ರಾಜ್ಯ ಚುನಾವಣಾ ಆಯುಕ್ತರಾಗಿ ಜಿ.ಎಸ್‌ ಸಂಗ್ರೇಶಿ ನೇಮಕ

ರಾಜ್ಯ ಸರ್ಕಾರದ ಶಿಫಾರಸಿನಂತೆ ಚುನಾವಣಾ ಆಯುಕ್ತರನ್ನಾಗಿ ಸಂಗ್ರೇಶಿ ಅವರನ್ನು ನೇಮಿಸಿ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.
G.S. Sangreshi
ಜಿ.ಎಸ್. ಸಂಗ್ರೇಶಿ

ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ನೂತನ ಅಧ್ಯಕ್ಷರನ್ನಾಗಿ ಗದಿಗೆಪ್ಪ ಸಣ್ಣಬಸಪ್ಪ ಸಂಗ್ರೇಶಿ (ಜಿ.ಎಸ್. ಸಂಗ್ರೇಶಿ) ಅವರನ್ನು ನೇಮಿಸಿ ಹೊರಡಿಸಿದ್ದ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದ್ದು, ಇದೀಗ ಸಂಗ್ರೇಶಿ ಅವರನ್ನು ರಾಜ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಿ ಶುಕ್ರವಾರ ಆದೇಶ ಹೊರಡಿಸಿದೆ.

ಮೈಸೂರು ಜಿಲ್ಲಾ ಮತ್ತು ಸೆಷನ್ಸ್‌ ಪ್ರಧಾನ ನ್ಯಾಯಾಧೀಶರಾಗಿದ್ದ ಜಿ.ಎಸ್ ಸಂಗ್ರೇಶಿ ಅವರು ನಿಯೋಜನೆ ಮೇರೆಗೆ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರನ್ನು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಗುರುವಾರ ಹೊರಡಿಸಲಾಗಿತ್ತು.

G.S. Sangreshi
ಇವಿಎಂ ನೂರಕ್ಕೆ ನೂರು ಸುರಕ್ಷಿತ: ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್

ಒಂದೇ ದಿನಕ್ಕೆ ಆ ಆದೇಶವನ್ನು ಹಿಂಪಡೆದು, ಅದರ ಬದಲಾಗಿ ಸಂಗ್ರೇಶಿ ಅವರನ್ನು ಕರ್ನಾಟಕ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ.

ರಾಜ್ಯ ಸರ್ಕಾರದ ಶಿಫಾರಸಿನಂತೆ ಚುನಾವಣಾ ಆಯುಕ್ತರನ್ನಾಗಿ ಸಂಗ್ರೇಶಿ ಅವರನ್ನು ನೇಮಿಸಿ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಅವರ ಅಧಿಕಾರದ ಅವಧಿ ಮುಂದಿನ ಐದು ವರ್ಷಗಳವರೆಗೆ ಇರುತ್ತದೆ.

ರಾಜ್ಯ ಚುನಾವಣಾ ಆಯೋಗವು ಜಿಪಂ-ತಾ.ಪಂ.ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆ ನಡೆಸುವ ಹೊಣೆ ಹೊತ್ತಿದ್ದು, ನ್ಯಾಯಾಲಯಗಳಿಂದ ಚುನಾವಣೆ ನಡೆಸಲು ಸರ್ಕಾರಜ ಮೇಲೆ ಒತ್ತಡ ಹೆಚ್ಚಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com