ರಾಜ್ಯ

ಬೆಂಗಳೂರು: 65 ಕೆಜಿಗೂ ಅಧಿಕ ಗಾಂಜಾ ವಶ, ಇಬ್ಬರು ಪೆಡ್ಲರ್ ಗಳ ಬಂಧನ

ಬೆಂಗಳೂರು: 65 ಕೆಜಿಗೂ ಅಧಿಕ ಗಾಂಜಾ ವಶ, ಇಬ್ಬರು ಪೆಡ್ಲರ್ ಗಳ ಬಂಧನ
ಗಾಂಜಾ ವಶ
Published On :

ಬೆಂಗಳೂರು: ಚಲಿಸುವ ರೈಲುಗಳ ಮೇಲೆ ಕಳೆದ ಐದು ದಿನಗಳಲ್ಲಿ ದಾಳಿ ನಡೆಸಿದ ಸರ್ಕಾರಿ ರೈಲ್ವೆ ಪೊಲೀಸರು 65.47 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

65,47,900 ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡು ಇಬ್ಬರು ಪೆಡ್ಲರ್‌ಗಳನ್ನು ಬಂಧಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಜೂನ್ 13 ರಿಂದ 18 ರವರೆಗೆ ಜಿಆರ್‌ಪಿಯ ವಿಶೇಷ ಪಡೆ ದಾಳಿ ನಡೆಸಿತು. ದಾಳಿಯ ವೇಳೆ ಅಕ್ರಮವಾಗಿ ಗಾಂಜಾ ಸಾಗಾಟಕ್ಕೆ ಸಂಬಂಧಿಸಿದಂತೆ ಒಟ್ಟು ನಾಲ್ಕು ಪ್ರಕರಣಗಳನ್ನು ದಾಖಲಿಸಿದೆ.

ಜಿಆರ್‌ಪಿ ಡೆಪ್ಯುಟಿ ಎಸ್ಪಿ, ಬೆಂಗಳೂರು, ರವಿಕುಮಾರ್, ಸರ್ಕಲ್ ಇನ್ಸ್‌ಪೆಕ್ಟರ್ ಬೆಂಗಳೂರು ಎಂಎನ್ ರವಿಶಂಕರ್ ಮತ್ತು ಸಬ್ ಇನ್‌ಸ್ಪೆಕ್ಟರ್‌ಗಳಾದ ವಸಂತಕುಮಾರ್ ಮತ್ತು ಸತ್ಯಪ್ಪ ಗಾಂಜಾ ವಶಪಡಿಸಿಕೊಳ್ಳುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.