ಅಭಿವೃದ್ಧಿ ಕೆಲಸಗಳಿಗೆ ಬಳಕೆ: ಇಂಧನ ಬೆಲೆ ಏರಿಕೆ ಸಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ

ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿಗಳು ಹೆಚ್ಚಿನ ಪ್ರಮಾಣದಲ್ಲಿ ಕಾಂಗ್ರೆಸ್ ಗೆ ಲಾಭ ಕೊಡಲಿಲ್ಲ. ಈ ಮಧ್ಯೆ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂಬ ಆರೋಪಗಳು ಹೆಚ್ಚಾಗುತ್ತಿದೆ. ಇದರ ನಡುವೆ ರಾಜ್ಯ ಸರ್ಕಾರ ನಿನ್ನೆ ಇಂಧನ ಬೆಲೆಯಲ್ಲಿ 3 ರೂಪಾಯಿ ಹೆಚ್ಚಳ ಘೋಷಿಸಿತ್ತು.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯTNIE
Updated on

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿಗಳು ಹೆಚ್ಚಿನ ಪ್ರಮಾಣದಲ್ಲಿ ಕಾಂಗ್ರೆಸ್ ಗೆ ಲಾಭ ಕೊಡಲಿಲ್ಲ. ಈ ಮಧ್ಯೆ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂಬ ಆರೋಪಗಳು ಹೆಚ್ಚಾಗುತ್ತಿದೆ. ಇದರ ನಡುವೆ ರಾಜ್ಯ ಸರ್ಕಾರ ನಿನ್ನೆ ಇಂಧನ ಬೆಲೆಯಲ್ಲಿ 3 ರೂಪಾಯಿ ಹೆಚ್ಚಳ ಘೋಷಿಸಿತ್ತು. ಈ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಬೆಲೆ ಏರಿಕೆಯ ಹೊರತಾಗಿಯೂ, ರಾಜ್ಯದಲ್ಲಿ ಇಂಧನ ಬೆಲೆ ದೇಶದ ಇತರ ಅನೇಕ ರಾಜ್ಯಗಳಿಗಿಂತ ಕಡಿಮೆ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರ ಪೆಟ್ರೋಲ್ ಮೇಲಿನ ವ್ಯಾಟ್ ಅನ್ನು ಶೇಕಡ 29.84ರಷ್ಟು ಮತ್ತು ಡೀಸೆಲ್ ಮೇಲೆ ಶೇಕಡ 18.44ರಷ್ಟು ಹೆಚ್ಚಿಸಿದೆ. ಈ ಹೆಚ್ಚಳದ ನಂತರವೂ, ಇಂಧನದ ಮೇಲಿನ ನಮ್ಮ ರಾಜ್ಯದ ತೆರಿಗೆಗಳು ದಕ್ಷಿಣ ಭಾರತದ ಹೆಚ್ಚಿನ ರಾಜ್ಯಗಳು ಮತ್ತು ಮಹಾರಾಷ್ಟ್ರದಂತಹ ಆರ್ಥಿಕ ಗಾತ್ರದ ರಾಜ್ಯಗಳಿಗಿಂತ ಕಡಿಮೆ ಇದೆ ಎಂದು ಎಕ್ಸ್ ನಲ್ಲಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಮೇಲಿನ ವ್ಯಾಟ್ ಶೇಕಡ 25ರಷ್ಟು ಮತ್ತು 5.12 ರೂ ಹೆಚ್ಚುವರಿ ತೆರಿಗೆ ಮತ್ತು ಡೀಸೆಲ್ ಮೇಲೆ ಶೇಕಡ 21ರಷ್ಟಿದೆ. ವ್ಯಾಟ್ ಹೆಚ್ಚಳದ ಹೊರತಾಗಿಯೂ, ಕರ್ನಾಟಕದಲ್ಲಿ ಡೀಸೆಲ್ ಬೆಲೆ ಗುಜರಾತ್ ಮತ್ತು ಮಧ್ಯಪ್ರದೇಶಕ್ಕಿಂತ ಕಡಿಮೆ ಇದೆ. ಆದರೆ ಇತ್ತೀಚಿನ ಏರಿಕೆಯ ನಂತರವೂ ಕರ್ನಾಟಕದ ಪರಿಷ್ಕೃತ ದರಗಳು ಇನ್ನೂ ಹೆಚ್ಚು ಕೈಗೆಟುಕುವ ದರದಲ್ಲಿವೆ ಎಂದು ಒತ್ತಿ ಹೇಳಿದರು.

