ಬಿ ಎಸ್ ಯಡಿಯೂರಪ್ಪ ಬಂಧನಕ್ಕೆ ಹೈಕೋರ್ಟ್ ತಡೆ: ಮೆಹಬೂಬಾ ಮುಫ್ತಿ ಟೀಕೆ

ಪೋಕ್ಸೋ ಪ್ರಕರಣದಲ್ಲಿ ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪ ಅವರ ಬಂಧನಕ್ಕೆ ತಡೆ ನೀಡಿರುವ ಹೈಕೋರ್ಟ್ ತೀರ್ಪನ್ನು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಭಾನುವಾರ ಟೀಕಿಸಿದ್ದಾರೆ.
ಬಿಎಸ್ ವೈ, ಮೆಹಬೂಬಾ ಮುಫ್ತಿ ಸಾಂದರ್ಭಿಕ ಚಿತ್ರ
ಬಿಎಸ್ ವೈ, ಮೆಹಬೂಬಾ ಮುಫ್ತಿ ಸಾಂದರ್ಭಿಕ ಚಿತ್ರ

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪ ಅವರ ಬಂಧನಕ್ಕೆ ತಡೆ ನೀಡಿರುವ ಹೈಕೋರ್ಟ್ ತೀರ್ಪನ್ನು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಭಾನುವಾರ ಟೀಕಿಸಿದ್ದಾರೆ.

"ನ್ಯಾಯವನ್ನು ಹೇಗೆ ಆಯ್ಕೆ ಮಾಡಲಾಗುತ್ತಿದೆ ಎಂಬುದನ್ನುಇದು ಬಹಿರಂಗಪಡಿಸಿದೆ ಎಂದಿದ್ದಾರೆ. ಇದಕ್ಕೆ ವ್ಯತಿರಿಕ್ತವಾಗಿ, ಜಾರ್ಖಂಡ್ ಮತ್ತು ದೆಹಲಿಯ ಮಾಜಿ ಮುಖ್ಯಮಂತ್ರಿಗಳ ಬಂಧನದ ಉದಾಹರಣೆಗಳನ್ನು ಅವರು ಉಲ್ಲೇಖಿಸಿದ್ದಾರೆ. "ಅತ್ಯಂತ ಕಡಿಮೆ ಆರೋಪಗಳ" ಮೇಲೆ ಅವರು ಜೈಲು ಪಾಲಾಗಿದ್ದಾರೆ ಎಂದು ಹೇಳಿದ್ದಾರೆ.

ಬಿಎಸ್ ವೈ, ಮೆಹಬೂಬಾ ಮುಫ್ತಿ ಸಾಂದರ್ಭಿಕ ಚಿತ್ರ
ಪೋಕ್ಸೋ ಪ್ರಕರಣ: ಬಿಎಸ್ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ!

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಅವರು, ''ಮಾಜಿ ಸಿಎಂ ಆಗಿರುವ ಆರೋಪಿ ಎಲ್ಲೂ ಹೋಗುವುದಿಲ್ಲ ಎಂದು ಪೋಸ್ಕೋ ಪ್ರಕರಣದಲ್ಲಿ ಬಿಜೆಪಿಯ ಬಿಎಸ್ ಯಡಿಯೂರಪ್ಪ ಬಂಧನಕ್ಕೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿರುವುದು ಕಡಿಮೆ ಆರೋಪಕ್ಕಾಗಿ ಕೆಲ ತಿಂಗಳುಗಳಿಂದ ಜೈಲಿನಲ್ಲಿರುವ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೋರೆನ್ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ನೀಡಿದ ಆದೇಶಕ್ಕೆ ವ್ಯತಿರಿಕ್ತವಾಗಿದೆ. ನ್ಯಾಯವನ್ನು ಹೇಗೆ ಆಯ್ಕೆ ಮಾಡಲಾಗುತ್ತಿದೆ ಎಂಬುದನ್ನು ಇದು ಬಹಿರಂಗಪಡಿಸುತ್ತದೆ ಎಂದು ಟೀಕಿಸಿದ್ದಾರೆ.

ಮುಂದಿನ ವಿಚಾರಣೆಯ ದಿನಾಂಕದವರೆಗೆ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಹೈಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ. ಜೂನ್ 17 ರಂದು ಪೊಲೀಸರ ಮುಂದೆ ಸ್ವಯಂ ಪ್ರೇರಿತವಾಗಿ ಹಾಜರಾಗುವುದಾಗಿ ಯಡಿಯೂರಪ್ಪ ಬರೆದ ಪತ್ರವನ್ನು ಅನುಸರಿಸಿ ಹೈಕೋರ್ಟ್ ಈ ಆದೇಶವನ್ನು ನೀಡಿದೆ.

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿ ವಿಚಾರಣೆ ನಡೆಸಿದ ತ್ವರಿತ ನ್ಯಾಯಾಲಯ ಮಾಜಿ ಸಿಎಂ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿ, ಕೂಡಲೇ ಅವರನ್ನು ಬಂಧಿಸುವಂತೆ ಸೂಚಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com