ರೇಣುಕಾಸ್ವಾಮಿ ಕೊಲೆ: ಸ್ಟೋನಿ ಬ್ರೂಕ್ ಪಬ್‌ನಲ್ಲಿ ನಟ ಚಿಕ್ಕಣ್ಣ, ಆರೋಪಿಗಳಾದ ದರ್ಶನ್ ಅಂಡ್ ಗ್ಯಾಂಗ್‌‌ ಸ್ಥಳ ಮಹಜರು

ಸ್ಟೋನಿ ಬ್ರೂಕ್ ಪಬ್‌ನಲ್ಲಿ ನಡೆದ ಪಾರ್ಟಿಯಲ್ಲಿ ನಟ ಚಿಕ್ಕಣ್ಣ ಕೂಡ ಇದ್ದರು ಎಂಬ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಪೊಲೀಸರು ಚಿಕ್ಕಣ್ಣಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು.
ದರ್ಶನ್-ಚಿಕ್ಕಣ್ಣ
ದರ್ಶನ್-ಚಿಕ್ಕಣ್ಣ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿಗೆ ಸ್ಟೋನಿ ಬ್ರೂಕ್ ಪಬ್‌ನಲ್ಲಿ ಜೂನ್ 8ರಂದು ಆರೋಪಿಗಳು ಪಾರ್ಟಿ ಮಾಡಿದ್ದ ಹಿನ್ನೆಲೆಯಲ್ಲಿ ನಟ ದರ್ಶನ್ ಸೇರಿದಂತೆ ಕೆಲ ಆರೋಪಿಗಳನ್ನು ಸ್ಟೋನಿ ಬ್ರೂಕ್ ಪಬ್‌ಗೆ ಕರೆದೊಯ್ದ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ.

ಸ್ಟೋನಿ ಬ್ರೂಕ್ ಪಬ್‌ನಲ್ಲಿ ನಡೆದ ಪಾರ್ಟಿಯಲ್ಲಿ ನಟ ಚಿಕ್ಕಣ್ಣ ಕೂಡ ಇದ್ದರು ಎಂಬ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಪೊಲೀಸರು ಚಿಕ್ಕಣ್ಣಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಇಂದು ಆರೋಪಿಗಳ ಜೊತೆಗೆ ಚಿಕ್ಕಣ್ಣರನ್ನು ಸ್ಟೋನಿ ಬ್ರೂಕ್ ಪಬ್‌ಗೆ ಕರೆದೊಯ್ದು ಪೊಲೀಸರು ಇಂಚಿಂಚು ಮಾಹಿತಿಯನ್ನು ಕಲೆ ಹಾಕಿದ್ದಾರೆ. ಸ್ಥಳ ಮಹಜರು ವೇಳೆ ಪೊಲೀಸರು ಚಿಕ್ಕಣ್ಣಗೆ ಹಲವು ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದುಕೊಂಡಿದ್ದಾರೆ. ಕೊಲೆ ವಿಷಯ ನಿಮಗೆ ಗೊತ್ತಿತ್ತ?. ಪಾರ್ಟಿಯಲ್ಲಿ ಏನೆಲ್ಲಾ ನಡೆಯಿತು?. ಪಾರ್ಟಿ ಆದ ಮೇಲೆ ನೀವು ಎಲ್ಲಿಗೆ ಹೋದಿರಿ? ಎಂದು ಪೊಲೀಸರು ಪ್ರಶ್ನಿಸಿದ್ದಾರೆ.

ಸ್ಥಳ ಮಹಜರು ಬಳಿಕ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಗೆ ಚಿಕ್ಕಣ್ಣರನ್ನು ಪೊಲೀಸರು ಕರೆತಂದಿದ್ದಾರೆ. ಮೂಲಗಳ ಪ್ರಕಾರ, ಪೊಲೀಸರು ಚಿಕ್ಕಣ್ಣರನ್ನು ಸಾಕ್ಷಿಯನ್ನಾಗಿ ಮಾಡಿಕೊಂಡಿದ್ದಾರೆ.

ದರ್ಶನ್-ಚಿಕ್ಕಣ್ಣ
ದರ್ಶನ್ ಜೊತೆ ಪಾರ್ಟಿಯಲ್ಲಿ ಭಾಗಿ: ಖ್ಯಾತ ಹಾಸ್ಯ ನಟ ಚಿಕ್ಕಣ್ಣಗೆ ನೋಟಿಸ್ ಜಾರಿ!

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com