ಜುಲೈನಲ್ಲಿ ಸಕಲೇಶಪುರ, ಬಳ್ಳೆಯಲ್ಲಿ ಅರ್ಜುನ ಆನೆ ಸ್ಮಾರಕ್ಕೆ ಶಿಲಾನ್ಯಾಸ: ಈಶ್ವರ ಖಂಡ್ರೆ

ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ ಡಿಸೆಂಬರ್ 4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ ಹುತಾತ್ಮನಾದ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆಯ ಸಮಾಧಿ ಸ್ಥಳದಲ್ಲಿ ಸ್ಮಾರಕ ನಿರ್ಮಾಣಕ್ಕೆ ಜುಲೈನಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಈಶ್ವರ್ ಖಂಡ್ರೆ ಸಾಂದರ್ಭಿಕ ಚಿತ್ರ
ಈಶ್ವರ್ ಖಂಡ್ರೆ ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ ಡಿಸೆಂಬರ್ 4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ ಹುತಾತ್ಮನಾದ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆಯ ಸಮಾಧಿ ಸ್ಥಳದಲ್ಲಿ ಸ್ಮಾರಕ ನಿರ್ಮಾಣಕ್ಕೆ ಜುಲೈನಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ವಿಧಾನಸೌಧದ ಮುಂಭಾಗದಲ್ಲಿಂದು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಸಫಾರಿಗಾಗಿ ವಿಶೇಷ ವಿನ್ಯಾಸದೊಂದಿಗೆ ಸಿದ್ಧವಾಗಿರುವ 3 ಹೊಸ ಮಿನಿ ಬಸ್ ಗಳಿಗೆ ಹಸಿರು ನಿಶಾನೆ ತೋರಿ ಮಾತನಾಡಿದ ಅವರು, ಹಾಸನ ಜಿಲ್ಲೆ ಯಸಳೂರು ಬಳಿ ಅರ್ಜುನ ಆನೆಯ ಸಮಾಧಿ ಸ್ಥಳದಲ್ಲಿ ಮತ್ತು ಅರ್ಜುನನ ಆವಾಸಸ್ಥಾನವಾಗಿದ್ದ, ನಾಗರಹೊಳೆಯ ಬಳ್ಳೆ ಆನೆ ಶಿಬಿರದಲ್ಲಿ ಸ್ಮಾರಕ ನಿರ್ಮಾಣ ಮಾಡಲಾಗುವುದು ಎಂದರು.

ಈ ಎರಡೂ ಸ್ಮಾರಕಗಳಲ್ಲಿ ಅರ್ಜುನ ಪ್ರತಿಕೃತಿಯನ್ನು ನಿರ್ಮಿಸಿ ಪ್ರತಿಷ್ಠಾಪಿಸಲಾಗುವುದು ಜೊತೆಗೆ ಚಿನ್ನದ ಅಂಬಾರಿ ಹೊತ್ತ ಅರ್ಜುನನ ಚಿತ್ರಗಳು, ಅರ್ಜುನ ವಿವಿಧ ಆನೆ ಕಾರ್ಯಾಚರಣೆ, ಹುಲಿ ಮತ್ತು ಚಿರತೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಚಿತ್ರಗಳನ್ನು ಹಾಕುವ ಮೂಲಕ ಜನರ ಮನದಲ್ಲಿ ಅರ್ಜುನನ ಸಾಹಸ, ಸೇವೆ, ಕೊಡುಗೆ ಚಿರಸ್ಥಾಯಿಯಾಗಿ ಉಳಿಯುವಂತೆ ಮಾಡಲಾಗುವುದು, 6 ತಿಂಗಳುಗಳ ಒಳಗಾಗಿ ಅಂದರೆ ಬರುವ ಡಿಸೆಂಬರ್ 4ರೊಳಗೆ ಅಂದರೆ ಅರ್ಜುನನ ಪ್ರಥಮ ಪುಣ್ಯತಿಥಿಯ ದಿನದೊಳಗೆ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಈಶ್ವರ್ ಖಂಡ್ರೆ ಸಾಂದರ್ಭಿಕ ಚಿತ್ರ
Arjuna ಆನೆ ಸಮಾಧಿ ಸ್ಥಳಕ್ಕೆ ಅಕ್ರಮ ಪ್ರವೇಶ: ನಟ Darshan ಅಭಿಮಾನಿ ವಿರುದ್ಧ ಅರಣ್ಯ ಇಲಾಖೆ FIR

ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಆನೆ ಶಿಬಿರಗಳಲ್ಲಿದ್ದ ಕೆಲವು ಸಾಕಾನೆಗಳು ಮೃತಪಟ್ಟಿರುವುದು ನೋವಿನ ಸಂಗತಿ. ಈ ಕುರಿತಂತೆ ತನಿಖೆ ಮಾಡಿ ವರದಿ ಸಲ್ಲಿಸಲು ಸೂಚಿಸಲಾಗಿದೆ ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು,

ಅರಣ್ಯದೊಳಗೆ ಕಳ್ಳಬೇಟೆ ನಿಗ್ರಹ ಶಿಬಿರಗಳಲ್ಲಿ ಹಗಲಿರುಳು ದುಡಿಯುವ ಸಿಬ್ಬಂದಿಗೆ 2 ಸಾವಿರ ರೂಪಾಯಿ ಪ್ರೋತ್ಸಾಹ ಧನ ನೀಡಲು ತೀರ್ಮಾನಿಸಲಾಗಿದ್ದು, ಕಡತವನ್ನು ಹಣಕಾಸು ಇಲಾಖೆಯ ಅನುಮೋದನೆಗೆ ಸಲ್ಲಿಸಲಾಗಿದೆ ಶೀಘ್ರವೇ ಪ್ರೋತ್ಸಾಹ ಧನ ನೀಡಲಾಗುವುದು ಎಂದು ತಿಳಿಸಿದರು.

ಸಫಾರಿ ಬಸ್ ವೈಶಿಷ್ಟ್ಯ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಕ್ಕೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ ಮೂರು ಸುಸಜ್ಜಿತ ಮಿನಿ ಬಸ್ ಗಳನ್ನು ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. 16,55,585 ರೂ.ಗಳಿಗೆ ಮಿನಿ ಬಸ್ ಛಾಸಿ ಖರೀದಿಸಲಾಗಿದ್ದು, ರಮೇಶ್ ಗೋವಿಂದನ್ ನೀಡಿರುವ 14,81,590 ರೂ. ಮತ್ತು ಕೊಯಮತ್ತೂರಿನ ಹರೀ ಶಾಂತಾರಾಮ್ ಅವರು ನೀಡಿರುವ 20 ಲಕ್ಷ ರೂ. ಸಿ.ಎಸ್.ಆರ್. ನೆರವಿನಿಂದ ಕವಚ ನಿರ್ಮಾಣ ಮಾಡಲಾಗಿದ್ದು, ಈ ಬಸ್ ಗಳು ಪ್ರವಾಸಿಗರಿಗೆ ಹೊಸ ಅನುಭವ ನೀಡುತ್ತವೆ. ವಿಧಾನಸೌಧದ ಮುಂದೆ ಈ ಬಸ್ ಗಳಿಗೆ ಹಸಿರು ನಿಶಾನೆ ತೋರಿದ ಸಚಿವರು, ನಂತರ ಸಫಾರಿ ವಾಹನದಲ್ಲಿ ವಿಕಾಸಸೌಧಕ್ಕೆ ಅಧಿಕಾರಿಗಳೊಂದಿಗೆ ಪ್ರಯಾಣಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com