ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಮನೆಯಲ್ಲಿ ಅಗ್ನಿ ಅವಘಡ

ಉತ್ತರ ಕನ್ನಡ ಮಾಜಿ ಸಂಸದ ಅನಂತಕುಮಾರ ಹೆಗಡೆ ಅವರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಮಂಗಳವಾರ ನಡೆದಿದೆ.
ಅನಂತ್ ಕುಮಾರ್ ಹೆಗಡೆ
ಅನಂತ್ ಕುಮಾರ್ ಹೆಗಡೆ
Updated on

ಶಿರಸಿ: ಉತ್ತರ ಕನ್ನಡ ಮಾಜಿ ಸಂಸದ ಅನಂತಕುಮಾರ ಹೆಗಡೆ ಅವರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಮಂಗಳವಾರ ನಡೆದಿದೆ.

ಶಿರಸಿಯ ಕೆ.ಎಚ್.ಬಿ. ಕಾಲೋನಿಯಲ್ಲಿರುವ ಅನಂತಕುಮಾರ್ ಹೆಗಡೆಯವರ ಮನೆಯೊಳಗಿನ ಜಿಮ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿರಬಹುದು ಎಂದು ಅಂದಾಜಿಸಲಾಗಿದೆ.

ಅನಂತ್ ಕುಮಾರ್ ಹೆಗಡೆ
ಮಾಧ್ಯಮಗಳನ್ನು ನಾಯಿಗೆ ಹೋಲಿಸಿ ನಾಲಿಗೆ ಹರಿಬಿಟ್ಟ ಸಂಸದ ಅನಂತ್ ಕುಮಾರ್ ಹೆಗಡೆ!

ಬೆಂಕಿಯಿಂದ ಜಿಮ್‌ನಲ್ಲಿ ಇದ್ದ ಉಪಕರಣಗಳು ಹಲವು ಸುಟ್ಟು ಹಾನಿಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸಕಾಲಕ್ಕೆ ಬಂದು ಹೆಚ್ಚಿನ ಅನಾಹುತ ತಡೆದಿದ್ದಾರೆ. ಮಾಜಿ ಸಂಸದ ಮತ್ತು ಅವರ ಕುಟುಂಬದವರು ಮನೆಯಲ್ಲಿ ಇಲ್ಲದ ಸಂದರ್ಭದಲ್ಲಿ ಘಟನೆ‌ ನಡೆದಿದ್ದು, ಮನೆಯ ಕಾವಲುಗಾರರಿಂದ ಘಟನೆ ಬೆಳಕಿಗೆ ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com