ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಸೇರಿ ನಾಲ್ವರಿಗೆ ಜುಲೈ 4 ರವರೆಗೆ ನ್ಯಾಯಾಂಗ ಬಂಧನ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ತೂಗುದೀಪ್ ಮತ್ತು ಗ್ಯಾಂಗ್ ಜೈಲು ಪಾಲಾಗಿದೆ.
ರೇಣುಕಾಸ್ವಾಮಿ ಮತ್ತು ನಟ ದರ್ಶನ್ (ಸಂಗ್ರಹ ಚಿತ್ರ)
ರೇಣುಕಾಸ್ವಾಮಿ ಮತ್ತು ನಟ ದರ್ಶನ್ (ಸಂಗ್ರಹ ಚಿತ್ರ)

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ತೂಗುದೀಪ್ ಮತ್ತು ಗ್ಯಾಂಗ್ ಜೈಲು ಪಾಲಾಗಿದ್ದು, ನಾಲ್ವರು ಆರೋಪಿಗಳನ್ನು 24ನೇ ಎಸಿಎಂಎಂ ಕೋರ್ಟ್ ಶನಿವಾರ ಜುಲೈ 4 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಹಾಗೂ ಇತರ ಆರೋಪಿಗಳಾದ ವಿನಯ್, ಪ್ರದೋಷ್, ಧನರಾಜ್ ಅವರ ಎರಡು ದಿನದ ಪೊಲೀಸ್ ಕಸ್ಟಡಿ ಅವಧಿ ಮುಗಿದ ಕಾರಣ ಇಂದು ಅವರನ್ನು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್​ಗೆ ಹಾಜರುಪಡಿಸಲಾಯ್ತು.

ಆರೋಪಿಗಳ ವಿಚಾರಣೆ ನಡೆಸಿದ ಕೋರ್ಟ್, ಪೊಲೀಸರು ಮತ್ತೆ ಕಸ್ಟಡಿಗೆ ಕೇಳಲಿಲ್ಲವಾದ್ದರಿಂದ ದರ್ಶನ್ ಹಾಗೂ ಇತರೆ ಮೂವರು ಆರೋಪಿಗಳಿಗೆ 13 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಇದೇ ಪ್ರಕರಣದ ಇತರ ಆರೋಪಿಗಳಾದ ಪವಿತ್ರಾ ಗೌಡ ಹಾಗೂ ಇತರರಿಗೆ ಎರಡು ದಿನಗಳ ಹಿಂದೆಯೇ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅವರು ಆರೋಪಿಗಳನ್ನು ಪ್ರತ್ಯೇಕವಾಗಿ ಮತ್ತು ಕರ್ನಾಟಕದಾದ್ಯಂತ ವಿವಿಧ ಜೈಲುಗಳಲ್ಲಿ ಇರಿಸಲು ನಿರ್ದೇಶಿಸುವಂತೆ ನ್ಯಾಯಾಲಯಕ್ಕ ಮನವಿ ಮಾಡಿದರು. ಇದನ್ನು ದರ್ಶನ್ ಅವರ ವಕೀಲರು ವಿರೋಧಿಸಿದರು.

ದರ್ಶನ್ ಮತ್ತು ಅವರ ಸಹಚರರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಯಿತು.

ಅಪಾರ ಸಂಖ್ಯೆಯ ಅಭಿಮಾನಿಗಳು ನ್ಯಾಯಾಲಯದ ಮುಂದೆ ಜಮಾಯಿಸಿ ದರ್ಶನ್ ಪರ ಘೋಷಣೆಗಳನ್ನು ಕೂಗಿದರು. ಪೊಲೀಸ್ ವ್ಯಾನ್‌ನಿಂದ ನಟ ಕೂಡ ಅವರತ್ತ ಕೈ ಬೀಸಿದರು.

ರೇಣುಕಾಸ್ವಾಮಿ ಮತ್ತು ನಟ ದರ್ಶನ್ (ಸಂಗ್ರಹ ಚಿತ್ರ)
ರಾತ್ರಿಯಿಡೀ ನಿದ್ದೆಯಿಲ್ಲ, ನಸುಕಿನ ಜಾವ ವಾಕಿಂಗ್... ಜೈಲಿನಲ್ಲಿ ಪರಿತಪಿಸುತ್ತಿರುವ ಪವಿತ್ರಾ ಗೌಡ

ರೇಣುಕಾ ಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 11 ರಂದು ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳನ್ನು ಬಂಧಿಸಲಾಗಿತ್ತು. ಜೂನ್ 11 ರಿಂದ ನಟ ದರ್ಶನ್ ಪೊಲೀಸ್ ಕಸ್ಟಡಿಯಲ್ಲಿದ್ದರು.

ಎರಡು ದಿನಗಳ ಹಿಂದೆ ನಟನ ಸ್ನೇಹಿತೆ ಪವಿತ್ರಾ ಗೌಡ ಸೇರಿದಂತೆ 13 ಆರೋಪಿಗಳನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ರೇಣುಕಾಸ್ವಾಮಿ ಎಂಬ ವ್ಯಕ್ತಿಯು ಪವಿತ್ರಾ ಗೌಡ ಅವರಿಗೆ ಅಶ್ಲೀಲ ಮೆಸೇಜ್​ ಕಳಿಸಿದ್ದಾನೆ ಎಂಬ ಕಾರಣಕ್ಕೆ ಆತನನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆತಂದು ಹತ್ಯೆ ಮಾಡಲಾಗಿದೆ.

ಈ ಪ್ರಕರಣ ಸಂಬಂಧ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್​ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಪೊಲೀಸರು ಈಗಾಗಲೇ ಸಾಕಷ್ಟು ಸಾಕ್ಷ್ಯಗಳನ್ನು ಕಲೆ ಹಾಕಿದ್ದಾರೆ. ಅನೇಕ ಸ್ಥಳಗಳಿಗೆ ತೆರಳಿ ಮಹಜರು ಮಾಡಲಾಗಿದೆ. ಪವಿತ್ರಾ ಗೌಡ ಮನೆಯಲ್ಲೂ ಮಹಜರು ಮಾಡಲಾಗಿತ್ತು. ತನಿಖೆ ಇನ್ನೂ ಪ್ರಗತಿಯಲ್ಲಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com