ಪತ್ನಿಯನ್ನು ಗುಂಡಿಟ್ಟು ಕೊಂದು ವ್ಯಕ್ತಿ ತಾನೂ ಆತ್ಮಹತ್ಯೆಗೆ ಶರಣು!

ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೋರ್ವ ಕೌಟುಂಬಿಕ ಕಲಹವಾದ ಹಿನ್ನೆಲೆಯಲ್ಲಿ ತನ್ನ ಪತ್ನಿಯನ್ನು ಗುಂಡಿತ್ತು ಹತ್ಯೆ ಮಾಡಿ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಬೇಲೂರಿನ ದೊಡ್ಡಮಲಸವಾರದಲ್ಲಿ ನಡೆದಿದೆ.
ಪತ್ನಿಯನ್ನು ಗುಂಡಿಟ್ಟು ಕೊಂದು ವ್ಯಕ್ತಿ ತಾನೂ ಆತ್ಮಹತ್ಯೆಗೆ ಶರಣು!

ಹಾಸನ: ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೋರ್ವ ಕೌಟುಂಬಿಕ ಕಲಹವಾದ ಹಿನ್ನೆಲೆಯಲ್ಲಿ ತನ್ನ ಪತ್ನಿಯನ್ನು ಗುಂಡಿತ್ತು ಹತ್ಯೆ ಮಾಡಿ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಬೇಲೂರಿನ ದೊಡ್ಡಮಲಸವಾರದಲ್ಲಿ ನಡೆದಿದೆ.

ಜಾಜಿ (45) ಹತ್ಯೆಗೀಡಾದ ವ್ಯಕ್ತಿಯಾಗಿದ್ದು, ಪೊಲೀಸರ ಮಾಹಿತಿಯ ಪ್ರಕಾರ, ಹರೀಶ್ ಪೂಜಾರಿ (50) ಎಂದು ಗುರುತಿಸಲಾದ ವ್ಯಕ್ತಿ ತನ್ನ ಹೆಂಡತಿಯೊಂದಿಗೆ ಜಗಳ ತೆಗೆದು ಒಂದು ಗಂಟೆಗೂ ಹೆಚ್ಚು ಕಾಲ ಮಾತಿನ ಚಕಮಕಿ ನಡೆಸಿದ ನಂತರ ಆಕೆಯ ಮೇಲೆ ಗುಂಡು ಹಾರಿಸಿದ್ದಾನೆ.

ಪತ್ನಿಯನ್ನು ಗುಂಡಿಟ್ಟು ಕೊಂದು ವ್ಯಕ್ತಿ ತಾನೂ ಆತ್ಮಹತ್ಯೆಗೆ ಶರಣು!
ಪೊಲೀಸ್ ಠಾಣೆ ಎದುರೇ ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಬರ್ಬರ ಹತ್ಯೆ!

ಆರೋಪಿ ಹರೀಶ್ ಪೂಜಾರಿ ಕೂಲಿ ಕಾರ್ಮಿಕನಾಗಿದ್ದು, ತನ್ನ ಪತ್ನಿಯೊಂದಿಗೆ ನಿತ್ಯ ಜಗಳ ಮಾಡುತ್ತಿದ್ದು, ಹಲವು ಬಾರಿ ಅಕ್ಕಪಕ್ಕದ ಮನೆಯವರು ಸಮಾಧಾನಪಡಿಸಲು ಯತ್ನಿಸಿದ್ದರು. ಇವರಿಬ್ಬರಿಗೆ ವಸತಿ ಶಾಲೆಗಳಲ್ಲಿ ಓದುತ್ತಿರುವ ಮೂವರು ಮಕ್ಕಳಿದ್ದಾರೆ. ಸ್ಥಳಕ್ಕೆ ಅರೇಹಳ್ಳಿ ಪೊಲೀಸರು ಭೇಟಿ ನೀಡಿ ಮೃತದೇಹಗಳನ್ನು ಶವಾಗಾರಕ್ಕೆ ರವಾನಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com