ಸಿಎಂ ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಗೆ ಹಣ ಒದಗಿಸಬೇಕಲ್ವಾ? ಇಂಧನ ದರ ಏರಿಕೆ ಬಗ್ಗೆ MB ಪಾಟೀಲ್ ಸಮರ್ಥನೆ

ವ್ಯಾಟ್ ಹೆಚ್ಚಳದಿಂದ ಸಂಗ್ರಹವಾಗುವ ಹಣವನ್ನು ಅಗತ್ಯ ಸಾರ್ವಜನಿಕ ಸೇವೆಗಳು ಮತ್ತು ಅಭಿವೃದ್ಧಿ ಯೋಜನೆಗಳಿಗೆ ಬಳಸಲಾಗುತ್ತದೆ ಎಂದು ಮುಖ್ಯಮಂತ್ರಿ ವಿವರಿಸಿದರು. ಸಮತೋಲಿತ ಮತ್ತು ಜವಾಬ್ದಾರಿಯುತ ಆಡಳಿತವನ್ನು ನಿರ್ವಹಿಸಲು ರಾಜ್ಯದ ಬದ್ಧತೆಯನ್ನು ಸಿಎಂ ಸಿದ್ದರಾಮಯ್ಯ ಪುನರುಚ್ಚರಿಸಿದರು.

ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ಕೇಂದ್ರ ಸರ್ಕಾರವು ವ್ಯಾಟ್ ಹೊಂದಾಣಿಕೆಗಳನ್ನು ಮಾಡುತ್ತಿದೆ ಎಂದು ಆರೋಪಿಸಿದರು. ಬಿಜೆಪಿ ಆಡಳಿತದ ಅವಧಿಯಲ್ಲಿ ರಾಜ್ಯ ಮತ್ತು ಕೇಂದ್ರ ಮಟ್ಟದಲ್ಲಿ ಕರ್ನಾಟಕದ ಸಂಪನ್ಮೂಲಗಳನ್ನು ಬೇರೆ ರಾಜ್ಯಗಳಿಗೆ ಹರಿಸುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿದರು.

ರಾಜ್ಯ ಬಿಜೆಪಿ ಸರ್ಕಾರ ಸತತವಾಗಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಅನ್ನು ಇಳಿಸಿದರೆ, ಕೇಂದ್ರ ಸರ್ಕಾರವು ಏಕಕಾಲದಲ್ಲಿ ತೆರಿಗೆಗಳನ್ನು ಹೆಚ್ಚಿಸಿತು. ಇದರಿಂದಾಗಿ ಕರ್ನಾಟಕಕ್ಕೆ ಆದಾಯ ಕಡಿಮೆಯಾಗಿದೆ ಮತ್ತು ಕೇಂದ್ರ ಸರ್ಕಾರಕ್ಕೆ ಆದಾಯ ಹೆಚ್ಚಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಅವರ ಪ್ರಕಾರ, ಈ ವಿಧಾನದಿಂದ ಕರ್ನಾಟಕದ ಜನರಿಗೆ ಅನ್ಯಾಯವಾಗಿದೆ ಎಂದರು.

ಅಂದಿನ ಡಬಲ್ ಇಂಜಿನ್ ಬಿಜೆಪಿ ಸರ್ಕಾರವು ಕರ್ನಾಟಕದ ಸಂಪನ್ಮೂಲಗಳನ್ನು ಬೇರೆ ರಾಜ್ಯಗಳಿಗೆ ತಿರುಗಿಸಲು ಸಹಕರಿಸಿತು. ರಾಜ್ಯ ಬಿಜೆಪಿ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಅನ್ನು ಕಡಿಮೆ ಮಾಡುತ್ತಲೇ ಇತ್ತು. ಆದರೆ ಕೇಂದ್ರ ಸರ್ಕಾರವು ತನ್ನದೇ ಆದ ತೆರಿಗೆಯನ್ನು ಹೆಚ್ಚಿಸಿತು. ಈ ಕ್ರಮದಿಂದ ಕರ್ನಾಟಕಕ್ಕೆ ಆದಾಯವನ್ನು ಕಡಿಮೆ ಮಾಡಲು ಕಾರಣವಾಗಿತ್ತು. ಆದರೆ ಕೇಂದ್ರ ಸರ್ಕಾರದ ಬೊಕ್ಕಸ ತುಂಬಿತ್ತು ಎಂದು ಬರೆದುಕೊಂಡಿದ್ದಾರೆ.

