ರೇಣುಕಾಸ್ವಾಮಿಗೆ ಎಲೆಕ್ಟ್ರಿಕ್ ಶಾಕ್ ಕೊಟ್ಟು ಕೊಂದ ಡಿ ಗ್ಯಾಂಗ್: ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಯಲು!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ದರ್ಶನ್ ಮತ್ತು ಅವರ ಗ್ಯಾಂಗ್​ ರೇಣುಕಾ ಸ್ವಾಮಿಯನ್ನು ಹತ್ಯೆ ಮಾಡುವುದಕ್ಕೂ ಮುನ್ನ ರಾಕ್ಷಸರ ರೀತಿ ಚಿತ್ರಹಿಂಸೆ ಕೊಟ್ಟಿದ್ದರು ಎಂಬುದು ಇದೀಗ ಬೆಳಕಿಗೆ ಬಂದಿದೆ.
ನಟ ದರ್ಶನ್ ಮತ್ತು ರೇಣುಕಾಸ್ವಾಮಿ (ಸಂಗ್ರಹ ಚಿತ್ರ)
ನಟ ದರ್ಶನ್ ಮತ್ತು ರೇಣುಕಾಸ್ವಾಮಿ (ಸಂಗ್ರಹ ಚಿತ್ರ)
Updated on

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ದರ್ಶನ್ ಮತ್ತು ಅವರ ಗ್ಯಾಂಗ್​ ರೇಣುಕಾ ಸ್ವಾಮಿಯನ್ನು ಹತ್ಯೆ ಮಾಡುವುದಕ್ಕೂ ಮುನ್ನ ರಾಕ್ಷಸರ ರೀತಿ ಚಿತ್ರಹಿಂಸೆ ಕೊಟ್ಟಿದ್ದರು ಎಂಬುದು ಇದೀಗ ಬೆಳಕಿಗೆ ಬಂದಿದೆ.

ನಿನ್ನೆ ದರ್ಶನ್ ಮತ್ತು ಗ್ಯಾಂಗ್ ಅನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾಗ ನಡೆದ ವಾದ ವಿವಾದದಲ್ಲಿ ದರ್ಶನ್ ಮತ್ತು ಗ್ಯಾಂಗ್​ ರೇಣುಕಾ ಸ್ವಾಮಿಗೆ ನೀಡಿದ್ದ ರಾಕ್ಷಸ ರೀತಿಯ ಚಿತ್ರಹಿಂಸೆಯ ವಿವರ ಹೊರಬಿದ್ದಿದೆ.

ದರ್ಶನ್ ಮತ್ತು ಗ್ಯಾಂಗ್ ಅನ್ನು ಮತ್ತೆ ಒಂಬತ್ತು ದಿನಗಳ ಕಾಲ ವಶಕ್ಕೆ ಕೋರಿ ಪೊಲೀಸರು ಅರ್ಜಿ ಸಲ್ಲಿಸಿದ್ದರು. ನೃಪತುಂಗ ರಸ್ತೆಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು, ಈ ಹಂತದಲ್ಲಿ ಸರ್ಕಾರದ ವತಿಯಿಂದ ವಿಶೇಷ ಅಭಿಯೋಜಕರಾಗಿ ನೇಮಕವಾಗಿರುವ ಪ್ರಸನ್ನ ಕುಮಾರ್ ಅವರು ಪೊಲೀಸರ ಪರ ವಾದ ಮಂಡಿಸಿ, ನ್ಯಾಯಾಲಯದ ಗಮನಕ್ಕೆ ತಂದ ಅಂಶವೆಂದರೆ ರೇಣುಕಾ ಸ್ವಾಮಿಯನ್ನು ಕೊಲ್ಲುವ ಮುಂಚೆ ಆತನಿಗೆ ಕರೆಂಟ್ ಶಾಕ್ ನೀಡಲಾಗಿತ್ತು ಎಂಬುದು.

ನ್ಯಾಯಾಲಯದಲ್ಲಿ ದರ್ಶನ್ ಹಾಗೂ ಗ್ಯಾಂಗ್​ನ ಕ್ರೂರತೆಯ ಬಗ್ಗೆ ಸಣ್ಣ ಸುಳಿವೊಂದನ್ನು ನೀಡಿದ ಹಿರಿಯ ವಕೀಲ ಪ್ರಸನ್ನ ಕುಮಾರ್ ಅವರು ರೇಣುಕಾ ಸ್ವಾಮಿಗೆ ಕರೆಂಟ್ ಶಾಕ್ ನೀಡಲಾಗಿದ್ದು, ಆ ಕರೆಂಟ್ ಶಾಕ್ ನೀಡಲು ಬಯಸಿದ್ದ ಮೆಗ್ಗರ್ ಯಂತ್ರವನ್ನು ಸಹ ವಶಪಡಿಸಿಕೊಳ್ಳಬೇಕಿದೆ ಎಂದು ಮಾಹಿತಿ ನೀಡಿದ್ದರು. ಅಲ್ಲದೆ, ಮೈಸೂರಿನಲ್ಲಿ ಕೆಲವು ಕಡೆ ಆರೋಪಿಯೊಟ್ಟಿಗೆ ಮಹಜರು ಮಾಡಬೇಕಿದೆ. ಆರೋಪಿಯ ಬಟ್ಟೆ ಹಾಗೂ ಚಪ್ಪಲಿಗಳನ್ನು ಸಹ ವಶಪಡಿಸಿಕೊಳ್ಳಬೇಕಿದೆ ಎಂದು ಸಹ ವಾದಿಸಿದ್ದಾರೆ.

