ಸಾರ್ವಜನಿಕ ಸಾರಿಗೆ ನಿಗಮ: ನಿವೃತ್ತ ನೌಕರರಿಗೆ ವೇತನ ಪರಿಷ್ಕರಿಸಿ ಸರ್ಕಾರ ಆದೇಶ

2023ರ ಮಾರ್ಚ್​​ನಲ್ಲಿ ನಿವೃತ್ತಿಯಾದ ನೌಕರರಿಗೆ ಶೇ 15 ರಷ್ಟು ಹೆಚ್ಚುವರಿ ನಿವೃತ್ತಿ ವೇತನ ಇನ್ನು ಮುಂದೆ ಸಿಗಲಿದೆ.
ಸಾರಿಗೆ ನಿಗಮ
ಸಾರಿಗೆ ನಿಗಮ

ಬೆಂಗಳೂರು: ಸಾರ್ವಜನಿಕ ಸಾರಿಗೆ ಬಸ್ ದರ ಏರಿಕೆ ಮಾಡುವ ಪ್ರಸ್ತಾಪ ಮಧ್ಯೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನಿವೃತ್ತ ನೌಕರರಿಗೆ ವೇತನ ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2023ರ ಮಾರ್ಚ್​​ನಲ್ಲಿ ನಿವೃತ್ತಿಯಾದ ನೌಕರರಿಗೆ ಶೇ 15 ರಷ್ಟು ಹೆಚ್ಚುವರಿ ನಿವೃತ್ತಿ ವೇತನ ಇನ್ನು ಮುಂದೆ ಸಿಗಲಿದೆ.

2023 ರ ಮಾರ್ಚ್​​ನಲ್ಲಿ ನಿವೃತ್ತಿ ಹೊಂದಿದ ಅಧಿಕಾರಿ ಮತ್ತು ನೌಕರರಿಗೆ 2019 ರ ಡಿಸೆಂಬರ್ 31 ರಂದು ಅವರು ಪಡೆಯುತ್ತಿದ್ದ ಮೂಲವೇತನ ಪರಿಗಣಿಸಿ ಶೇಕಡಾ 15 ರಷ್ಟು ಹೆಚ್ಚಿಸಿ ವೇತನ ಶ್ರೇಣಿ ಪರಿಷ್ಕರಿಸಲು ಆದೇಶ ಹೊರಡಿಸಲಾಗಿದೆ.

ನಾಲ್ಕು ನಿಗಮಗಳಿಗೆ 220 ಕೋಟಿ ರೂ: ನಿವೃತ್ತಿಯಾದ ನೌಕರರಿಗೆ ವೇತನ ಪರಿಷ್ಕರಣೆಯ ಹೆಚ್ಚಿಸಿದ ಹಣ ನೀಡಲು ನಾಲ್ಕು ಸಾರಿಗೆ ನಿಗಮಗಳಿಗೆ ಅಂದಾಜು 220 ಕೋಟಿ ರೂ. ಅಗತ್ಯವಿದೆ ಎಂದು ಅಂದಾಜಿಸಲಾಗಿದೆ.

2023 ರ ಮಾರ್ಚ್ 1 ರಂದು ಸಂಸ್ಥೆಯ ಸೇವೆಯಲ್ಲಿದ್ದ ಅಧಿಕಾರಿ ನೌಕರರಿಗೆ 2020ರ ಜನವರಿ 1 ರಿಂದ 2023ರ ಫೆಬ್ರವರಿ 28ರ ಅವಧಿಯನ್ನು ನೋಷನಲ್ ಆಗಿ ಪರಿಗಣಿಸಿ ವೇತನ ನಿಗದಿಪಡಿಬೇಕು. ಈ ವರ್ಷದ ಕೊನೆಯಲ್ಲಿ ನಿವೃತ್ತಿ ನೌಕರರಿಗೆ ವೇತನ ಪಾವತಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com