'ಎಣ್ಣೆ' ಪ್ರಿಯರಿಗೆ ಗುಡ್ ನ್ಯೂಸ್: ಜುಲೈ 1ರಿಂದ ದುಬಾರಿ ಮದ್ಯ ಕಡಿಮೆ ಬೆಲೆಗೆ ಲಭ್ಯ!

ಜುಲೈ 1 ರಿಂದ ಕರ್ನಾಟಕದಲ್ಲಿ ಪ್ರೀಮಿಯಂ ಮದ್ಯದ ಬೆಲೆಗಳು ಭಾರಿ ಇಳಿಕೆಯಾಗಲಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಘೋಷಿಸಿದಂತೆ, ರಾಜ್ಯ ಸರ್ಕಾರವು ಗುರುವಾರ ಕರಡು ಅಧಿಸೂಚನೆ ಹೊರಡಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಜುಲೈ 1 ರಿಂದ ಕರ್ನಾಟಕದಲ್ಲಿ ಪ್ರೀಮಿಯಂ ಮದ್ಯದ ಬೆಲೆಗಳು ಭಾರಿ ಇಳಿಕೆಯಾಗಲಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಘೋಷಿಸಿದಂತೆ, ರಾಜ್ಯ ಸರ್ಕಾರವು ಗುರುವಾರ ಕರಡು ಅಧಿಸೂಚನೆ ಹೊರಡಿಸಿದೆ.

ನೆರೆಹೊರೆಯ ರಾಜ್ಯಗಳಲ್ಲಿನ ಮದ್ಯದ ಬೆಲೆಗೆ ಅನುಗುಣವಾಗಿ ಕರ್ನಾಟಕದಲ್ಲೂ ಸೆಮಿ ಪ್ರೀಮಿಯಂ ಮತ್ತು ಪ್ರೀಮಿಯಂ ಬ್ರಾಂಡ್‌ಗಳ ಮದ್ಯದ ಬೆಲೆಯನ್ನು ಪರಿಷ್ಕರಿಸುವುದಾಗಿ ಸರಕಾರ ಬಜೆಟ್‌ನಲ್ಲೇ ಘೋಷಿಸಿತ್ತು. ಈ ಘೋಷಣೆ ಈಗ ಜಾರಿಯಾಗುತ್ತಿದ್ದು, ಹೊರ ರಾಜ್ಯಗಳಲ್ಲಿನ ಮದ್ಯದ ದರಪಟ್ಟಿ ಆಧರಿಸಿ ಹೊಸದಾಗಿ ಬೆಲೆ ನಿಗದಿಪಡಿಸಲಾಗಿದೆ.

ಅಧಿಸೂಚನೆಯ ಪ್ರಕಾರ, ಹೊಸ ಬೆಲೆಗಳು ಜುಲೈ 1 ರಿಂದ ಜಾರಿಗೆ ಬರಲಿವೆ. ಅಬಕಾರಿ ಇಲಾಖೆಯು 16 ವರ್ಗಗಳ ಅತ್ಯಾಧುನಿಕ ಮದ್ಯದ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಲು ಆಕ್ಷೇಪಣೆಗಳನ್ನು ಆಹ್ವಾನಿಸಿದೆ. ಜುಲೈ 1 ರಿಂದ ಬ್ರಾಂಡ್‌ಗಳ ಆಧಾರದ ಮೇಲೆ ಬೆಲೆಗಳು 100 ರಿಂದ 2,000 ರೂ.ವರೆಗೆ ಕಡಿಮೆಯಾಗಲಿವೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಬ್ರಾಂಡಿ, ವಿಸ್ಕಿ, ಜಿನ್, ರಮ್ ಮತ್ತು - ಬಿಯರ್, ವೈನ್, ಟಾಡಿ ಮತ್ತು ಫೆನ್ನಿ ಹೊರತುಪಡಿಸಿ ಇತರ ಮದ್ಯದ ಬೆಲೆಗಳು ಕಡಿಮೆಯಾಗಲಿದೆ" ಎಂದು ಮೂಲಗಳು ತಿಳಿಸಿವೆ. ನಿಖರವಾದ ಕಡಿತವು ಬ್ರಾಂಡ್ ಮತ್ತು ಪ್ರಮಾಣವನ್ನು ಅವಲಂಬಿಸಿರುತ್ತದೆ.

