ಹಾಲಿನ ದರ ಏರಿಕೆ ವಿರುದ್ಧ ರಾಜ್ಯ ಬಿಜೆಪಿ ಪ್ರತಿಭಟನೆ; ಹಿಂಪಡೆಯುವಂತೆ ಆಗ್ರಹ

ಹಾಲಿನ ದರ ಏರಿಕೆ ನಿರ್ಧಾರವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು ಎಂದು ಒತ್ತಾಯಿಸಿ ರಾಜ್ಯ ಬಿಜೆಪಿ ಘಟಕ ಬೆಂಗಳೂರಿನಲ್ಲಿ ಶನಿವಾರ ಪ್ರತಿಭಟನೆ ನಡೆಸಿತು.
ಬಿಜೆಪಿ ಪ್ರತಿಭಟನೆ
ಬಿಜೆಪಿ ಪ್ರತಿಭಟನೆ

ಬೆಂಗಳೂರು: ಹಾಲಿನ ದರ ಏರಿಕೆ ನಿರ್ಧಾರವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು ಎಂದು ಒತ್ತಾಯಿಸಿ ರಾಜ್ಯ ಬಿಜೆಪಿ ಘಟಕ ಬೆಂಗಳೂರಿನಲ್ಲಿ ಶನಿವಾರ ಪ್ರತಿಭಟನೆ ನಡೆಸಿತು. ಜೂನ್ 25 ರಂದು ಕರ್ನಾಟಕದ ಕಾಂಗ್ರೆಸ್ ಸರ್ಕಾರ ಹಾಲಿನ ದರವನ್ನು 2 ರೂ.ಗಳಷ್ಟು ಹೆಚ್ಚಿಸಿತ್ತು. ಹೆಚ್ಚುವರಿಯಾಗಿ ಹೆಚ್ಚುವರಿಯಾಗಿ ಪ್ರತಿ ಪ್ಯಾಕ್ ನಲ್ಲಿ 50 ಮಿಲಿ ಹೆಚ್ಚುವರಿ ಹಾಲು ಸೇರಿಸಲಾಗಿದ್ದು, ಪರಿಷ್ಕೃತ ದರಗಳು ಜೂನ್ 26 ರಿಂದ ಜಾರಿಗೆ ಬಂದಿವೆ.

ಸ್ವಾತಂತ್ರ್ಯ ಉದ್ಯಾನವನದಲ್ಲಿ ಹಸುಗಳೊಂದಿಗೆ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎಂಎಲ್‌ಸಿ ಹಾಗೂ ಪರಿಷತ್‌ನ ಮುಖ್ಯ ಸಚೇತಕ ಎನ್‌.ರವಿಕುಮಾರ್‌ ಮಾತನಾಡಿ, ಬೆಲೆ ಏರಿಕೆಯಿಂದ ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರ ಮೇಲೆ ದುಷ್ಪರಿಣಾಮ ಬೀರುವ ನೀತಿಯನ್ನು ಸರಕಾರ ಬದಲಾಯಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಪ್ರತಿಭಟನೆ
'ರೈತರಿಂದ ಬಂದ ಹೆಚ್ಚುವರಿ ಹಾಲನ್ನು ರೋಡ್ ಗೆ ಚೆಲ್ಬೇಕಾ, ಪ್ರಮಾಣ ಹೆಚ್ಚಿಸಿ ಮಾರಾಟ ಹೊರತು ಹಾಲಿನ ದರ ಹೆಚ್ಚಾಗಿಲ್ಲ': ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಸ್ಥಗಿತಗೊಂಡಿರುವ ಕಿಸಾನ್ ಸಮ್ಮಾನ್ ನಿಧಿಯಡಿ ರೈತರಿಗೆ 4 ಸಾವಿರ ರೂ.ಗಳನ್ನು ಆರ್ಥಿಕ ನೆರವನ್ನು ಸರ್ಕಾರ ಪ್ರಾರಂಭಿಸಬೇಕು. ಕಳೆದ ಎಂಟು ತಿಂಗಳಿನಿಂದ 957 ಕೋಟಿ ರೂ. ಹಾಲಿನ ಬಾಕಿಯಿದ್ದು, ರೈತರ ಹಿತದೃಷ್ಟಿಯಿಂದ ಅದನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ರವಿಕುಮಾರ್ ಆಗ್ರಹಿಸಿದರು. ಬೀಜ, ಗೊಬ್ಬರದ ಬೆಲೆಯೂ ಏರಿಕೆಯಾಗಿದೆ. ರೈತರಿಗೆ ಅಗ್ಗದ ದರದಲ್ಲಿ ಸಿಗುವಂತೆ ಮಾಡಬೇಕು ಎಂದು ಒತ್ತಾಯಿಸಿದ ಬಿಜೆಪಿ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಹೆಚ್ಚುವರಿ ಪ್ರಮಾಣ ನೀಡಿ ಹಾಲಿನ ದರ ಹೆಚ್ಚಿಸಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಗ್ರಾಹಕರು ಪ್ರತಿ ಪ್ಯಾಕೆಟ್‌ನಲ್ಲಿ 50 ಮಿಲಿ ಹೆಚ್ಚಿನ ಹಾಲನ್ನು ಕೇಳಿದ್ದಾರೆಯೇ? ಎಂದು ಪ್ರಶ್ನಿಸಿದ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ, ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಳ್ಳಲು ಸರಕಾರ ಯಾವುದೇ ಆಧಾರವಿಲ್ಲದೇ ವಾದ ಮಂಡಿಸುತ್ತಿದೆ ಎಂದರು. ಜೂನ್ 25 ರಂದು ಹಾಲಿನ ದರ ಹೆಚ್ಚಿಸುವ ನಿರ್ಧಾರವನ್ನು ತೆಗೆದುಕೊಂಡ ನಂತರ, ಕರ್ನಾಟಕ ಹಾಲು ಒಕ್ಕೂಟದ ಅಧ್ಯಕ್ಷ ಭೀಮಾ ನಾಯ್ಕ್, “ಪ್ರತಿ ಪ್ಯಾಕೆಟ್‌ಗೆ ಸೇರಿಸುವ 50 ಮಿಲಿ ಹೆಚ್ಚುವರಿ ಹಾಲಿಗೆ ಹೆಚ್ಚುವರಿಯಾಗಿ 2 ರೂಪಾಯಿಗಳನ್ನು ವಿಧಿಸುತ್ತಿದ್ದೇವೆ” ಎಂದು ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com