ಪ್ರತಿ ಹೋಬಳಿಗೂ ಕಡ್ಡಾಯವಾಗಿ ವಸತಿ ಶಾಲೆ ನೀಡಲಾಗುವುದು: ಸಿಎಂ ಸಿದ್ದರಾಮಯ್ಯ

ಶಿಕ್ಷಣ ಪ್ರತಿಯೊಬ್ಬರ ಮೂಲಭೂತ ಹಕ್ಕು ಎಂದು ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದ ಪ್ರತಿ ಹೋಬಳಿಗೂ ಕಡ್ಡಾಯವಾಗಿ ವಸತಿ ಶಾಲೆಗಳನ್ನು ನೀಡಲಾಗುವುದು ಎಂದು ಘೋಷಿಸಿದರು.
ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಮಾಜ ಕಲ್ಯಾಣ ಸಚಿವ ಡಾ. ಎಚ್‌ಸಿ ಮಹದೇವಪ್ಪ ಇದ್ದರು.
ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಮಾಜ ಕಲ್ಯಾಣ ಸಚಿವ ಡಾ. ಎಚ್‌ಸಿ ಮಹದೇವಪ್ಪ ಇದ್ದರು.
Updated on

ಬೆಂಗಳೂರು: ಶಿಕ್ಷಣ ಪ್ರತಿಯೊಬ್ಬರ ಮೂಲಭೂತ ಹಕ್ಕು ಎಂದು ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದ ಪ್ರತಿ ಹೋಬಳಿಗೂ ಕಡ್ಡಾಯವಾಗಿ ವಸತಿ ಶಾಲೆಗಳನ್ನು ನೀಡಲಾಗುವುದು ಎಂದು ಘೋಷಿಸಿದರು.

ಸಮಾಜ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಬುಧವಾರ ಆಯೋಜಿಸಿದ್ದ ಎಸ್‌ಸಿ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ, ಹಿಂದಿನ ಬಜೆಟ್‌ನಲ್ಲಿ ಈಗಾಗಲೇ ಅನುಮೋದನೆ ದೊರೆತಿದ್ದು, 20 ಹೋಬಳಿಗಳಲ್ಲಿ ಈ ವರ್ಷ ವಸತಿ ಶಾಲೆಗಳನ್ನು ಆರಂಭಿಸಲಾಗುವುದು ಎಂದರು.

ಹಂತ ಹಂತವಾಗಿ ಎಲ್ಲ ಹೋಬಳಿಗಳಲ್ಲಿ ವಸತಿ ಶಾಲೆಗಳು ಬರಲಿವೆ. ಸರ್ಕಾರಿ ಶಾಲೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಬೇಕು. ಅವರನ್ನು ಪ್ರೋತ್ಸಾಹಿಸಲು ಪ್ರೋತ್ಸಾಹಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಮಾಜ ಕಲ್ಯಾಣ ಇಲಾಖೆಯಡಿ 833, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ 113 ವಸತಿ ಶಾಲೆಗಳಿದ್ದು, ಮುಂದಿನ ದಿನಗಳಲ್ಲಿ ಈ ಸಂಖ್ಯೆ ಹೆಚ್ಚಾಗಲಿದೆ ಎಂದು ತಿಳಿಸಿದರು.

ಸಮಾಜ ಕಲ್ಯಾಣ ಸಚಿವ ಡಾ. ಎಚ್‌ಸಿ ಮಹದೇವಪ್ಪ ಮಾತನಾಡಿ, ಸಿದ್ದರಾಮಯ್ಯನವರ ಪ್ರಯತ್ನ ಮತ್ತು ಕಾಳಜಿಯಿಂದ ರಾಜ್ಯಾದ್ಯಂತ ಮೊರಾರ್ಜಿ ದೇಸಾಯಿ ಶಾಲೆಗಳು, ಆಶ್ರಮ ಶಾಲೆಗಳು ಮತ್ತು ವಸತಿ ಶಾಲೆಗಳು ತೆರೆದಿದ್ದು, ದಲಿತ, ಹಿಂದುಳಿದ ಮತ್ತು ಬುಡಕಟ್ಟು ಕುಟುಂಬಗಳ ಮಕ್ಕಳ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಪ್ರಗತಿಗೆ ಸಂಸ್ಥೆಗಳು ಸಹಾಯ ಮಾಡುತ್ತಿವೆ ಎಂದರು.

ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಮಾಜ ಕಲ್ಯಾಣ ಸಚಿವ ಡಾ. ಎಚ್‌ಸಿ ಮಹದೇವಪ್ಪ ಇದ್ದರು.
ಬಡವರ ಪರ ಕೆಲಸ ಮಾಡದಿದ್ದರೆ ಸೇವೆಯಲ್ಲಿರಲು ನೀವೆಲ್ಲರೂ ಅನರ್ಹರು: ಅಧಿಕಾರಿಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ

'ಡಾ. ಬಿಆರ್ ಅಂಬೇಡ್ಕರ್ ಅವರು ತುಳಿತಕ್ಕೊಳಗಾದ ಮತ್ತು ಹಿಂದುಳಿದವರಿಗೆ ಪ್ರೇರಕ ಶಕ್ತಿಯಾಗಿದ್ದಾರೆ. ತರ್ಕಬದ್ಧ ಚಿಂತನೆಯ ಮೂಲಕ ನಮ್ಮ ಹಕ್ಕುಗಳನ್ನು ಪಡೆದುಕೊಳ್ಳಬೇಕು. ಭಾರತವು ಬಹುತ್ವದ ರಾಷ್ಟ್ರ, ವಿವಿಧತೆಯಲ್ಲಿ ಏಕತೆಯ ನಾಡು. ನಾವು ಸಂವಿಧಾನವನ್ನು ರಕ್ಷಿಸಿದರೆ, ಸಂವಿಧಾನವು ನಮ್ಮನ್ನು ರಕ್ಷಿಸುತ್ತದೆ' ಎಂದು ಹೇಳಿದರು.

ರೇಣುಕಾಸ್ವಾಮಿ ಪ್ರಕರಣದಲ್ಲಿ ಯಾವುದೇ ಒತ್ತಡವಿಲ್ಲ

ಇದೇ ವೇಳೆ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಒತ್ತಡವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್‌ಪಿಪಿ) ಅವರನ್ನೂ ಬದಲಾಯಿಸಲು ಯಾರಿಂದಲೂ ಒತ್ತಡವಿಲ್ಲ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com