ಪೊಲೀಸ್ ಠಾಣೆ ಎದುರೇ ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಬರ್ಬರ ಹತ್ಯೆ!

ಚಿಕ್ಕಬಳ್ಳಾಪುರ ಪೊಲೀಸ್ ಠಾಣೆ ಎದುರೇ ವ್ಯಕ್ತಿಯೊಬ್ಬರ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯೊಂದು ಭಾನುವಾರ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಪೊಲೀಸ್ ಠಾಣೆ ಎದುರೇ ವ್ಯಕ್ತಿಯೊಬ್ಬರ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯೊಂದು ಭಾನುವಾರ ನಡೆದಿದೆ.

ಎಲ್.ಎಂ.ಎಲ್ ಶೇಖರ್ ಕೊಲೆಯಾದ ವ್ಯಕ್ತಿ. ಅನೈತಿಕ ಸಂಬಂಧ, ಕಿರುಕುಳ, ಹಳೆ ದ್ವೇಷದಿಂದ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಸಂಗ್ರಹ ಚಿತ್ರ
ಜಾರ್ಖಂಡ್'ನಲ್ಲಿ ಎನ್‌ಕೌಂಟರ್: ನಾಲ್ವರು ನಕ್ಸಲರ ಹತ್ಯೆ, ಇಬ್ಬರ ಬಂಧನ

ವಿಚಾರ ಗೊತ್ತಾಗುತ್ತಿದ್ದಂತೆಯೇ ಚಿಕ್ಕಬಳ್ಳಾಪುರ ನಗರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೇಸ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ.

ಹತ್ಯೆ ಮಾಡಿರುವ ಆರೋಪಿಯನ್ನು ಶಿವಕುಮಾರ್ (35) ಎಂದು ಗುರ್ತಿಸಲಾಗಿದೆ. ಚಿಕ್ಕಬಳ್ಳಾಪುರ ನಗರದ ಕಾರ್ಖಾನೆ ಪೇಟೆ ನಿವಾಸಿಯಾಗಿರುವ ಶಿವಕುಮಾರ್, ಕೊಲೆ ಮಾಡಿ ಪರಾರಿ ಆಗಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com