Prajwal Revanna ಬಲವಂತವಾಗಿ ನನ್ನನು ಬೆತ್ತಲಾಗಿಸುತ್ತಿದ್ದರು: 4ನೇ ದೂರಿನಲ್ಲಿ ಸಂತ್ರಸ್ತೆ ಹೇಳಿಕೆ!

ಸಿಐಡಿ ಸೈಬರ್ ಕ್ರೈಂ ಠಾಣೆಯಲ್ಲಿ ಸಂತ್ರಸ್ತೆ ನೀಡಿದ ದೂರಿನನ್ವಯ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದ್ದು, ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾದ ನಾಲ್ಕನೆಯ ಪ್ರಕರಣವಾಗಿದೆ.
Prajwal Revanna
ಪ್ರಜ್ವಲ್ ರೇವಣ್ಣ

ಬೆಂಗಳೂರು: ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ, ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ನಾಲ್ಕನೇ ಪ್ರಕರಣ ದಾಖಲಾಗಿದ್ದು, ಪ್ರಜ್ವಲ್ ರೇವಣ್ಣ ಬಲವಂತವಾಗಿ ನನ್ನನು ಬೆತ್ತಲಾಗಿಸುತ್ತಿದ್ದರು ಎಂದು ದೂರಿನಲ್ಲಿ ಸಂತ್ರಸ್ತೆ ಹೇಳಿಕೊಂಡಿದ್ದಾರೆ.

ಸಿಐಡಿ ಸೈಬರ್ ಕ್ರೈಂ ಠಾಣೆಯಲ್ಲಿ ಸಂತ್ರಸ್ತೆ ನೀಡಿದ ದೂರಿನನ್ವಯ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದ್ದು, ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾದ ನಾಲ್ಕನೆಯ ಪ್ರಕರಣವಾಗಿದೆ.

ಪೆನ್ ಡ್ರೈವ್ ಸೋರಿಕೆ ಪ್ರಕರಣದಲ್ಲಿ ಮಾಜಿ ಶಾಸಕ ಪ್ರೀತಂ ಗೌಡ ಅವರ ಹೆಸರು ಕೇಳಿಬಂದಿದೆ.

Prajwal Revanna
ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ; ಮಾಜಿ ಸಂಸದಗೆ ಜೈಲೇ ಗತಿ

ಸಂತ್ರಸ್ತೆ ನೀಡಿರುವ ದೂರಿನಲ್ಲಿ ಮಗನ ಶಾಲೆ ವಿಚಾರಕ್ಕೆ ಭೇಟಿ ವೇಳೆಯ ಮೊಬೈಲ್ ಫೋನ್ ನಂಬರ್ ಪಡೆದಿದ್ದ ಪ್ರಜ್ವಲ್ ನನಗೆ ವಿಡಿಯೊ ಕಾಲ್ ಮಾಡಿ ದಿನ ನಿತ್ಯ ಮಾತಾಡುತ್ತಿದ್ದರು. ವಿಡಿಯೊ ಕಾಲ್ ಮಾಡಿ ವಿವಸ್ತ್ರವಾಗುವಂತೆ ಒತ್ತಾಯಿಸಿ ಬೆತ್ತಲಾಗುತ್ತಿದ್ದ ನನ್ನನ್ನು ನೋಡುತ್ತ ಹಸ್ತಮೈಥುನ ಮಾಡಿಕೊಳ್ಳುತ್ತಿದ್ದರು.

ವಿವಸ್ತ್ರವಾಗಲು ಒಪ್ಪದಿದ್ದಾಗ ವಿಡಿಯೊ ಸೇವ್ ಮಾಡಿಕೊಂಡಿರುವುದಾಗಿಯೂ, ಅದನ್ನು ವೈರಲ್ ಮಾಡುವುದಾಗಿಯೂ ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ನಂತರ ಏಕಾಏಕಿ ಸಾಮಾಜಿಕ ಜಾಲತಾಣದಲ್ಲಿ ಈ ಫೋಟೊ ವೈರಲ್ ಆಗಿರುವ ವಿಚಾರ ನನ್ನ ಗಮನಕ್ಕೆ ಬಂದು ಪ್ರಜ್ವಲ್‌ನನ್ನು ಸಂಪರ್ಕ ಮಾಡಿದೆ. ಆಗ ಸ್ಟೇ ತಂದಿದ್ದೇನೆ, ಏನೂ ಆಗಲ್ಲ ಎಂದಿದ್ದರಂತೆ. ಎರಡನೇ ಬಾರಿ ಫೋಟೊ ವೈರಲ್ ಆದಾಗ ಸಂತ್ರಸ್ತೆ ದೂರು ನೀಡಲು ಮುಂದಾಗಿದ್ದರು.

Prajwal Revanna
ಪ್ರಜ್ವಲ್ ರೇವಣ್ಣ ಅಣ್ಣ ಸೂರಜ್​ನಿಂದ ಜೆಡಿಎಸ್ ಕಾರ್ಯಕರ್ತನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಆರೋಪ

ಫೋಟೋ ವೈರಲ್ ಹಿಂದೆ ಪ್ರೀತಂಗೌಡ ಕೈವಾಡ?

ಇನ್ನು ವೈರಲ್ ಆದ ಕೆಲವು ಫೋಟೊಗಳನ್ನು ಕಿರಣ್, ಶರತ್ ಹಾಗೂ ಮಾಜಿ ಸಂಸದ ಪ್ರೀತಂ ಗೌಡ ವೈರಲ್ ಮಾಡಿಸಿರುವ ಆರೋಪವಿದೆ. ಈ ಹಿನ್ನೆಲೆಯಲ್ಲಿ ನಾಲ್ವರು ಮೇಲೆ ದೂರು ನೀಡಲು ಮಹಿಳೆ ಮುಂದಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com