7ನೇ ವೇತನ ಆಯೋಗ ಜಾರಿ: ಸಿಎಂ ಸಿದ್ದರಾಮಯ್ಯಗೆ ಅಧಿಕಾರಿ ನೀಡಿದ ಸಂಪುಟ

7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ಸಂಬಂಧ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ.
CM Siddaramaiah
ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬಹುನಿರೀಕ್ಷಿತ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ಸಂಬಂಧ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ.

ಇಂದು ವಿಧಾನಸೌಧದಲ್ಲಿ ಸಿಎಂ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟದ ಸಭೆಯಲ್ಲಿ 7ನೇ ವೇತನ ಆಯೋಗದ‌ ಶಿಫಾರಸು ಜಾರಿಗೊಳಿಸುವ ಅಧಿಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಲಾಗಿದೆ. ಈ ಮೂಲಕ ಏಳನೇ ವೇತನ ಆಯೋಗ ಜಾರಿ ಮಾಡಬೇಕೆಂಬ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರುವ ಕಾಲ ಸನ್ನಿಹಿತವಾಗಿದೆ.

7ನೇ ವೇತನ ಆಯೋಗದ ಶಿಫಾರಸಿನಂತೆ ರಾಜ್ಯ ಸರ್ಕಾರಿ ನೌಕರರ ವೇತನವನ್ನು ಶೇ.25ರಷ್ಟು ಹೆಚ್ಚಳ ಮಾಡುವಂತೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಕೆಲ ಸಚಿವರು ಸಲಹೆ ನೀಡಿದ್ದಾರೆ. ಅಂತಿಮವಾಗಿ ಸಂಪುಟ ಸಭೆ ಆಯೋಗದ ಶಿಫಾರಸು ಜಾರಿ ಅಧಿಕಾರವನ್ನ‌ ಸಿಎಂಗೆ ನೀಡಿದ್ದು, ವೇತನ ಶೇ.27ರಷ್ಟು ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಸಹ ಒಲವು ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

CM Siddaramaiah
ವರದಿ ಬಳಿಕ ಚರ್ಚಿಸಿ 7ನೇ ವೇತನ ಆಯೋಗ ಜಾರಿ ಕುರಿತು ತೀರ್ಮಾನ: ಸಿದ್ದರಾಮಯ್ಯ ಭರವಸೆ

ಈ ಕುರಿತು ರಾಜ್ಯ ಸರ್ಕಾರ ಶೀಘ್ರದಲ್ಲೇ ಅಧಿಕೃತ ನಿರ್ಧಾರ ಪ್ರಕಟಿಸುವ ಸಾಧ್ಯತೆಗಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com