
ಬೆಂಗಳೂರು: ಮಹಾರಾಣಿ ಕಾಲೇಜಿನ ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿಯೊಬ್ಬಳು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಬಿಎಸ್ಇ ಓದುತ್ತಿದ್ದ 19 ವರ್ಷದ ಪಾವನಾ ಮೃತ ವಿದ್ಯಾರ್ಥಿನಿ. ಮಹಾರಾಣಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಎಸ್ಸಿ ಓದುತ್ತಿದ್ದ ಪಾವನಾ ಡೆಟ್ ನೋಟ್ ಬರೆದಿಟ್ಟು ಜೂ.16ರಂದು ಹಾಸ್ಟೆಲ್ನ ರೂಂ ನಂಬರ್ 17ರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ರಾತ್ರಿ 11.30ರ ಸುಮಾರಿಗೆ ಸಹಪಾಠಿಗಳು ಪಾವನಾ ರೂಂನಲ್ಲಿ ಇಣುಕಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ವಿದ್ಯಾರ್ಥಿನಿ ಆತ್ಮಹತ್ಯೆ ಮಾಹಿತಿ ತಿಳಿಯುತ್ತಿದ್ದಂತೆ ಹೈಗ್ರೌಂಡ್ಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಯುತ್ತಿದ್ದಾರೆ.
ಮೃತ ವಿದ್ಯಾರ್ಥಿನಿ ತಂದೆ ನೀಡಿದ ದೂರಿನ ಆಧಾರದ ಮೇಲೆ ಅಸ್ವಾಭಾವಿಕ ಸಾವು ಅಂತ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಡೆಟ್ ನೋಟ್ ನಲ್ಲಿ ಪಾವನಾ ಆನ್ ಲೈನ್ ಆ್ಯಪ್ನಲ್ಲಿ 15 ಸಾವಿರ ಹೂಡಿಕೆ ಮಾಡಿದ್ದರು. ಆದರೆ, ಹೂಡಿಕೆ ಮಾಡಿದ ಹಣ ವಾಪಸ್ಸು ಬಂದಿಲ್ಲ. ಇದರಿಂದ ಮನನೊಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಹೇಳಿದ್ದಾರೆ.
Advertisement