ಬಾಗಲಕೋಟೆ: ಜಾತ್ರೆ ದಿನವೇ ತಗಡಿನ ಶೆಡ್ ಮೇಲೆ ಬಿದ್ದ ಹೈಟೆನ್ಶನ್ ವಿದ್ಯುತ್ ತಂತಿ; ಇಬ್ಬರು ದುರ್ಮರಣ

ಬಾಗಲಕೋಟೆ ಜಿಲ್ಲೆಯ ತೇರದಾಳ ಪಟ್ಟಣದ ದಾಸರಮಡ್ಡಿಯಲ್ಲಿ ಹೈಟೆನ್ಶನ್ ವಿದ್ಯುತ್ ತಂತಿ ತುಂಡಾಗಿ ತಗಡಿನ ಶೆಡ್ ಮನೆ ಮೇಲೆ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಬಾಗಲಕೋಟೆ: ಜಾತ್ರೆ ದಿನವೇ ತಗಡಿನ ಶೆಡ್ ಮೇಲೆ ಬಿದ್ದ ಹೈಟೆನ್ಶನ್ ವಿದ್ಯುತ್ ತಂತಿ; ಇಬ್ಬರು ದುರ್ಮರಣ
Updated on

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ತೇರದಾಳ ಪಟ್ಟಣದ ದಾಸರಮಡ್ಡಿಯಲ್ಲಿ ಹೈಟೆನ್ಶನ್ ವಿದ್ಯುತ್ ತಂತಿ ತುಂಡಾಗಿ ತಗಡಿನ ಶೆಡ್ ಮನೆ ಮೇಲೆ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತರು 22 ವರ್ಷದ ಸಂತೋಷ ಸುಣಗಾರ ಮತ್ತು ಸಂತೋಷ್​ ಅತ್ತೆ 32 ವರ್ಷದ ಶೋಭಾ ಹುಲ್ಲೆಣ್ಣವರ ಎಂದು ತಿಳಿದುಬಂದಿದೆ. ಇನ್ನುಳಿದಂತೆ ಶ್ರೀಕಾಂತ್, ಮಹೇಶ್, ಕಸ್ತೂರಿ ಹಾಗೂ ಸಂಗೀತಾ ಕಾಮಶೆಟ್ಟಿ ಸೇರಿ ನಾಲ್ವರಿಗೆ ಗಾಯವಾಗಿದ್ದು, ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಾಗಲಕೋಟೆಯ ದಾಸರಮಡ್ಡಿಯಲ್ಲಿ ದುರ್ಗಾದೇವಿ ಜಾತ್ರೆಯಿತ್ತು. ಜಾತ್ರೆಗಾಗಿ ಸಂಬಂಧಿಕರು ಮನೆಗೆ ಬಂದಿದ್ದರು ಈ ವೇಳೆ ಅವಘಡ ಸಂಭವಿಸಿದೆ.

ಬಾಗಲಕೋಟೆ: ಜಾತ್ರೆ ದಿನವೇ ತಗಡಿನ ಶೆಡ್ ಮೇಲೆ ಬಿದ್ದ ಹೈಟೆನ್ಶನ್ ವಿದ್ಯುತ್ ತಂತಿ; ಇಬ್ಬರು ದುರ್ಮರಣ
ಕೋಟೆ ಬೆಟ್ಟ ವೀಕ್ಷಣೆಗೆ ಬಂದಿದ್ದ ಪ್ರವಾಸಿಗರ ಮೇಲೆ ಹಲ್ಲೆ: ಪೊಲೀಸರ ಕ್ರಮಕ್ಕೆ ಸ್ಥಳೀಯರ ವಿರೋಧ!

ಇನ್ನು ಮೃತ ಸಂತೋಷ್​ ಹಾಗೂ ಗಾಯಗೊಂಡಿರುವ ಸಂಗೀತಾ ನಡುವೆ ನಿಶ್ಚಿತಾರ್ಥವಾಗಿದ್ದು ಇದೇ‌ ಜೂನ್ 28ರಂದು ಮದುವೆ ನಿಗದಿಯಾಗಿತ್ತು. ಆದರೆ ದುರಾದೃಷ್ಟವಶಾತ್ ಸಂತೋಷ್ ಮೃತಪಟ್ಟಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಸ್ಥಳಕ್ಕೆ‌ ತೇರದಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com