ನಟ ದರ್ಶನ್ ಮತ್ತು ರೇಣುಕಾಸ್ವಾಮಿ (ಸಂಗ್ರಹ ಚಿತ್ರ)
ಅಪ್ಪ ನೀವೇ ನನ್ನ ಹೀರೋ: 'ಫಾದರ್ಸ್ ಡೇ' ಹಿನ್ನೆಲೆ ದರ್ಶನ್​ ನೆನೆದು ಮಗ ವಿನೀಶ್​ ಭಾವುಕ ಪೋಸ್ಟ್​!

ರೇಣುಕಾಸ್ವಾಮಿ ಅವರ ಶವದ ಗುರುತು ಸಿಗದಂತೆ ಮಾಡಲು 30 ಲಕ್ಷ ರೂಪಾಯಿ ಆಮಿಷ ಒಡ್ಡಲಾಗಿತ್ತು. ಇದನ್ನು ವಶಪಡಿಸಿಕೊಳ್ಳಲಾಗಿದೆ. 10 ಮೊಬೈಲ್‌ಗಳನ್ನು ಜಪ್ತಿ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಸಿ ಡಿ ಯನ್ನು ನ್ಯಾಯಾಲಯ ಪರಿಶೀಲಿಸಬಹುದಾಗಿದೆ. 5 ಮತ್ತು 13ನೇ ಆರೋಪಿಗಳು ರೇಣುಕಾಸ್ವಾಮಿಗೆ ಎಲೆಕ್ಟ್ರಿಕ್‌ ಶಾಕ್‌ ನೀಡಿದ್ದಾರೆ. ಇದಕ್ಕೆ ಬಳಕೆ ಮಾಡಿರುವ ವಸ್ತುವನ್ನು ವಶಪಡಿಸಿಕೊಳ್ಳಬೇಕಿದೆ. ಇನ್ನೂ ಹೆಚ್ಚಿನ ತನಿಖೆ ನಡೆಸುವ ಅಗತ್ಯ ಇರುವುದರಿಂದ 9 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಬೇಕು ಎಂದು ಕೋರಿದರು. ದರ್ಶನ್‌ ಪರವಾಗಿ ವಕೀಲ ಅನಿಲ್‌ ಬಾಬು ವಕಾಲತ್ತು ಹಾಕಿದ್ದು, ಪೊಲೀಸ್‌ ಕಸ್ಟಡಿಗೆ ನೀಡುವುದಕ್ಕೆ ಆಕ್ಷೇಪಿಸಿದರು.

ಈ ನಡುವೆ ಪ್ರಕರಣ ಸಂಬಂಧ ಕೆಲವು ಆರೋಪಿಗಳು, ರೇಣುಕಾ ಸ್ವಾಮಿ ಕೊಲೆಯಾದ ದಿನ ನಡೆದ ಘಟನೆಗಳನ್ನು ಈಗಾಗಲೇ ವಿವರಿಸಿದ್ದು, ಕೆಲವರು ಅಪ್ರೂವರ್ ಆಗಿ ಸಹ ಬದಲಾಗಿದ್ದಾರೆ ಎನ್ನಲಾಗುತ್ತಿದೆ.

ಏನಿದು ಪ್ರಕರಣ?

ದರ್ಶನ್‌ ಗೆಳತಿ ಪವಿತ್ರ ಗೌಡಗೆ ಇನ್‌ಸ್ಟಾಗ್ರಾಂನಲ್ಲಿ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಆರೋಪದ ಮೇಲೆ ಚಿತ್ರದುರ್ಗದ ರೇಣುಕಾಸ್ವಾಮಿ ಅವರನ್ನು ಜೂನ್‌ 8ರಂದು ಬೆಂಗಳೂರಿಗೆ ಕರೆಸಿ, ಪಟ್ಟಣಗೆರೆಯ ವಾಹನಗಳನ್ನು ನಿಲ್ಲಿಸುವ ಖಾಸಗಿ ಶೆಡ್‌ ಒಂದರಲ್ಲಿ ಅವರ ಮೇಲೆ ಹಲ್ಲೆ ಮಾಡಿ ಕೊಲೆಗೈದಿರುವ ಆರೋಪ ದರ್ಶನ್‌ ಮತ್ತು ಸಹಚರರ ಮೇಲಿದೆ. ಆನಂತರ ಶವವನ್ನು ತಡರಾತ್ರಿ ಕಾಮಾಕ್ಷಿ ಪಾಳ್ಯ ಸಮೀಪದ ರಾಜಕಾಲುವೆಯಲ್ಲಿ ಎಸೆಯಲಾಗಿತ್ತು ಎಂದು ಆರೋಪಿಲಾಗಿದೆ.

