CM, DCM ಹುದ್ದೆ ಬಗ್ಗೆ ಮಾತಾಡಿದರೆ ಶಿಸ್ತು ಕ್ರಮ: DKS; ನೊಟೀಸ್ ಕೊಡಲಿ ಉತ್ತರಿಸುತ್ತೇನೆ- ಸಚಿವ ರಾಜಣ್ಣ; GS ಸಂಗ್ರೇಶಿ ರಾಜ್ಯ ಚುನಾವಣಾ ಆಯುಕ್ತ- ಇವು ಇಂದಿನ ಪ್ರಮುಖ ಸುದ್ದಿಗಳು 29-06-2024

file pic
ಸಾಂಕೇತಿಕ ಚಿತ್ರonline desk

1. CM ಬದಲಾವಣೆ, DCM ಹುದ್ದೆ ಬಗ್ಗೆ ಮಾತಾಡಿದರೆ ಶಿಸ್ತು ಕ್ರಮ: DKS

ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಲೀ, ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆಯಾಗಲೀ ಪಕ್ಷದಲ್ಲಿ ಯಾರೂ ಬಹಿರಂಗವಾಗಿ ಮಾತನಾಡಬಾರದು, ಬಾಯಿಗೆ ಬೀಗ ಹಾಕಿಕೊಳ್ಳಬೇಕು, ಇಲ್ಲದಿದ್ದರೆ, ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಹಲವು ದಿನಗಳಿಂದ ಡಿಸಿಎಂ ಹುದ್ದೆ ಸೃಷ್ಟಿ, ಸಿಎಂ ಬದಲಾವಣೆ ಬಗ್ಗೆ ಕಾಂಗ್ರೆಸ್ ನಾಯಕರು ಹೇಳಿಕೆ ನೀಡುತ್ತಿದ್ದರು. ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಸ್ವಾಮೀಜಿಯೊಬ್ಬರು ಸಿಎಂ ಸ್ಥಾನ ಡಿಕೆ ಶಿವಕುಮಾರ್ ಗೆ ಬಿಟ್ಟುಕೊಡಬೇಕೆಂದು ನೇರವಾಗಿ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದ ಬೆನ್ನಲ್ಲೇ, ಕಾಂಗ್ರೆಸ್ ಪಕ್ಷದಲ್ಲಿ ಹೇಳಿಕೆಗಳ ಪರ್ವ ಆರಂಭವಾಗಿದೆ. ಬಹಿರಂಗ ಹೇಳಿಕೆಗಳು ಪಕ್ಷಕ್ಕೆ ಒಳ್ಳೆಯದಲ್ಲ. ಎಚ್ಚರಿಕೆ ಉಲ್ಲಂಘಿಸಿ ಮಾತನಾಡಿದರೆ, ನೋಟಿಸ್ ನೀಡಿ, ಶಿಸ್ತು ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಲಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಡಿಕೆ ಶಿವಕುಮಾರ್ ಎಚ್ಚರಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ರಾಜಣ್ಣ, ಬಾಯಿಗೆ ಎಲ್ಲರೂ ಬೀಗ ಹಾಕಿಕೊಳ್ಳಬೇಕು. ಸ್ವಾಮಿಗಳು ಹೇಳಿದಂತೆ ಸಿಎಂ ಮಾಡುವುದಕ್ಕೆ ಆಗುತ್ತಾ? ಎಲ್ಲರೂ ಸುಮ್ಮನೆ ಇದ್ರೆ ನಾನೂ ಸುಮ್ಮನೆ ಇರುತ್ತೇನೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೇಳಿದ್ರೂ ನಾವು ಸುಮ್ಮನಿರಬೇಕಾ, ನೋಟಿಸ್​ ಕೊಡಲಿ ಬಿಡಿ, ಕೊಟ್ಮೇಲೆ ನಾನು ಹೇಳುತ್ತೇನೆ ಎಂದು ಹೇಳಿದ್ದಾರೆ.

2. ನೊಟೀಸ್ ಕೊಡಲಿ ಉತ್ತರಿಸುತ್ತೇನೆ- ಸಚಿವ ರಾಜಣ್ಣ

ಡಿಕೆ ಶಿವಕುಮಾರ್ ಎಚ್ಚರಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ರಾಜಣ್ಣ, ಬಾಯಿಗೆ ಎಲ್ಲರೂ ಬೀಗ ಹಾಕಿಕೊಳ್ಳಬೇಕು. ಸ್ವಾಮಿಗಳು ಹೇಳಿದಂತೆ ಸಿಎಂ ಮಾಡುವುದಕ್ಕೆ ಆಗುತ್ತಾ? ಎಲ್ಲರೂ ಸುಮ್ಮನೆ ಇದ್ರೆ ನಾನೂ ಸುಮ್ಮನೆ ಇರುತ್ತೇನೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೇಳಿದ್ರೂ ನಾವು ಸುಮ್ಮನಿರಬೇಕಾ, ನೋಟಿಸ್​ ಕೊಡಲಿ ಬಿಡಿ, ಕೊಟ್ಮೇಲೆ ನಾನು ಹೇಳುತ್ತೇನೆ ಎಂದು ಹೇಳಿದ್ದಾರೆ.

