
ಶಿವಮೊಗ್ಗ: ಅಂಬ್ಯುಲೆನ್ಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಮೂವರು ಬೈಕ್ ಸವಾರರು ಮೃತಪಟ್ಟ ಘಟನೆ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟ ಬಳಿ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದೆ.
ಮೃತರನ್ನು ಪ್ರಸನ್ನ (25), ಕಾರ್ತಿಕ್ (27), ಅಜಯ್ (25) ಮೃತ ದುರ್ದೈವಿಗಳು. ಮೃತಪಟ್ಟವರನ್ನು ಹೊಸ ಜೋಗದ ನಿವಾಸಿಗಳು ಎನ್ನಲಾಗುತ್ತಿದೆ.
ಶಿವಮೊಗ್ಗದಿಂದ ಹಾವೇರಿ ಕಡೆಗೆ ತೆರಳುತ್ತಿದ್ದ ಅಂಬ್ಯುಲೆನ್ಸ್ ಹಾಗೂ ಶಿಕಾರಿಪುರದ ಕಡೆಯಿಂದ ಹೊಸ ಜೋಗದ ಕಡೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಈ ಸಂಬಂಧ ಶಿಕಾರಿಪುರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶುಕ್ರವಾರ ಮುಂಜಾನೆ ಹಾವೇರಿ ಜಿಲ್ಲೆಯ ಗುಡ್ಡೇನಹಳ್ಳಿ ಕ್ರಾಸ್ ಬಳಿ ಭೀಕರ ಅಪಘಾತ ಸಂಭವಿಸಿತ್ತು. ರಸ್ತೆಯ ಪಕ್ಕದಲ್ಲಿ ನಿಂತಿದ್ದ ಲಾರಿಗೆ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ಒಟ್ಟು 13 ಮಂದಿ ಸಾವನ್ನಪ್ಪಿದ್ದರು.
Advertisement