
ಬೆಂಗಳೂರು: ಬಿಜೆಪಿ ಶಾಸಕ ಹರೀಶ್ ಪೂಂಜಾ ಸೇರಿ 64 ಮಂದಿಗೆ ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ ಶಾಸಕರು ಮತ್ತಿತರಿಗೆ ಸಮನ್ಸ್ ಜಾರಿಯಾಗಿದೆ. ಬೆಳ್ತಂಗಡಿಯ ಬಿಜೆಪಿ ತಾಲೂಕು ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಬಂಧನವನ್ನು ವಿರೋಧಿಸಿ ಪೊಲೀಸ್ ಠಾಣೆಗೆ ನುಗ್ಗಿದ್ದ ಹರೀಶ್ ಪೂಂಜಾ ಮತ್ತಿತ್ತರರು ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು.
ಸಮನ್ಸ್ ಪ್ರಕಾರ ಜು.10 ರಂದು ಹರೀಶ್ ಪೂಂಜಾ ಮತ್ತಿತ್ತರು ಕೋರ್ಟ್ ಗೆ ಹಾಜರಾಗಬೇಕಿದೆ. ಘಟನೆಗೆ ಸಂಬಂಧ ಬೆಳ್ತಂಗಡಿ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದಾರೆ. ಮೊದಲ ಪ್ರಕರಣದಲ್ಲಿ 28 ವ್ಯಕ್ತಿಗಳಿಗೆ ಸಮನ್ಸ್ ಜಾರಿ ಮಾಡಲಾಗಿದ್ದರೆ, ಎರಡನೇ ಪ್ರಕರಣದ್ಲಲಿ 37 ಮಂದಿಗೆ ಸಮನ್ಸ್ ಜಾರಿಗೊಳಿಸಲಾಗಿದೆ.
ಮೊದಲ ಆರೋಪಿ ಶಾಸಕ ಹರೀಶ್ ಪೂಂಜಾ, ಬಿಜೆಪಿ ಕಾರ್ಯಕರ್ತರೊಂದಿಗೆ ತೆರಳಿ ಅಕ್ರಮ ಕ್ವಾರಿ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಶಶಿರಾಜ್ ಶೆಟ್ಟಿ ಅವರನ್ನು ಬಿಡುಗಡೆ ಮಾಡಲು ಒತ್ತಡ ಪೊಲೀಸರಿಗೆ ಮೇ.20 ರಂದು ಹಾಕಿದ್ದರು
Advertisement