ರಾಜಕೀಯ ಬೇಡ, ರಾಜ್ಯಕ್ಕಾಗಿ ಒಟ್ಟಾಗಿ ದುಡಿಯೋಣ: ಸಂಸದರಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು

ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಸಚಿವರು ಮತ್ತು ಇತರ ಸಂಸದರು ಪೂರ್ಣ ಪ್ರಮಾಣದಲ್ಲಿ ಹಾಜರಿದ್ದರು.
ರಾಜ್ಯದ ಸಂಸದರೊಂದಿಗೆ ಸಿಎಂ ಸಭೆ
ರಾಜ್ಯದ ಸಂಸದರೊಂದಿಗೆ ಸಿಎಂ ಸಭೆ
Updated on

ಬೆಂಗಳೂರು: ರಾಜ್ಯದ ನೆಲ, ಜಲ, ಸಂಸ್ಕೃತಿ, ಸಂಪನ್ಮೂಲದ ಅಭಿವೃದ್ಧಿಗಾಗಿ ರಾಜ್ಯದ ಹಿತದೃಷ್ಟಿಯಿಂದ ಸಂಸದರೆಲ್ಲರೂ ಒಕ್ಕೊರಲಿನಿಂದ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಒಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ ಎಂದುಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ದೆಹಲಿಯ ಖಾಸಗಿ ಹೋಟೆಲ್‌ನಲ್ಲಿ ನಡೆದ ರಾಜ್ಯದಿಂದ ಆಯ್ಕೆಯಾದ ಸಂಸದರ ಸಭೆಯಲ್ಲಿ ಅವರು ಮಾತನಾಡಿದರು. ಇದು ರಾಜ್ಯದ ಹಿತದೃಷ್ಟಿಯಿಂದ ನಡೆಯುತ್ತಿರುವ ಸಭೆಯಾಗಿದ್ದು, ಇದರಲ್ಲಿ ಯಾವುದೇ ರಾಜಕೀಯವಿಲ್ಲ, ಐವರು ಸಚಿವರು, ಲೋಕಸಭೆ ಮತ್ತು ರಾಜ್ಯಸಭಾ ಸದಸ್ಯರು ಸೇರಿದಂತೆ ಎಲ್ಲಾ 40 ಸಂಸದರು ಸಭೆಯಲ್ಲಿ ಭಾಗವಹಿಸಿದ್ದರು. ಲೋಕಸಭೆ ಚುನಾವಣೆಗೂ ಮುನ್ನ ಸಿದ್ದರಾಮಯ್ಯ ಅವರು ತಮ್ಮ ಶಾಸಕರನ್ನು ದೆಹಲಿಗೆ ಕರೆದೊಯ್ದು ತೆರಿಗೆ ಹಂಚಿಕೆ ಕುರಿತು ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಈ ಬಾರಿ, ರಾಜ್ಯದ ಐವರು ಸಂಸದರು ಕೇಂದ್ರ ಸಚಿವರಾಗಿರುವ ಕಾರಣ, ಸಿದ್ದರಾಮಯ್ಯ ತಮ್ಮ ಕ್ಯಾಬಿನೆಟ್ ನ ಆಯ್ದ ಸಹೋದ್ಯೋಗಿಗಳನ್ನು ಕರ್ನಾಟಕದ ಅಭಿವೃದ್ಧಿ ಕುರಿತು ಸಭೆಗೆ ಕರೆದು ಕೊಂಡು ಹೋಗಿದ್ದರು.

ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಸಚಿವರು ಮತ್ತು ಇತರ ಸಂಸದರು ಪೂರ್ಣ ಪ್ರಮಾಣದಲ್ಲಿ ಹಾಜರಿದ್ದರು. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಎಚ್‌ಡಿ ಕುಮಾರಸ್ವಾಮಿ , ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ರೈಲ್ವೆ ರಾಜ್ಯ ಸಚಿವ ವಿ ಸೋಮಣ್ಣ ಮತ್ತು ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಭಾಗವಹಿಸಿದ್ದರು.

ಬಾಕಿ ಉಳಿದಿರುವ ಯೋಜನೆಗಳನ್ನು ಸಿದ್ದರಾಮಯ್ಯ ಸೂಕ್ಷ್ಮವಾಗಿ ಮುಂದಿಟ್ಟು, ಸಂಸತ್ತಿನ ಒಳಗೆ ಮತ್ತು ಹೊರಗೆ ಧ್ವನಿ ಎತ್ತುವಂತೆ ಸಂಸದರಿಗೆ ಸಲಹೆ ನೀಡಿದರು. ಮೇಕೆದಾಟು ಯೋಜನೆಗೆ ಕೇಂದ್ರದ ಅನುಮತಿ ಅಗತ್ಯವಿದೆ. ಭದ್ರಾ ಯೋಜನೆ ಬಗ್ಗೆಯೂ ಪ್ರಯತ್ನ ಮುಂದುವರಿಸಬೇಕಾಗಿದೆ. ಕೇಂದ್ರದ ಹಣಕಾಸು ಮಂತ್ರಿ ತಮ್ಮ ಬಜೆಟ್‌ನಲ್ಲೇ ಘೋಷಣೆ ಮಾಡಿ ಒಂದು ವರ್ಷ ಕಳೆದಿದೆ. ಆ ಹಣ ಕೊಡಲು ಸಭೆಯಲ್ಲಿದ್ದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸಿಎಂ ಮನವಿ ಮಾಡಿದರು.

