ಗೋಣಿಕೊಪ್ಪ: 100 ವರ್ಷ ಹಳೆಯ ಕಟ್ಟಡ ಕುಸಿತ; ಅವಶೇಷಗಳಡಿ ಮೂವರು, ಕಾರ್ಯಾಚರಣೆ

100 ವರ್ಷ ಹಳೆಯ ಕಟ್ಟಡವೊಂದು ಕುಸಿದ ಪರಿಣಾಮ ಮೂವರು ಅವಶೇಷಗಳಡಿ ಸಿಲುಕಿರುವ ಘಟನೆ ಗೋಣಿಕೊಪ್ಪದಲ್ಲಿ ಸಂಭವಿಸಿದೆ.
Building collapses in Gonikoppal
ಕುಸಿದು ಬಿದ್ದ 100 ವರ್ಷ ಹಳೆಯ ಕಟ್ಟಡ

ಮಡಿಕೇರಿ: 100 ವರ್ಷ ಹಳೆಯ ಕಟ್ಟಡವೊಂದು ಕುಸಿದ ಪರಿಣಾಮ ಮೂವರು ಅವಶೇಷಗಳಡಿ ಸಿಲುಕಿರುವ ಘಟನೆ ಗೋಣಿಕೊಪ್ಪದಲ್ಲಿ ಸಂಭವಿಸಿದೆ.

ಮಡಿಕೇರಿಯ ಗೋಣಿಕೊಪ್ಪದಲ್ಲಿ ಗುರುವಾರ ಈ ಘಟನೆ ನಡೆದಿದ್ದು, ಸುಮಾರು 100 ವರ್ಷದಷ್ಟು ಹಳೆಯ ಕಟ್ಟಡವೊಂದು ಇದ್ದಕ್ಕಿದ್ದಂತೆ ಕುಸಿದು ಬಿದ್ದ ಪರಿಣಾಮ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಟ್ಟಡ ಸಂಪೂರ್ಣ ನೆಲಸಮಗೊಂಡಿದ್ದು, ಅವಶೇಷಗಳಡಿಯಲ್ಲಿ ಮೂವರು ಸಿಲುಕಿದ್ದಾರೆ ಎನ್ನಲಾಗಿದೆ.

ವಿಚಾರ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೂವರನ್ನು ರಕ್ಷಿಸಿದ್ದಾರೆ.

Building collapses in Gonikoppal
ಅಧಿಕ ಮಳೆ: ಹಂಪಿ ಪಾರಂಪರಿಕ ಕಟ್ಟಡ ಭಾಗಶಃ ಕುಸಿತ

ತೀವ್ರವಾಗಿ ಗಾಯಗೊಂಡಿರುವ ಒಬ್ಬರನ್ನು ಮೈಸೂರು ಆಸ್ಪತೆಗೆ ಸ್ಥಳಾಂತರಿಸಲಾಗಿದೆ. ಇನ್ನೂ ಮೂವರು ಕಟ್ಟಡದ ಅವಶೇಷಗಳಡಿ ಸಿಲುಕಿರುವ ಶಂಕೆ ಇದ್ದು, ಕಾರ್ಯಾಚರಣೆ ಮುಂದುವರಿದಿದೆ. ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಇನ್ನು ಈ ಕಟ್ಟಡದಲ್ಲಿದ್ದ ಮಳಿಗೆಯಲ್ಲಿ ಬಿರಿಯಾನಿ ಸೆಂಟರ್ ನಡೆಯುತ್ತಿತ್ತು. ಅಂಬೂರು ಬಿರಿಯಾನಿ ಮಳಿಗೆ ಎಂಬ ಹೊಟೆಲ್ ಇಲ್ಲಿ ಇತ್ತು. ಈ ಹೊಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಹಲವು ಕಾರ್ಮಿಕರು ಗಾಯಗೊಂಡಿದ್ದು, ಅವರನ್ನು ಗೋಣಿಕೊಪ್ಪಲು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚೆಗಷ್ಟೇ ಈ ಹಳೆಯ ಕಟ್ಟಡದ ಹೊರಭಾಗವನ್ನು ದುರಸ್ತಿ ಮಾಡಿ ಹೊಟೆಲ್ ಪುನಾರಂಭಿಸಲಾಗಿತ್ತು. ಕಟ್ಟಡ ಆಧುನೀಕರಣದ ವೇಳೆ ಕಟ್ಟದ ಒಳಭಾಗ ದುರ್ಬಲಗೊಂಡು ಕುಸಿತವಾಗಿದೆ ಎಂದು ಶಂಕಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com