ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಗೆ ಸೌಲಭ್ಯ ಕಲ್ಪಿಸಲು ಸರ್ಕಾರ ಮುಂದು!

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿಯಾಗಿ ಜಾರಿಗೊಳಿಸಲು ಬದ್ಧ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಯೋಜನೆಗಳಿಗಾಗಿ ವಾರ್ಷಿಕ 60 ಸಾವಿರ ಕೋಟಿ ರೂ. ಮೀಸಲಿಟ್ಟಿದ್ದು, ಇದೀಗ ಯೋಜನೆ ಅನುಷ್ಠಾನಗೊಳಿಸುತ್ತಿರುವ ಸಮಿತಿಗೆ ಸೌಲಭ್ಯಗಳ ಕಲ್ಪಿಸಲು ಮುಂದಾಗಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿಯಾಗಿ ಜಾರಿಗೊಳಿಸಲು ಬದ್ಧ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಯೋಜನೆಗಳಿಗಾಗಿ ವಾರ್ಷಿಕ 60 ಸಾವಿರ ಕೋಟಿ ರೂ. ಮೀಸಲಿಟ್ಟಿದ್ದು, ಇದೀಗ ಯೋಜನೆ ಅನುಷ್ಠಾನಗೊಳಿಸುತ್ತಿರುವ ಸಮಿತಿಗೆ ಸೌಲಭ್ಯಗಳ ಕಲ್ಪಿಸಲು ಮುಂದಾಗಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಈ ಸಮಿತಿಯ ಪದಾಧಿಕಾರಿಗಳು ಕಚೇರಿ ಸ್ಥಾಪನೆ, ವೇತನ ಮತ್ತು ಕಾರು ಸೇರಿದಂತೆ ಇತರೆ ಪ್ರಯೋಜನಗಳನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ನಿಯಮಗಳನ್ನು ನಿಗದಿಪಡಿಸುತ್ತಿದ್ದಾರೆಂದು ತಿಳಿದುಬಂದಿದೆ.

ಈ ಸಂಬಂಧ ಈಗಾಗಲೇ ಮುಖ್ಯಮಂತ್ರಿಗಳು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಹೆಚ್.ಎಂ.ರೇವಣ್ಣ ಅವರೊಂದಿಗೆ ಮಾತುಕತೆ ನಡೆಸಿದ್ದು, ಈ ವೇಳೆ ಸಮಿತಿಯ ಪದಾಧಿಕಾರಿಗಳಿಗೆ ಬೆಂಗಳೂರಿನಲ್ಲಿ ಕಚೇರಿಯ ಜೊತೆಗೆ ಅಧಿಕೃತ ಕಾರು ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ನೀಡುವ ಭರವಸೆ ನೀಡಿದ್ದಾರೆಂದು ವರದಿಗಳು ತಿಳಿಸಿವೆ.

ಸಂಗ್ರಹ ಚಿತ್ರ
ರಾಜ್ಯದ ಅಭಿವೃದ್ಧಿ ಕಾರ್ಯಕ್ಕಾಗಿ ತೈಲ ಬೆಲೆ ಏರಿಕೆ ಮಾಡಿದ್ದೇವೆ; ಗ್ಯಾರಂಟಿ ಯೋಜನೆಗಳಿಗಾಗಿ ಅಲ್ಲ: ಸಿಎಂ ಸಿದ್ದರಾಮಯ್ಯ

ಇದರಂತೆ ಸಮಿತಿಯ ನಾಲ್ವರು ಉಪಾಧ್ಯಕ್ಷರಿಗೂ ಕಚೇರಿ ಸಿಗಲಿದೆ. ಜಿಲ್ಲಾ ಮಟ್ಟದಲ್ಲಿ ಕಚೇರಿಗಳನ್ನು ಜಿಲ್ಲಾ ಪಂಚಾಯಿತಿಯಲ್ಲಿ ಸ್ಥಾಪಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಸೋಮವಾರ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ ಅವರು, 2019 ರ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಮತ ಹಂಚಿಕೆ ಶೇಕಡಾ 32 ರಿಂದ 2024 ರಲ್ಲಿ ಶೇಕಡಾ 45 ಕ್ಕೆ ಏರಿದ್ದು, ಪಕ್ಷವು ಒಂದು ಸ್ಥಾನದಿಂದ 9 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಇದಕ್ಕೆ ಗ್ಯಾರಂಟಿ ಯೋಜನೆಗಳು ಪರೋಕ್ಷ ಕಾರಣವಾಗಿದೆ ಎಂದು ಹೇಳಿದ್ದರು.

ಸಮಿತಿಗೆ ಯಾವುದೇ ನಿಮಯಗಳು ಮತ್ತು ಉಲ್ಲೇಖಗಳು ಇರಲಿಲ್ಲ. ಮಹಿಳೆಯರು, ಅಲ್ಪಸಂಖ್ಯಾತರು ಸೇರಿದಂತೆ ನಿರ್ಗತಿಕರಿಗೆ ಸಾಮಾಜಿಕ ನ್ಯಾಯ ದೊರಕಿಸಿಕೊಡುವ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಸಿಎಂ ಬದ್ಧರಾಗಿದ್ದಾರೆ ಎಂದು ರೇವಣ್ಣ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com