ವಿವಿಧ ಜಯಂತಿಗಳಿಗೆ ನೀಡುವ ಸಾರ್ವತ್ರಿಕ ರಜೆ ರದ್ದುಗೊಳಿಸಿ: ಶಾಸಕ ಜಿ.ಟಿ ದೇವೇಗೌಡ ಆಗ್ರಹ

ವಿವಿಧ ಜಯಂತಿಗಳಿಗೆ ನೀಡುತ್ತಿರುವ ಸಾರ್ವತ್ರಿಕ ರಜೆಯನ್ನು ರದ್ದುಗೊಳಿಸುವುದು ಉತ್ತಮ ಎಂದು ಶಾಸಕ ಜಿ.ಟಿ.ದೇವೇಗೌಡ ಅಭಿಪ್ರಾಯಪಟ್ಟರು.
ಜಿ.ಟಿ. ದೇವೇಗೌಡ
ಜಿ.ಟಿ. ದೇವೇಗೌಡ
Updated on

ಮೈಸೂರು: ವಿವಿಧ ಜಯಂತಿಗಳಿಗೆ ನೀಡುತ್ತಿರುವ ಸಾರ್ವತ್ರಿಕ ರಜೆಯನ್ನು ರದ್ದುಗೊಳಿಸುವುದು ಉತ್ತಮ ಎಂದು ಶಾಸಕ ಜಿ.ಟಿ.ದೇವೇಗೌಡ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಮೈಸೂರು-ಚಾಮರಾಜನಗರ ಜಿಲ್ಲಾ ಒಕ್ಕಲಿಗರ ಸಂಘ, ನಾಡಪ್ರಭು ಕೆಂಪೇಗೌಡ ಜಯಂತ್ಯುತ್ಸವ ಸಮಿತಿ ವತಿಯಿಂದ ನಗರದ ಕಲಾಮಂದಿರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಬೆಂಗಳೂರು ನಿರ್ಮಾತೃ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ಈಗಾಗಲೇ ಸರ್ಕಾರಿ ರಜೆಗಳು ಸಾಕಷ್ಟು ಇವೆ. ಇದರ ಜತೆಗೆ ವಿವಿಧ ಜಯಂತಿಗಳ ರಜೆಯಿಂದ ಸರ್ಕಾರಿ ಕಚೇರಿಗಳಲ್ಲಿ ಜನರ ಕೆಲಸ ಕಾರ್ಯಗಳು ಸರಿಯಾಗಿ ನಡೆಯುತ್ತಿಲ್ಲ. ಹೀಗಾದರೆ ಜನರ ಸಮಸ್ಯೆಗಳನ್ನು ಆಲಿಸುವುದು ಯಾವಾಗ? ಬಗೆಹರಿಸುವುದು ಯಾವಾಗ? ಜಯಂತಿಯನ್ನು ಮಧ್ಯಾಹ್ನವರೆಗೆ ಆಚರಿಸಿ ಮಧ್ಯಾಹ್ನ ನಂತರ ಕೆಲಸದಲ್ಲಿ ತೊಡಗುವಂತೆ ಮಾಡಬೇಕು ಎಂದು ಸಲಹೆ ನೀಡಿದರು.

ಬೆಂಗಳೂರಿನ ಸಂಸ್ಥಾಪಕರಾದ ಕೆಂಪೇಗೌಡರು 55 ಬಡಾವಣೆಗಳನ್ನು ಸ್ಥಾಪಿಸಿ ವಿವಿಧ ಸಮುದಾಯಗಳ ಅಭಿವೃದ್ಧಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಕೆಂಪೇಗೌಡರ ಕೊಡುಗೆಗಳ ಬಗ್ಗೆ ಸಮುದಾಯಕ್ಕೆ ತಿಳಿಸುವ ಪ್ರಯತ್ನಗಳನ್ನು ಹೆಚ್ಚು ಹೆಚ್ಚು ಮಾಡಬೇಕು ಎಂದು ಜಿಟಿಡಿ ತಿಳಿಸಿದರು.

ಜಿ.ಟಿ. ದೇವೇಗೌಡ
ಕೆಂಪೇಗೌಡ ಜಯಂತಿ ಆಹ್ವಾನ ಪತ್ರಿಕೆಯಲ್ಲಿ ಹೆಚ್ ಡಿ ದೇವೇಗೌಡ, ಕುಮಾರಸ್ವಾಮಿ ಹೆಸರು ಕೈಬಿಟ್ಟ ರಾಜ್ಯ ಸರ್ಕಾರ!

16 ನೇ ಶತಮಾನದಲ್ಲಿ ವಿಜಯನಗರ ಸಾಮ್ರಾಜ್ಯವನ್ನು ಆಳಿದ ಕೆಂಪೇಗೌಡ ಮತ್ತು ಅವರ ವಂಶಸ್ಥರ ಬಗ್ಗೆ ಹೆಚ್ಚಿನ ಸಂಶೋಧನೆಗೆ ಕರೆ ನೀಡಿದ ಅವರು, ಯುವ ಪೀಳಿಗೆಗೆ ಕೆಂಪೇಗೌಡರನ್ನು ಪರಿಚಯಿಸಲು ಈ ವಿಷಯದ ಬಗ್ಗೆ ಅಧ್ಯಯನ ನಡೆಸಲು ತಜ್ಞರನ್ನು ಪ್ರೋತ್ಸಾಹಿಸಬೇಕು ಎಂದರು.

ಮಂಡ್ಯದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ 72ನೇ ಮಠಾಧೀಶರಾದ ನಿರ್ಮಲಾನಂದನಾಥ ಸ್ವಾಮೀಜಿ ಅವರು ಬಾಲಗಂಗಾಧರನಾಥ ಸ್ವಾಮೀಜಿ ಅವರ ಸ್ಮಾರಕ ನಿರ್ಮಾಣಕ್ಕೆ ಹಾಗೂ ಅಭಿವೃದ್ಧಿ ನಿಗಮಕ್ಕೆ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದರು. ಸ್ಮಾರಕ ನಿರ್ಮಾಣ ಕಾರ್ಯ ಆರಂಭಗೊಂಡಿದ್ದರೂ ಅಭಿವೃದ್ಧಿ ನಿಗಮಕ್ಕೆ ಇನ್ನೂ ಸಂಪೂರ್ಣ ಅನುದಾನ ಬಂದಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com