ಕೇಂದ್ರ ಸಚಿವ ನಿತಿನ್‌ ಗಡ್ಕರಿ ಭೇಟಿಯಾದ ಸಿಎಂ ಸಿದ್ದರಾಮಯ್ಯ: ಪ್ರಮುಖ ಹೆದ್ದಾರಿ ಯೋಜನೆಗಳ ಅನುಮೋದನೆಗೆ ಮನವಿ

ಕರ್ನಾಟಕದಲ್ಲಿ 5,225 ಕಿ.ಮೀ ಉದ್ದದ 39 ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿಸುವುದರ ಜೊತೆಗೆ ಅಧಿಸೂಚನೆ ಸೇರಿದಂತೆ ಬಾಕಿ ಇರುವ ಯೋಜನೆಗಳನ್ನು ತೆರವುಗೊಳಿಸುವಂತೆ ಮನವಿ ಮಾಡಿದರು.
ಗಡ್ಕರಿ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ
ಗಡ್ಕರಿ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ನವದೆಹಲಿಯಲ್ಲಿ ಕೇಂದ್ರ ಮೇಲ್ಮೈ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದರು. ಕರ್ನಾಟಕದಲ್ಲಿ 5,225 ಕಿ.ಮೀ ಉದ್ದದ 39 ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿಸುವುದರ ಜೊತೆಗೆ ಅಧಿಸೂಚನೆ ಸೇರಿದಂತೆ ಬಾಕಿ ಇರುವ ಯೋಜನೆಗಳನ್ನು ತೆರವುಗೊಳಿಸುವಂತೆ ಮನವಿ ಮಾಡಿದರು.

ರಾಜ್ಯದಲ್ಲಿ ಬೆಳಗಾವಿ – ಹುನಗುಂದ- ರಾಯಚೂರು (NH748A), ಬೆಂಗಳೂರು ಚೆನ್ನೈ ಎಕ್ಸ್‌ಪ್ರೆಸ್‌ ಹೆದ್ದಾರಿ, ಸೂರತ್‌ ಚೆನ್ನೈ ಎಕ್ಸ್‌ಪ್ರೆಸ್‌ ಹೆದ್ದಾರಿ, ಬೆಂಗಳೂರು ನಗರದ ಉಪನಗರ ವರ್ತುಲ ರಸ್ತೆ ಗ್ರೀನ್‌ಫೀಲ್ಡ್‌ ಕಾರಿಡಾರ್‌ಗಳ ಅಭಿವೃದ್ಧಿಗೆ ಅನುಮೋದನೆ ನೀಡಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಮುಖ್ಯಮಂತ್ರಿಗಳು ಇನ್ನಷ್ಟು ಪ್ರಮುಖ ವಿಚಾರಗಳ ಕುರಿತು ಕೇಂದ್ರ ಸಚಿವರ ಗಮನ ಸೆಳೆದರು. ರಾಜ್ಯದಲ್ಲಿ 5225 ಕಿ.ಮೀ. ಉದ್ದದ 39 ತಾತ್ವಿಕ ಅನುಮೋದನೆ ದೊರಕಿದ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಿಸುವ ಪ್ರಕ್ರಿಯೆ ನೆನೆಗುದಿಗೆ ಬಿದ್ದಿದೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಕೋರಿದರು.

