
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಶನಿವಾರ ಬೆಳಗಿನ ಜಾವ ಸಂಭವಿಸಿದ ಕಾರು ಅಪಘಾತದಲ್ಲಿ ಗೇಮಿಂಗ್ ಸೆಂಟರ್ ಮಾಲೀಕರೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ಉದ್ಯಮಿ ಪ್ರಮೋದ್ ನಾಯಕ್ ಅವರ ಪುತ್ರ 35 ವರ್ಷದ ಪ್ರಜ್ವಲ್ ನಾಯಕ್ ಎಂದು ಗುರುತಿಸಲಾಗಿದೆ.
ಪೊಲೀಸರ ಪ್ರಕಾರ, ಪ್ರಜ್ವಲ್ ನಾಯಕ್ ಅವರ ಎಸ್‌ಯುವಿ ಕಾರು ರಸ್ತೆ ವಿಭಜಕ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದು ನಂತರ ವಿದ್ಯುತ್ ಕಂಬಗಳಿಗೆ ಅಪ್ಪಳಿಸಿದೆ. ಭೀಕರ ಅಪಘಾತದಲ್ಲಿ ಪ್ರಜ್ವಲ್ ನಾಯಕ್ ಅವರ ಎದೆ, ತಲೆ ಮತ್ತು ಭುಜಕ್ಕೆ ಗಂಭೀರ ಗಾಯಗಳಾಗಿದ್ದವು. ತಕ್ಷಣ ಅವರನ್ನು ಬೆಳ್ತಂಗಡಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದರು.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಬೆಳ್ತಂಗಡಿ ಪೊಲೀಸರು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
Advertisement