್ಸ್​ಗಳನ್ನು ತೆರವುಗೊಳಿಸಿದೆ,

ಅನಧಿಕೃತ ಫ್ಲೆಕ್ಸ್, ಬ್ಯಾನರ್ ಹಾಕಿದ್ದವರಿಗೆ ಒಟ್ಟು ರೂ.75 ಸಾವಿರ ದಂಡ ವಿಧಿಸಲಾಗಿದೆ. ಆರ್.ಆರ್.ನಗರ ವಲಯದಲ್ಲಿ ರೂ.50 ಸಾವಿರ, ಪಶ್ಚಿಮ ವಲಯದಲ್ಲಿ ರೂ.25 ಸಾವಿರ ದಂಡ ವಿಧಿಸಲಾಗಿದೆ. ಮಹದೇವಪುರದಲ್ಲಿ ಅತಿಹೆಚ್ಚು (2399) ಫ್ಲೆಕ್ಸ್‌ ತೆರವುಗೊಳಿಸಲಾಗಿದೆ. ಪಶ್ಚಿಮ ವಲಯದಲ್ಲಿ 23 ದೂರುಗಳು ದಾಖಲಾಗಿವೆ ಎಂದು ಪ್ರಕಟಣೆ ತಿಳಿಸಿದೆ.

ಅನಧಿಕೃತ ಫ್ಲೆಕ್ಸ್
ಕಸದಿಂದ ವಿದ್ಯುತ್‌ ಉತ್ಪಾದನೆ ಘಟಕ: ಕಾಮಗಾರಿ ಪರಿಶೀಲಿಸಿದ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್

ನಗರದ ರಸ್ತೆ ಬದಿ, ಪಾದಚಾರಿ ಮಾರ್ಗ, ಮೇಲುಸೇತುವೆ ಸೇರಿದಂತೆ ಇನ್ನಿತರೆ ಕಡೆ ಅನಧಿಕೃತವಾಗಿ ಪ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ಅಳವಡಿಸುವುದರಿಂದ ನಾಗರಿಕರ ಸುಗಮ ಸಂಚಾರಕ್ಕೆ ಅಡ್ಡಿಯಾಗುವುದರ ಜೊತೆಗೆ ನಗರದ ಸೌಂದರ್ಯ ಹಾಳಾಗುತ್ತಿದೆ. ಅಲ್ಲದೆ ಪರಿಸರಕ್ಕೆ ಮಾರಕವಾಗಿರುತ್ತದೆ. ದೂರವಾಣಿ 1,533ಗೆ ಕರೆ ಮಾಡಿ ಅಥವಾ ವಾಟ್ಸಾಪ್ ಸಂಖ್ಯೆ 9480683939 ಗೆ ಛಾಯಾಚಿತ್ರದ ಸಮೇತ ದೂರು ನೀಡಬೇಕು ಎಂದು ಹೇಳಿದೆ.

ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳ ಕುರಿತು ನಾಗರಿಕರು ಪಾಲಿಕೆ ಸಹಾಯವಾಣಿ ಸಂಖ್ಯೆ 1533 ಅಥವಾ ಜಾಹೀರಾತು ವಿಭಾಗದ ವ್ಯಾಟ್ಸಾಪ್ ಸಂಖ್ಯೆ 9480683939 ಗೆ ಛಾಯಾಚಿತ್ರ ಅಥವಾ ವೀಡಿಯೋ ಮಾಡಿ ವಿಳಾಸ ಸಹಿತ ಕಳುಹಿಸಿದಲ್ಲಿ ಪಾಲಿಕೆ ವತಿಯಿಂದ ಕೂಡಲೇ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು. ಬ್ಯಾನರ್ ಅಳವಡಿಸುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಅದರಂತೆ ಇದುವರೆಗೆ ಪೊಲೀಸ್ ಠಾಣೆಯಲ್ಲಿ 76 ದೂರುಗಳನ್ನು‌ ನೀಡಿದ್ದು, 48 ಎಫ್‌ಐಆರ್ ದಾಖಲಿಸಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ ಅನಧಿಕೃತ ಜಾಹೀರಾತುಗಳು ಇರದಂತೆ ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ. ಅದರಂತೆ ಮುಖ್ಯ ಆಯುಕ್ತರು ಸೂಚನೆ ನೀಡಿದ್ದಾರೆ ಎಂದು ಪಾಲಿಕೆ ಮಾಹಿತಿ ನೀಡಿದೆ.

ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಸೇರಿದಂತೆ ಎಲ್ಲಾ 8 ವಲಯಗಳ ಅಧಿಕಾರಿಗಳ ಜೊತೆ ಪ್ರತಿನಿತ್ಯ ಪರಿಶೀಲನಾ ಸಭೆ ನಡೆಸುತ್ತಿದ್ದು, ಯಾವುದೇ ಅನಧಿಕೃತ ಜಾಹೀರಾತುಗಳು ಇರದಂತೆ ಸೂಚನೆ ನೀಡುವ ಜೊತೆಗೆ ಅನಧಿಕೃತವಾಗಿ ಫ್ಲೆಕ್ಸ್/ಬ್ಯಾನರ್ಸ್ ಹಾಕುವವರ ಮೇಲೆ ಎಫ್​​ಐಆರ್ ದಾಖಲಿಸಲು ಸೂಚಿಸಿದ್ದಾರೆ ಎಂದು ಪಾಲಿಕೆ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com