ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಸೇರಿ ನಾಲ್ವರಿಗೆ ಮತ್ತೆ ಎರಡು ದಿನ ಪೊಲೀಸ್ ಕಸ್ಟಡಿ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ತೂಗುದೀಪ್ ಮತ್ತು ಇತರ ಮೂವರು ಆರೋಪಿಗಳನ್ನು ಮತ್ತೆ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿ.
ನಟ ದರ್ಶನ್ ಮತ್ತು ರೇಣುಕಾಸ್ವಾಮಿ (ಸಂಗ್ರಹ ಚಿತ್ರ)
ನಟ ದರ್ಶನ್ ಮತ್ತು ರೇಣುಕಾಸ್ವಾಮಿ (ಸಂಗ್ರಹ ಚಿತ್ರ)

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ತೂಗುದೀಪ್ ಮತ್ತು ಇತರ ಮೂವರು ಆರೋಪಿಗಳನ್ನು ಮತ್ತೆ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಬೆಂಗಳೂರು ಕೋರ್ಟ್ ಗುರುವಾರ ಆದೇಶಿಸಿದೆ.

ಆರೋಪಿಗಳ ಪೊಲೀಸ್ ಕಸ್ಟಡಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಎಲ್ಲಾ ಆರೋಪಿಗಳನ್ನು ಇಂದು ಮಧ್ಯಾಹ್ನ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಿದರು ಮತ್ತು ಹೆಚ್ಚಿನ ವಿಚಾರಣೆಗಾಗಿ ದರ್ಶನ್ ಹಾಗೂ ಇತರೆ ಮೂವರು ಆರೋಪಿಗಳನ್ನು ನಾಲ್ಕು ದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿದರು.

ಪೊಲೀಸರ ಮನವಿ ಪುರಸ್ಕರಿಸಿದ ಕೋರ್ಟ್, ದರ್ಶನ್ ಹಾಗೂ ಇತರ ಮೂವರು ಆರೋಪಿಗಳನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ದರ್ಶನ್ ಸ್ನೇಹಿತೆ ಪವಿತ್ರಾ ಗೌಡ ಸೇರಿದಂತೆ ಇತರ 13 ಆರೋಪಿಗಳನ್ನು ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ನಟ ದರ್ಶನ್ ಮತ್ತು ರೇಣುಕಾಸ್ವಾಮಿ (ಸಂಗ್ರಹ ಚಿತ್ರ)
ರೇಣುಕಾಸ್ವಾಮಿ ಮರ್ಡರ್ ಕೇಸ್: ತನ್ನ ಹೆಸರು ಬರದಂತೆ ನೋಡಿಕೊಳ್ಳಲು 30 ಲಕ್ಷ ರೂ. ನೀಡಿಕೆ, ನಟ ದರ್ಶನ್ ತಪ್ಪೊಪ್ಪಿಗೆ!

ಕೊಲೆ ಪ್ರಕರಣದಲ್ಲಿ ಒಟ್ಟು 17 ಆರೋಪಿಗಳನ್ನು ಬಂಧಿಸಲಾಗಿದೆ.

ರೇಣುಕಾಸ್ವಾಮಿ ಎಂಬ ವ್ಯಕ್ತಿಯು ಪವಿತ್ರಾ ಗೌಡ ಅವರಿಗೆ ಅಶ್ಲೀಲ ಮೆಸೇಜ್​ ಕಳಿಸಿದ್ದಾನೆ ಎಂಬ ಕಾರಣಕ್ಕೆ ಆತನನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆತಂದು ಹತ್ಯೆ ಮಾಡಲಾಗಿದೆ.

ಈ ಪ್ರಕರಣ ಸಂಬಂಧ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್​ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಪೊಲೀಸರು ಈಗಾಗಲೇ ಸಾಕಷ್ಟು ಸಾಕ್ಷ್ಯಗಳನ್ನು ಕಲೆ ಹಾಕಿದ್ದಾರೆ. ಅನೇಕ ಸ್ಥಳಗಳಿಗೆ ತೆರಳಿ ಮಹಜರು ಮಾಡಲಾಗಿದೆ. ಪವಿತ್ರಾ ಗೌಡ ಮನೆಯಲ್ಲೂ ಮಹಜರು ಮಾಡಲಾಗಿತ್ತು. ತನಿಖೆ ಇನ್ನೂ ಪ್ರಗತಿಯಲ್ಲಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com