ರಾಜ್ಯದ ಸಂಸದರೊಂದಿಗೆ ಸಿಎಂ ಸಭೆ
ಸಿಎಂ ಸಿದ್ದರಾಮಯ್ಯ 3 ದಿನ ದೆಹಲಿ ಭೇಟಿ: ಕೇಂದ್ರ ಸಚಿವರು-ಸಂಸದರೊಂದಿಗೆ ವಿವಿಧ ಯೋಜನೆ-ಅನುದಾನ ವಿಚಾರ ಕುರಿತು ಮಾತುಕತೆ ಸಾಧ್ಯತೆ

ಕಲ್ಯಾಣ ಕರ್ನಾಟಕದ ರಾಯಚೂರಿಗೆ ಏಮ್ಸ್ ನೀಡಲು ಮನವಿ ಸಲ್ಲಿಸಿದ್ದೇವೆ. ಇದರ ಈಡೇರಿಕೆ ಅಗತ್ಯವಿದೆ. ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಕಲ್ಯಾಣ ಕರ್ನಾಟಕ ಹಿಂದುಳಿದಿದೆ. ಏಮ್ಸ್ ಬಂದರೆ ಅಭಿವೃದ್ಧಿ ಸಾಧ್ಯ.18,172 ಕೋಟಿ ಬರ ಪರಿಹಾರ ಕೇಳಿದ್ದೆವು. ಪೂರ್ತಿ ಬಂದಿಲ್ಲ. ಇದಕ್ಕಾಗಿ ಪ್ರಯತ್ನಿಸುವ ಅಗತ್ಯವಿದೆ. ರಾಜ್ಯದ ಕರಾವಳಿ ಭಾಗಗಳ ಅಭಿವೃದ್ಧಿಗಾಗಿ ಉಡಾನ್ ಯೋಜನೆಯಲ್ಲಿ ಸಲ್ಲಿಸಿರುವ ಪ್ರಸ್ತಾವನೆ ನಾಗರೀಕ ವಿಮಾನಯಾನ ಇಲಾಖೆಯಲ್ಲಿ ಇದೆ. ಇದರ ಈಡೇರಿಕೆಗೆ ಪ್ರಯತ್ನಿಸಬೇಕಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು Air cargo complex ಆಗಿ ಪರಿಗಣಿಸಲು ಪ್ರಸ್ತಾವನೆ ಸಲ್ಲಿಸಿದ್ದೇವೆ. ಇದರಿಂದ ರಫ್ತು ಹೆಚ್ಚಾಗಿ ಆರ್ಥಿಕ ಚಟುವಟಿಕೆ ವೇಗಗೊಳ್ಳುತ್ತದೆ. ಮೈಸೂರು ಅಥವಾ ಹಾಸನಕ್ಕೆ ಮತ್ತೊಂದು IIT ಬೇಕು ಎನ್ನುವ ಪ್ರಸ್ತಾವನೆ ಸಲ್ಲಿಕೆ ಮಾಡಿದ್ದೇವೆ. ಇದು ಈಡೇರಿಸಬೇಕಾಗಿದೆ.ರಾಜ್ಯ ರೈಲ್ವೇ ಸಂಪರ್ಕದಲ್ಲಿ ಹಿಂದುಳಿದಿದೆ. ಆದ್ದರಿಂದ ಆದ್ಯತೆ ಮೇಲೆ ರಾಜ್ಯಕ್ಕೆ ಹೆಚ್ಚು ಅನುದಾನ ಒದಗಿಸಿ ರೈಲ್ವೇ ಸಂಪರ್ಕ ಹೆಚ್ಚಿಸಲು ಆದ್ಯತೆ ಮೇಲೆ ಹೆಚ್ಚಿನ ಅನುದಾನ ನೀಡಬೇಕು ಎಂದು ರೈಲ್ವೇ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರಿಗೆ ಸಿಎಂ ಮನವಿ ಮಾಡಿದರು. 15ನೇ ಹಣಕಾಸು ಆಯೋಗದಲ್ಲಿ ನಮಗೆ ಆಗಿರುವ ಅನ್ಯಾಯವನ್ನು ಸರಿಪಡಿಸಲು 16ನೇ ಆಯೋಗದ ಮುಂದೆ ಪ್ರಬಲವಾಗಿ ಮಂಡಿಸಬೇಕಾಗಿದೆ. ಇವುಗಳ

ಇಲ್ಲಿಯವರೆಗೆ ರಾಜಕೀಯ ಇತ್ತು, ಈಗ ರಾಜ್ಯದ ಅಭಿವೃದ್ಧಿಯೇ ಪ್ರಧಾನವಾಗಿದ್ದು, ಸಂಸದರು ಒಗ್ಗಟ್ಟಿನಿಂದ ರಾಜ್ಯದ ಹಿತಕ್ಕಾಗಿ ದುಡಿಯುತ್ತಾರೆ ಎಂಬ ನಂಬಿಕೆ ಇದೆ ಎಂದು ಡಿಸಿಎಂ ಶಿವಕುಮಾರ್ ಹೇಳಿದರು.ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದಾಗ ಗೃಹ ಇಲಾಖೆ ಆಧುನೀಕರಣಕ್ಕೆ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಶನಿವಾರ ಬೆಳಗ್ಗೆ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. "ನಾನು ಮೇಲ್ಮೈ ಸಾರಿಗೆ, ರೈಲ್ವೆ, ಜಲ ಶಕ್ತಿ, ಗೃಹ ಮತ್ತು ಹಣಕಾಸು ಸಚಿವರನ್ನು ಸಹ ಭೇಟಿ ಮಾಡುತ್ತೇನೆ" ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com