
ಮೈಸೂರು: ಮೈಸೂರಿನ ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕರಿಗೆ ಹನಿಟ್ರ್ಯಾಪ್ ಮೂಲಕ ಬೆದರಿಕೆ ಹಾಕಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸಿಸಿಬಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ ಶಾಸಕರು ನಕಲಿ ವಿಡಿಯೋ ಸೃಷ್ಟಿಸಿ ಕೋಟ್ಯಂತರ ರೂಪಾಯಿಗಳಿಗೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿದ್ದರು.
ಶಾಸಕರ ದೂರನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಮೈಸೂರಿನ ಸಂತೋಷ್ ಹಾಗೂ ಪುಟ್ಟರಾಜ್ ಬಂಧಿತ ಆರೋಪಿಗಳಾಗಿದ್ದಾರೆ.
ಬಂಧಿತ ವ್ಯಕ್ತಿಗಳು ಗಣ್ಯರನ್ನು ಟಾರ್ಗೆಟ್ ಮಾಡಿ, ಚಲನವಲನಗಳನ್ನು ಅವರು ಉಳಿದುಕೊಳ್ಳುವ ಹೊಟೇಲ್ ಗಳಲ್ಲೇ ರೂಮ್ ಪಡೆದು ಅಲ್ಲಿಯೇ ಉಳಿದುಕೊಂಡು, ನಕಲಿ ವಿಡಿಯೋಗಳನ್ನು ಸೃಷ್ಟಿಸುತ್ತಿದ್ದರು ಬಳಿಕ ಆ ವಿಡಿಯೋವನ್ನು ವಿಐಪಿಗಳಿಗೆ ಕಳುಹಿಸಿ, ಹಣಕ್ಕಾಗಿ ಬೇಡಿಕೆ ಇಡುತ್ತಿದ್ದರು ಹಣ ನೀಡದಿದ್ದರೇ ವಿಡಿಯೋ ವೈರಲ್ ಮಾಡಿ ಜೊತೆಗೆ ಪೊಲೀಸರಿಗೆ ಕೊಡುವುದಾಗಿ ಬ್ಲ್ಯಾಕ್ ಮೇಲೆ ಮಾಡುತ್ತಿದ್ದರು ಎಂದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.
ಪ್ರಕರಣ ಸಂಬಂಧ ಮಾತನಾಡಿರುವ ಶಾಸಕ ಹರೀಶ್‌ಗೌಡ, ನನ್ನ ಪರಿಚಿತರಿಗೆ ಹನಿಟ್ರ್ಯಾಪ್ ಮಾಡಲಾಗಿತ್ತು. ಈ ಬಗ್ಗೆ ನಾನೇ ದೂರು ನೀಡಿದ್ದೆ. ಎರಡು ನಂಬರ್‌ಗಳಿಂದ ಕರೆ ಮಾಡುತ್ತಿದ್ದರು. ಆ ನಂಬರ್ ಮೂಲಕ ಟ್ರೇಸ್ ಮಾಡಿ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿಸಿದ್ದಾರೆ.
Advertisement