ದಿನಕ್ಕೆ 10000 ಪಿಸಿಯು ವಾಹನ ದಟ್ಟಣೆ ಹೊಂದಿರುವ ರಾಜ್ಯ ಹೆದ್ದಾರಿಗಳನ್ನು ಉನ್ನತೀಕರಿಸಲು ಮನವಿ.ಶಿರಾಡಿ ಘಾಟಿಯಲ್ಲಿ ಮಾರನಹಳ್ಳಿಯಿಂದ ಅಡ್ಡಹೊಳೆ ನಡುವೆ ಟನೆಲ್‌ ನಿರ್ಮಾಣದ ಮೂಲಕ ಮಂಗಳೂರು ಬಂದರು ಸಂಪರ್ಕ ಇನ್ನಷ್ಟು ಸುಗಮಗೊಳಿಸುವುದು.ಮೈಸೂರು ನಗರದ ಮಣಿಪಾಲ್‌ ಆಸ್ಪತ್ರೆ ಜಂಕ್ಷನ್‌ (ಕೊಲಂಬಿಯ ಏಷ್ಯಾ ಆಸ್ಪತ್ರೆ) ನಲ್ಲಿ ಫ್ಲೈಓವರ್‌ ನಿರ್ಮಾಣಕ್ಕೆ ಅನುಮೋದನೆ. ಮೈಸೂರು ರಿಂಗ್‌ ರಸ್ತೆಯಲ್ಲಿ NH-275K ನಲ್ಲಿ 9 ಗ್ರೇಡ್‌ ಸೆಪರೇಟರುಗಳ ನಿರ್ಮಾಣಕ್ಕೆ ಅನುಮೋದನೆ,ಬೆಳಗಾವಿ ನಗರದಲ್ಲಿ ಹಳೆ NH4 ನಲ್ಲಿ ಮೇಲುಸೇತುವೆ ನಿರ್ಮಾಣಕ್ಕೆ ಅನುಮೋದನೆ,ಬೆಳಗಾವಿ ಜಿಲ್ಲೆಯ ಗೋಕಾಕ್‌ ಜಲಪಾತದಲ್ಲಿ ಕೇಬಲ್‌ ಕಾರ್‌ ಸೌಲಭ್ಯ ಕಲ್ಪಿಸುವ ಯೋಜನೆ, ಕಿತ್ತೂರು ಪಟ್ಟಣದಿಂದ ಬೈಲಹೊಂಗಲವನ್ನು ಸಂಪರ್ಕಿಸುವ ರಸ್ತೆಯ ಸುಧಾರಣೆ.

ಗಡ್ಕರಿ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ
ರಾಜಕೀಯ ಬೇಡ, ರಾಜ್ಯಕ್ಕಾಗಿ ಒಟ್ಟಾಗಿ ದುಡಿಯೋಣ: ಸಂಸದರಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು

ಕಲಬುರಗಿ ಮತ್ತು ರಾಯಚೂರಿನಲ್ಲಿ ಬೈಪಾಸ್‌ ನಿರ್ಮಾಣ, NH-373 ರ ಬೇಲೂರು ಚಿಕ್ಕಮಗಳೂರು ವಿಭಾಗದಲ್ಲಿ ಚತುಷ್ಪಧ ನಿರ್ಮಾಣ. ಚಳ್ಳಕೆರೆ ಪಟ್ಟಣ ವ್ಯಾಪ್ತಿಯಲ್ಲಿ NH-150A ಯ ಒಂದು ಬಾರಿ ಸುಧಾರಣೆ.ರಾಷ್ಟ್ರೀಯ ಹೆದ್ದಾರಿ NH-766 ರ 106 ಕಿ.ಮೀ. ರಸ್ತೆಯನ್ನು ಚತುಷ್ಪಥ, ಆರು ಪಥದ ಹೆದ್ದಾರಿಯಾಗಿ ಅಭಿವೃದ್ಧಿ ಪಡಿಸುವುದು. ಈಗಾಗಲೇ ತಾತ್ವಿಕ ಅನುಮೋದನೆ ದೊರೆತಿರುವ ಕೇರಳದ ಕಲ್ಪೆಟ್ಟದಿಂದ ಮಾನಂದವಾಡಿ, ಹೆಚ್.ಡಿ.ಕೋಟೆ, ಜಯಪುರ ಮೂಲಕ ಮೈಸೂರನ್ನು ಸಂಪರ್ಕಿಸುವ 90 ಕಿ.ಮೀ. ಹೆದ್ದಾರಿ, ಮೈಸೂರಿನಿಂದ ಬನ್ನೂರು ಮೂಲಕ ಮಳವಳ್ಳಿಯನ್ನು ಸಂಪರ್ಕಿಸುವ 45 ಕಿ.ಮೀ. ಹೆದ್ದಾರಿ ಹಾಗೂ ಬೆಳಗಾವಿ ಜಿಲ್ಲೆಯ ಸಂಕೇಶ್ವರದಿಂದ ಗೋಕಾಕ- ಯರಗಟ್ಟಿ-ಮನ್ವಳ್ಳಿ ಮೂಲಕ ನರಗುಂದ ವನ್ನು ಸಂಪರ್ಕಿಸುವ 127 ಕಿ.ಮೀ. ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಉನ್ನತೀಕರಿಸಲು ಮುಖ್ಯಮಂತ್ರಿಗಳು ಮನವಿ ಮಾಡಿದರು.

ನವದೆಹಲಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುರುವಾರ ರಾಜ್ಯದ ಸಂಸದರನ್ನು ಭೇಟಿ ಮಾಡಿದ ಸಿದ್ದರಾಮಯ್ಯ, ಮೇಕೆದಾಟು ಸಮತೋಲನ ಜಲಾಶಯ ಯೋಜನೆ, ಕಳಸಾ-ಬಂಡೂರಿ ಯೋಜನೆ, ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳಂತಹ ಪ್ರಮುಖ ಕುಡಿಯುವ ನೀರಿನ ಯೋಜನೆಗಳ ಕುರಿತು ಚರ್ಚೆ ನಡೆಸಿದ್ದು, ಇವುಗಳಿಗೆ ಅನುಮತಿ ನೀಡುವಂತೆ ಹೇಳಿದರು. ಈ ಹಿಂದೆ ಆಯೋಗಗಳು 1971ರ ಜನಗಣತಿಯನ್ನು ಪರಿಗಣಿಸಿದ್ದರೆ, 2011ರ ಜನಗಣತಿಯನ್ನು ಆಧರಿಸಿ 15ನೇ ಹಣಕಾಸು ಆಯೋಗದ ಹಣ ಹಂಚಿಕೆಯಲ್ಲಿ ಕರ್ನಾಟಕವು ನಷ್ಟವನ್ನು ಎದುರಿಸುತ್ತಿದೆ ಎಂದು ಸಿಎಂ ಆರೋಪಿಸಿದರು. 16ನೇ ಹಣಕಾಸು ಆಯೋಗದಿಂದ ಆಗಿರುವ ಅನ್ಯಾಯವನ್ನು ರಾಜ್ಯದ ಸಂಸದರು ಸರಿ ಮಾಡುತ್ತಾರೆ ಎಂಬ ಭರವಸೆ ವ್ಯಕ್ತಪಡಿಸಿದರು.

32 ವಸತಿ ಶಾಲೆಗಳು, 11 ಹಾಸ್ಟೆಲ್‌ಗಳು, ನಾಲ್ಕು ದಿನದ ಶಾಲೆಗಳು ಮತ್ತು ನಾಲ್ಕು ಕೌಶಲ್ಯ ಕೇಂದ್ರಗಳನ್ನು ಒಳಗೊಂಡಿರುವ 659 ಕೋಟಿ ರೂಪಾಯಿ ಮೌಲ್ಯದ 52 ಯೋಜನೆಗಳನ್ನು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯಕ್ಕೆ ಸಲ್ಲಿಸಲಾಗಿದೆ. ಈ ಪೈಕಿ ಹನ್ನೆರಡು ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ ಆದರೆ ಇನ್ನೂ ಹಣ ಬಿಡುಗಡೆಯಾಗಿಲ್ಲ. ಉಳಿದ 40 ಯೋಜನೆಗಳು ಬಾಕಿ ಉಳಿದಿವೆ ಎಂದು ಮುಖ್ಯಮಂತ್ರಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com