ಸ್ಥಳೀಯರಿಂದ ಅನಾಥ ಶವದ ಬಗ್ಗೆ ಕಾಮಾಕ್ಷಿ ಪಾಳ್ಯ ಪೊಲೀಸರಿಗೆ ಮಾಹಿತಿ ದೊರೆತಿತ್ತು. ಸ್ಥಳಕ್ಕೆ ಧಾವಿಸಿದ ಪೊಲೀಸರು ಪ್ರಕರಣ ಭೇದಿಸಿ, ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿದ್ದ ದರ್ಶನ್‌ ಅವರನ್ನು ಬಂಧಿಸಿದ್ದರು. ಅಂದೇ ಮೊದಲ ಆರೋಪಿ ಪವಿತ್ರ ಗೌಡರನ್ನು ಬಂಧಿಸಿದ್ದರು. ಇಡೀ ಪ್ರಕರಣದ ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆಯಾಗಿದೆ ಎನ್ನಲಾಗಿದೆ.

ಆರೋಪಿಗಳ ವಿರುದ್ದ ಐಪಿಸಿ ಸೆಕ್ಷನ್‌ಗಳಾದ 302 (ಕೊಲೆ), 201, 120ಬಿ (ಪಿತೂರಿ) ಮತ್ತು 34ರ ಅಡಿ ಪ್ರಕರಣ ದಾಖಲಿಸಲಾಗಿದೆ.

ನಟ ದರ್ಶನ್ ಮತ್ತು ರೇಣುಕಾಸ್ವಾಮಿ (ಸಂಗ್ರಹ ಚಿತ್ರ)
ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಗೌಡ ನಟ ದರ್ಶನ್ ಪತ್ನಿ ಅಲ್ಲ- ವಕೀಲರ ಸ್ಪಷ್ಪನೆ

ಮೈಮೇಲಿದ್ದ ಚಿನ್ನಾಭರಣ ದೋಚಿದ್ದ ಗ್ಯಾಂಗ್

ರೇಣುಕಾಸ್ವಾಮಿಗೆ ಚಿತ್ರ ಹಿಂಸೆ ನೀಡಿ ಕಲೆ ಮಾಡಿದ ದುಷ್ಕರ್ಮಿಗಳು ಬಳಿಕ ಆತನ ಮೈಮೇಲಿದ್ದ ಒಡವೆಗಳನ್ನೂ ದೋಚಿರುವುದು ತನಿಖೆಯ ವೇಳೆ ಬೆಳಕಿಗೆ ಬಂದಿದೆ.

ರೇಣುಕಾಸ್ವಾಮಿ ಬರ್ಬರ ಕೊಲೆಯ ಬಳಿಕ ಅವರ ಮೈಮೇಲಿದ್ದ ಚಿನ್ನಾಭರಣವನ್ನು ಕಳವು ಮಾಡಲಾಗಿದೆ. ಪೊಲೀಸರ ತನಿಖೆ ವೇಳೆ ಈ ಸ್ಫೋಟಕ ಮಾಹಿತಿಯನ್ನು ಆರೋಪಿ ರವಿ ಬಾಯ್ಬಿಟ್ಟಿದ್ದಾನೆ. ರೇಣುಕಾಸ್ವಾಮಿ ಮೈಮೇಲಿದ್ದ ಚಿನ್ನವನ್ನು ಆರೋಪಿ ಜಗ್ಗ ದೋಚಿದ್ದಾನೆ ಎಂದು ಪೊಲೀಸರ ಮುಂದೆ ರವಿ ಸತ್ಯ ಬಾಯಿ ಬಿಟ್ಟಿದ್ದಾನೆ.

ಸುಮ್ಮನಹಳ್ಳಿ ಬಳಿ ರೇಣುಕಾಸ್ವಾಮಿ ಶವವನ್ನ ಎಸೆದು ಬಳಿಕ ಪೊಲೀಸ್ ಠಾಣೆಗೆ ಶರಣಾಗುವಂತೆ ಹೇಳಿದರು. ಆದರೆ ಭಯದಿಂದ ಠಾಣೆಗೆ ಹೋಗದೆ ಕಾರಿನಲ್ಲಿ ಚಿತ್ರದುರ್ಗಕ್ಕೆ ಬಂದೆ. ಕಾರಿನಲ್ಲಿ ಜಗ್ಗನ ಜೊತೆ ಚಿತ್ರದುರ್ಗಕ್ಕೆ ಬಂದುಬಿಟ್ಟೆ. ಆರೋಪಿ ಜಗ್ಗ ಚಿನ್ನಾಭರಣ ತೆಗೆದುಕೊಂಡು ಬಂದಿದ್ದ ಎಂದು ರವಿ ಹೇಳಿದ್ದಾನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com