3. ಸಿಎಂ ಸಿದ್ದರಾಮಯ್ಯ- ಅಮಿತ್ ಶಾ ಭೇಟಿ

ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ, ರಾಜ್ಯ ಯೋಜನೆಗಳ ಪರ ಧ್ವನಿ ಎತ್ತಲು ನವದೆಹಲಿಯಲ್ಲಿ ಸಂಸದರ ಘಟಕ ಸ್ಥಾಪಿಸುವ ಚಿಂತನೆಯೊಂದನ್ನು ಪ್ರಸ್ತಾಪಿಸಿದ್ದಾರೆ. ನಾಯಕರ ಸಹಕಾರ ದೊರತಿದ್ದೇ ಆದರೆ, ದೆಹಲಿಯಲ್ಲಿರುವ ಕರ್ನಾಟಕ ಭವನದಲ್ಲಿ ಐಎಎಸ್ ಅಧಿಕಾರಿಯನ್ನು ಹೊಂದಿರುವ ಸಂಸದರ ಘಟಕ ಶೀಘ್ರದಲ್ಲೇ ರಚನೆಯಾಗಲಿದೆ. ಇದೇ ವೇಳೆ ಸಿಎಂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿದ್ದು, ರಾಜ್ಯದ 5 ನಗರಗಳಿಗೆ ಸೇಫ್ ಸಿಟಿ ಯೋಜನೆಗಳನ್ನು ಮಂಜೂರು ಮಾಡುವಂತೆ ಒತ್ತಾಯಿಸಿದ್ದಾರೆ. ನಿರ್ಭಯಾ ನಿಧಿಯಡಿ ಬೆಂಗಳೂರು ನಗರದಂತೆಯೇ ಮೈಸೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮಂಗಳೂರು ಹಾಗೂ ಕಲಬುರಗಿ ನಗರಗಳಲ್ಲಿ ಸೇಫ್‌ ಸಿಟಿ ಯೋಜನೆಯನ್ನು ತಲಾ ರೂ.200 ಕೋಟಿ ರೂ. ಗಳಂತೆ ಒಟ್ಟು 1000 ಕೋಟಿ ವೆಚ್ಚದಲ್ಲಿ ಅನುಷ್ಠಾನಕ್ಕೆ ಅನುಮೋದನೆ ನೀಡಬೇಕು ಎಂದು ಸಿಎಂ ಮನವಿ ಸಲ್ಲಿಸಿದ್ದಾರೆ.

4. ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

ಹಾಲಿನ ಬೆಲೆ ಏರಿಕೆ ಖಂಡಿಸಿ ರಾಜ್ಯ ಬಿಜೆಪಿ ನಾಯಕರು ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ, ದರ ಹೆಚ್ಚಳ ನಿರ್ಧಾರ ವಾಪಸ್ ಪಡೆಯುವಂತೆ ಆಗ್ರಹಿಸಿದರು. ಬೆಲೆ ಏರಿಕೆಯಿಂದ ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ ರೈತರ ಮೇಲೆ ದುಷ್ಪರಿಣಾಮ ಬೀರುವ ನೀತಿಯನ್ನು ಸರಕಾರ ಬದಲಾಯಿಸಿಕೊಳ್ಳಬೇಕು ಎಂದು ಬಿಜೆಪಿ ಎಂಎಲ್ ಸಿ ಎನ್ ರವಿಕುಮಾರ್ ಹೇಳಿದ್ದಾರೆ. ಇದೇ ವೇಳೆ ಮಾತನಾಡಿದ ರಾಜ್ಯ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ರಾಘವೇಂದ್ರ, ವಾಲ್ಮೀಕಿ ನಿಗಮದ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿರುವ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಜು.03 ರಂದು ಬಿಜೆಪಿ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲಿದೆ ಎಂದು ತಿಳಿಸಿದ್ದಾರೆ.

5. ಗದಿಗೆಪ್ಪ ಸಣ್ಣಬಸಪ್ಪ ಸಂಗ್ರೇಶಿ ರಾಜ್ಯ ಚುನಾವಣಾ ಆಯುಕ್ತ 

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ನೂತನ ಅಧ್ಯಕ್ಷರನ್ನಾಗಿ ಗದಿಗೆಪ್ಪ ಸಣ್ಣಬಸಪ್ಪ ಸಂಗ್ರೇಶಿ ಅವರನ್ನು ನೇಮಿಸಿ ಹೊರಡಿಸಿದ್ದ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದ್ದು, ಅವರನ್ನು ರಾಜ್ಯ ಚುನಾವಣಾ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ. ಮೈಸೂರು ಜಿಲ್ಲಾ ಮತ್ತು ಸೆಷನ್ಸ್‌ ಪ್ರಧಾನ ನ್ಯಾಯಾಧೀಶರಾಗಿದ್ದ ಜಿ.ಎಸ್ ಸಂಗ್ರೇಶಿ ಅವರು ನಿಯೋಜನೆ ಮೇರೆಗೆ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್ ಸಂಗ್ರೇಶಿ ಅವರ ನೇಮಕಕ್ಕೆ ಸಹಿ ಹಾಕಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com