ಸಿಎಂ ಸಿದ್ದರಾಮಯ್ಯ
ಕರ್ನಾಟಕದಲ್ಲಿ ಇಂಧನ ಬೆಲೆ ಏರಿಕೆ: ರಾಹುಲ್ ಗಾಂಧಿ ಕೈ ಹಾಕಿದ ಪ್ರತಿ ರಾಜ್ಯವನ್ನು ಹಾಳುಮಾಡಿದ್ದಾರೆ- ಅಮಿತ್ ಮಾಳವೀಯ

ಈ ಅನರ್ಥ ನೀತಿಯಿಂದಾಗಿ ರಾಜ್ಯದ ರಾಜಸ್ವ ಸಂಗ್ರಹಕ್ಕೆ ದೊಡ್ಡ ಹೊಡೆತ ಬಿದ್ದರೆ, ಇದೇ ವೇಳೆ ಕೇಂದ್ರವು ಕನ್ನಡಿಗರಿಗೆ ದ್ರೋಹ ಬಗೆದು ಭರಪೂರ ತೆರಿಗೆ ಸಂಗ್ರಹಿಸಿತ್ತು. ಕೇಂದ್ರ ಸರ್ಕಾರವು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ರೂ. 9.21 ರಿಂದ ರೂ. 32.98 ಗೆ ಹಾಗೂ ಡೀಸೆಲ್‌ ಮೇಲೆ ರೂ. 3.45 ರಿಂದ ರೂ. 31.84 ಕ್ಕೆ ಹೆಚ್ಚಳ ಮಾಡಿತ್ತು. ಇದು ನಿಜವಾಗಿಯೂ ಜನರ ಮೇಲಿನ ಹೊರೆ. ಆಗಾಗ್ಗೆ ಕೇಂದ್ರ ಸರ್ಕಾರವು ತೆರಿಗೆ ಕಡಿತಗೊಳಿಸಿದ ಹೊರತಾಗಿಯೂ ಈಗಿನ ಅಬಕಾರಿ ಸುಂಕವು ಪೆಟ್ರೋಲ್ ಮೇಲೆ ರೂ. 19.9 ಹಾಗೂ ಡೀಸೆಲ್‌ ಮೇಲೆ ರೂ. 15.8 ಇದೆ. ನರೇಂದ್ರ ಮೋದಿ ಅವರ ಸರ್ಕಾರ ಜನಹಿತದ ದೃಷ್ಟಿಯಿಂದ ಈ ತೆರಿಗೆಯನ್ನು ಇಳಿಕೆ ಮಾಡಬೇಕು ಎಂದು ಒತ್ತಾಯಿಸುತ್ತೇನೆ.

ರಾಜ್ಯ ಸರ್ಕಾರದ ಮೌಲ್ಯವರ್ಧಿತ ತೆರಿಗೆಯಲ್ಲಾದ ಬದಲಾವಣೆಯಿಂದ ಸಂಗ್ರಹವಾಗುವ ಹಣವು ನಾಡಿನ ಜನರ ಮೂಲಭೂತ ಸೇವೆಗಳು ಹಾಗೂ ಅಭಿವೃದ್ಧಿ ಯೋಜನೆಗಳಿಗೆ ಬಳಸಲ್ಪಡುತ್ತದೆ ಎಂಬ ಗ್ಯಾರಂಟಿಯನ್ನು ನಾನು ನೀಡುತ್ತೇನೆ. ನಾವು ಸರ್ವರ ಹಿತಕಾಯಲು ಮತ್ತು ಜವಾಬ್ದಾರಿಯುತ ಸರ್ಕಾರವಾಗಿ ಮುನ್ನಡೆಯಲು ಬದ್ಧರಿದ್ದೇವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com