ಸಾಂದರ್ಭಿಕ ಚಿತ್ರ
ಬಜೆಟ್​ನಲ್ಲಿ ದರ ಪರಿಷ್ಕರಣೆ: ಇಂದಿನಿಂದ ಮದ್ಯದ ಬೆಲೆ ಶೇ.20ರಷ್ಟು ಏರಿಕೆ

ರಾಜ್ಯದಲ್ಲಿ ಎಇಡಿ ಪ್ರಮಾಣ ಹೆಚ್ಚಿರುವ ಕಾರಣಕ್ಕೆ ನೆರೆಹೊರೆಯ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಸೆಮಿ ಪ್ರೀಮಿಯಂ ಮತ್ತು ಪ್ರೀಮಿಯಂ ಸ್ಲ್ಯಾಬ್‌ಗಳ ಮದ್ಯದ ದರ ದುಬಾರಿಯಾಗಿದೆ. ಈ ಕಾರಣಕ್ಕೆ ನೆರೆಯ ರಾಜ್ಯಗಳಿಂದ ರಾಜ್ಯಕ್ಕೆ ಅಕ್ರಮವಾಗಿ ಹೆಚ್ಚಿನ ಪ್ರಮಾಣದಲ್ಲಿ ಮದ್ಯ ಪೂರೈಕೆಯಾಗುತ್ತಿದೆ. ಗಡಿ ಭಾಗದ ಜಿಲ್ಲೆಗಳ ಜನರು ನೆರೆಯ ರಾಜ್ಯಗಳಿಗೆ ಹೋಗಿ ಮದ್ಯ ಖರೀದಿಸುತ್ತಿದ್ದಾರೆ. ಇದರಿಂದ ರಾಜ್ಯ ಸರಕಾರದ ಬೊಕ್ಕಸಕ್ಕೆ ಅಬಕಾರಿ ತೆರಿಗೆ ನಷ್ಟವಾಗುತ್ತಿದೆ. ಮದ್ಯ ಮಾರಾಟ ವೃದ್ಧಿ, ಅಬಕಾರಿ ತೆರಿಗೆಯ ಮೂಲದ ವರಮಾನವನ್ನು ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ಸರಕಾರ ಎಇಡಿ ಇಳಿಕೆಯ ನಿರ್ಧಾರ ಕೈಗೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನೆರೆಯ ರಾಜ್ಯಗಳಲ್ಲಿನ ಮದ್ಯ ದರಗಳಿಗೆ ಸರಿ ಸಮನಾಗಿ ರಾಜ್ಯದಲ್ಲೂ ಮದ್ಯದ ದರ ಪರಿಷ್ಕರಿಸಲು ಕರ್ನಾಟಕ ಅಬಕಾರಿ (ಅಬಕಾರಿ ಸುಂಕಗಳು ಮತ್ತು ಶುಲ್ಕಗಳು) ನಿಯಮಗಳು- 1968ಕ್ಕೆ ತಿದ್ದುಪಡಿ ತರಲು ಕರಡು ಅಧಿಸೂಚನೆ ಪ್ರಕಟಿಸಲಾಗಿದೆ. ಜುಲೈ 1ರಿಂದ ಪರಿಷ್ಕೃತ ದರಗಳು ಜಾರಿಗೆ ಬರಲಿವೆ. ರಾಜ್ಯದಲ್ಲಿ ಈವರೆಗೆ 18 ಸ್ಲ್ಯಾಬ್‌ಗಳಲ್ಲಿ ಮದ್ಯದ ಮೇಲೆ ಅಬಕಾರಿ ತೆರಿಗೆ ವಿಧಿಸಲಾಗುತ್ತಿತ್ತು. ಈಗ ಸ್ಲ್ಯಾಬ್‌ಗಳ ಸಂಖ್ಯೆಯನ್ನು 16ಕ್ಕೆ ಇಳಿಸಲಾಗಿದೆ. ಸ್ಕಾಚ್ ವಿಸ್ಕಿಯ ಪ್ರೀಮಿಯಂ ಬ್ರಾಂಡ್‌ನ ಬೆಲೆ ಕರ್ನಾಟಕದಲ್ಲಿ ಸುಮಾರು 7,000 ರೂ.ಗಳು, ಆದರೆ ಇತರ ರಾಜ್ಯಗಳಲ್ಲಿ ಇದು ತುಂಬಾ ಕಡಿಮೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com