ಬೆಳಗಾವಿ ಮಕ್ಕಳ ಮಾರಾಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಭ್ರೂಣಹತ್ಯೆಯಲ್ಲಿ ತೊಡಗಿದ್ದ ನಕಲಿ ವೈದ್ಯ, ತನಿಖೆಯಲ್ಲಿ ಬಯಲು!

ಬೆಳಗಾವಿಯ ಕಿತ್ತೂರಿನಲ್ಲಿ ನಡೆದ ಮಕ್ಕಳ ಮಾರಾಟ ಪ್ರಕರಣದ ನಕಲಿ ವೈದ್ಯನ ಮತ್ತೊಂದು ಕರಾಳಮುಖ ಬಯಲಾಗಿದೆ. ಭ್ರೂಣಹತ್ಯೆ ಮಾಡಿ ಅವುಗಳನ್ನು ತೋಟದಲ್ಲಿ ಹೂತಿಟ್ಟಿದ್ದ ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.
ನಕಲಿ ವೈದ್ಯ
ನಕಲಿ ವೈದ್ಯ
Updated on

ಬೆಳಗಾವಿ: ಬೆಳಗಾವಿಯ ಕಿತ್ತೂರಿನಲ್ಲಿ ನಡೆದ ಮಕ್ಕಳ ಮಾರಾಟ ಪ್ರಕರಣದ ನಕಲಿ ವೈದ್ಯನ ಮತ್ತೊಂದು ಕರಾಳಮುಖ ಬಯಲಾಗಿದೆ. ಭ್ರೂಣಹತ್ಯೆ ಮಾಡಿ ಅವುಗಳನ್ನು ತೋಟದಲ್ಲಿ ಹೂತಿಟ್ಟಿದ್ದ ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.

ನಕಲಿ ವೈದ್ಯ ಅಬ್ದುಲ್ ಗಫಾರ್ ಲಾಡಖಾನ್ ನಿಂದ ಭ್ರೂಣ ಹತ್ಯೆ ನಡೆಯುತ್ತಿತ್ತು ಎಂಬ ಮಾಹಿತಿ ತಿಳಿದುಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಸೂಚನೆ ಮೇರೆಗೆ ಕಿತ್ತೂರು ಪೊಲೀಸರು ಅಬ್ದುಲ್ ಗಾಫರ್ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಭ್ರೂಣಹತ್ಯೆ ಮಾಡಿ ಹೋತಿಟ್ಟಿರುವುದು ಪತ್ತೆಯಾಗಿದೆ.

ಅಬ್ದುಲ್ ಗಾಫರ್ ತೋಟದಲ್ಲಿ ಮೂರು ಭ್ರೂಣಗಳ ಕಳೇಬರ ಪತ್ತೆಯಾಗಿದೆ. ಪೊಲೀಸರು ಕಳೇಬರ ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ. ಇದೇ ವೇಳೆ ಅಬ್ದುಲ್ ಗಾಫರ್ ಸಹಾಯಕ ರೋಹಿತ್ ಕುಪ್ಪಸಗ್ಪುಡರ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ನಕಲಿ ವೈದ್ಯ
ಭ್ರೂಣಹತ್ಯೆ ಜಾಲ: ವೈದ್ಯಕೀಯ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಕರ್ನಾಟಕ ಸರ್ಕಾರ ಕಠಿಣ ಕ್ರಮ

ಅಬ್ದುಲ್​ ಗಫಾರ್​ ಲಾಡಖಾನ್ ಬಳಿ ರೋಹಿತ್ ಹಲವು ವರ್ಷಗಳಿಂದ ಸಹಾಯಕನಾಗಿ ಕೆಲಸ ಮಾಡುತ್ತಿದ್ದನು. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಡಿಎಚ್ಒ ಡಾ.ಮಹೇಶ ಕೋಣಿ, ಎಸಿ ಪ್ರಭಾವತಿ ಫಕೀರಪುರ, ಬೈಲಹೊಂಗಲ ಡಿವೈಎಸ್‌ಪಿ ರವಿ ನಾಯಕ್, ಮೂವರು ಸಿಪಿಐ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ನಕಲಿ ವೈದ್ಯ ಅಬ್ದುಲ್​ ಗಫಾರ್​ ಲಾಡಖಾನ್ ಸೇರಿದಂತೆ ಐವರು ಆರೋಪಿಗಳು ಮದುವೆಗೂ ಮುನ್ನ ಗರ್ಭಿಣಿಯಾಗಿ ಗರ್ಭಪಾತ ಮಾಡಿಸಬೇಕು ಎನ್ನುವ ಯುವಕತಿಯರನ್ನು ಗುರಿ ಮಾಡಿಕೊಳ್ಳುತ್ತಿದ್ದರು ಎನ್ನಲಾಗಿದೆ.

ಆರೋಪಿಗಳು 7-8 ತಿಂಗಳ ಗರ್ಭಿಣಿಯರ ಆಪರೇಷನ್ ಮಾಡಿ, ಮಗು ರಕ್ಷಣೆ ಮಾಡಿ ತಾವೇ ಸಾಕುವುದಾಗಿ ಹೇಳಿ ಮಗುವನ್ನು ಮಕ್ಕಳಿಲ್ಲದವರಿಗೆ ಹಣಕ್ಕಾಗಿ ಮಾರಾಟ ಮಾಡಿ ಹಣ ಮಾಡುತ್ತಿದ್ದರು. ಈ ಮಕ್ಕಳ ಮಾರಾಟ ಜಾಲವನ್ನು ಪತ್ತೆ ಮಾಡಿ ಪೊಲೀಸರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದರು. ತನಿಖೆ ವೇಳೆ ಮಕ್ಕಳ ಮಾರಾಟ ಮಾಡುತ್ತಿದ್ದ ಆರೋಪಿ ನಕಲಿ ವೈದ್ಯ ಅಬ್ದುಲ್​ ಗಫಾರ್​ ಲಾಡಖಾನ್, ಭ್ರೂಣ ಹತ್ಯೆ ಕೂಡ ಮಾಡಿದ್ದಾನೆಂಬುದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com