ಲೈಂಗಿಕ ಕಿರುಕುಳ ಹಗರಣ: ಮತ್ತೊಮ್ಮೆ ಪ್ರಜ್ವಲ್ ರೇವಣ್ಣನನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದ ಎಸ್ಐಟಿ

ಮಹಿಳೆಯರ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಶನಿವಾರ ಮತ್ತೊಮ್ಮೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಪ್ರಜ್ವಲ್ ಸದ್ಯ ವಿಶೇಷ ತನಿಖಾ ತಂಡದ (ಎಸ್‌ಐಟಿ) ವಶದಲ್ಲಿದ್ದು, ಅತ್ಯಾಚಾರದ ಆರೋಪದ ಮೇಲೆ ದಾಖಲಾಗಿರುವ ಎರಡನೇ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ.
ಪ್ರಜ್ವಲ್ ರೇವಣ್ಣ
ಪ್ರಜ್ವಲ್ ರೇವಣ್ಣ

ಬೆಂಗಳೂರು: ಮಹಿಳೆಯರ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಶನಿವಾರ ಮತ್ತೊಮ್ಮೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಪ್ರಜ್ವಲ್ ಸದ್ಯ ವಿಶೇಷ ತನಿಖಾ ತಂಡದ (ಎಸ್‌ಐಟಿ) ವಶದಲ್ಲಿದ್ದು, ಅತ್ಯಾಚಾರದ ಆರೋಪದ ಮೇಲೆ ದಾಖಲಾಗಿರುವ ಎರಡನೇ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ.

ಪ್ರಜ್ವಲ್ ರೇವಣ್ಣ ಅವರಿಗೆ ನಾಲ್ವರು ವೈದ್ಯರ ತಂಡ ವೈದ್ಯಕೀಯ ಪರೀಕ್ಷೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

'ಪರೀಕ್ಷೆ ವೇಳೆ ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಕೂಡ ಉಪಸ್ಥಿತರಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಪರೀಕ್ಷೆಗಳನ್ನು ನಡೆಸಲಾಗಿದೆ. ವರದಿಗಾಗಿ ಕಾಯಲಾಗುತ್ತಿದೆ' ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದಲ್ಲದೆ, ಎಸ್‌ಐಟಿ ಪ್ರಜ್ವಲ್‌ನ ಧ್ವನಿ ಮಾದರಿಗಳನ್ನು ಸಂಗ್ರಹಿಸಿದ್ದು, ಇತರ ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದೆ. ಅಶ್ಲೀಲ ವಿಡಿಯೋಗಳನ್ನು ವಿಶ್ಲೇಷಿಸಲು ತಜ್ಞರನ್ನು ಸಹ ನಿಯೋಜಿಸಲಾಗಿದೆ.

ಜರ್ಮನಿಯ ಮ್ಯೂನಿಚ್‌ನಿಂದ ಹಿಂದಿರುಗಿದ ನಂತರ ಮೇ 31 ರಂದು ಮುಂಜಾನೆ ಪ್ರಜ್ವಲ್ ರೇವಣ್ಣ ಅವರನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬಂಧಿಸಲಾಯಿತು. ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ ಮುಗಿದ ಕೂಡಲೇ ಅವರು ದೇಶದಿಂದ ಪಲಾಯನ ಮಾಡಿದ್ದರು.

ಪ್ರಜ್ವಲ್ ರೇವಣ್ಣ
ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ಜೂನ್ 18ರವರೆಗೆ ಎಸ್‌ಐಟಿ ವಶಕ್ಕೆ

ಏಪ್ರಿಲ್ 28 ರಂದು ಹಾಸನದ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಮೊದಲ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅವರನ್ನು ಆರಂಭದಲ್ಲಿ ಬಂಧಿಸಲಾಯಿತು. ಹಲವು ದಿನಗಳ ಎಸ್‌ಐಟಿ ಕಸ್ಟಡಿಯಲ್ಲಿ ಕಳೆದ ನಂತರ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು.

ನಂತರ ಎಸ್‌ಐಟಿ ಪ್ರಜ್ವಲ್ ಅವರ ಬಾಡಿ ವಾರೆಂಟ್ ಕೋರಿತ್ತು. ಪ್ರಜ್ವಲ್ ವಿರುದ್ಧ ದಾಖಲಾಗಿರುವ ಎರಡನೇ ಅತ್ಯಾಚಾರ ಪ್ರಕರಣದ ತನಿಖೆಗಾಗಿ ಪ್ರಜ್ವಲ್ ರೇವಣ್ಣ ಅವರನ್ನು ನ್ಯಾಯಾಲಯ ಜೂನ್ 18ರವರೆಗೆ ಮತ್ತೆ ವಿಶೇಷ ತನಿಖಾ ತಂಡದ (ಎಸ್‌ಐಟಿ) ಕಸ್ಟಡಿಗೆ ಒಪ್ಪಿಸಿ ಆದೇಶಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com