
ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಬಂಧನಕ್ಕೊಳಗಾಗಿ ಜೈಲುಪಾಲಾಗಿರುವ ಎಂ ಎಲ್ಸಿ ಸೂರಜ್ ರೇವಣ್ಣಗೆ ವಿಚಾರಣಾಧೀನ ಕೈದಿ ಸಂಖ್ಯೆಯನ್ನು ನೀಡಲಾಗಿದೆ.
14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದ ಹಿನ್ನೆಲೆಯಲ್ಲಿ ಜೈಲು ಪಾಲಾಗಿರುವ ಸೂರಜ್ ರೇವಣ್ಣರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಕ್ವಾರಂಟೈನ್ ಸೆಲ್ ನಲ್ಲಿರಿಸಲಾಗಿದೆ. ಜೈಲಿನ ಅಧಿಕಾರಿಗಳು ಸೂರಜ್ ರೇವಣ್ಣಗೆ ವಿಚಾರಣಾಧೀನ ಕೈದಿ ಸಂಖ್ಯೆ 6141ನ್ನು ನೀಡಿದ್ದಾರೆ.
ಏನಿದು ಪ್ರಕರಣ?: ತಮ್ಮ ಮೇಲೆ ಸೂರಜ್ ರೇವಣ್ಣ ಅಸಹಜವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಹಾಸನದ ಹೊಳೆನರಸೀಪುರ ಠಾಣೆಯಲ್ಲಿ ಯುವಕನೊಬ್ಬ ದೂರು ನೀಡಿದ್ದ. ದೂರು ನೀಡಿದ್ದ ಯುವಕನ ವಿರುದ್ಧವೇ ಪ್ರತಿದೂರು ದಾಖಲಿಸಲು ಹಾಸನದ ಸೆನ್ ಪೊಲೀಸ್ ಠಾಣೆಗೆ ಮೊನ್ನೆ ಶನಿವಾರ ಸಾಯಂಕಾಲ ತೆರಳಿದ್ದ ಸೂರಜ್ ನನ್ನು ಪೊಲೀಸರು ಸುದೀರ್ಘವಾಗಿ ವಿಚಾರಣೆ ನಡೆಸಿ ನಿನ್ನೆ ಬಂಧಿಸಿದ್ದರು.
Advertisement