ಕೆಎಸ್ ಆರ್ ಟಿಸಿ ಬಸ್
ಕೆಎಸ್ ಆರ್ ಟಿಸಿ ಬಸ್

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ನುಗ್ಗಿದ KSRTC ಬಸ್; 8 ಮಂದಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿದ್ದ ಕೆಎಸ್ ಆರ್ ಟಿಸಿ ಬಸ್ ಹಳ್ಳಕ್ಕೆ ನುಗ್ಗಿರುವ ಘಟನೆ ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿ ಗೇಟ್ ಬಳಿ ಶನಿವಾರ ನಡೆದಿದೆ.
Published on

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿದ್ದ ಕೆಎಸ್ ಆರ್ ಟಿಸಿ ಬಸ್ ಹಳ್ಳಕ್ಕೆ ನುಗ್ಗಿರುವ ಘಟನೆ ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿ ಗೇಟ್ ಬಳಿ ಶನಿವಾರ ನಡೆದಿದೆ.

ಬೆಂಗಳೂರು-ಮೈಸೂರು ಎಕ್ಸ್‌ ಪ್ರೆಸ್ ವೇನಲ್ಲಿ ಈ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಸರ್ಕಾರ ಬಸ್ ಡಿವೈಡರ್ ​ಗೆ ಡಿಕ್ಕಿಯಾಗಿ ಸರ್ವಿಸ್ ರಸ್ತೆಯಲ್ಲಿದ್ದ ಕಾರು, ಬೈಕ್‌ಗಳಿಗೆ ಡಿಕ್ಕಿ ಹೊಡೆದು ಹಳ್ಳಕ್ಕೆ ನುಗ್ಗಿದೆ.

ಕೆಎಸ್ ಆರ್ ಟಿಸಿ ಬಸ್
ಶಿವಮೊಗ್ಗದಲ್ಲಿ ಭೀಕರ ಅಪಘಾತ: ಆಂಬ್ಯುಲೆನ್ಸ್-ಬೈಕ್ ಡಿಕ್ಕಿ; ಮೂವರ ದುರ್ಮರಣ

ಘಟನೆಯಲ್ಲಿ ಬಸ್‌ ನಲ್ಲಿದ್ದ 8 ಪ್ರಯಾಣಿಕರಿಗೆ ಗಾಯವಾಗಿದ್ದು, ಚಾಲಕನ ಕಾಲು ಮುರಿತವಾಗಿದೆ. ಗಾಯಾಳುಗಳಿಗೆ ಮಂಡ್ಯ,‌ ಮೈಸೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ ನಲ್ಲಿ 30 ಜನ ಇದ್ದರು ಎನ್ನಲಾಗಿದೆ. ಇನ್ನೂ ಅಪಘಾತದಲ್ಲಿ 1 ಕಾರು ಹಾಗೂ 4ಕ್ಕೂ ಹೆಚ್ಚು ಬೈಕ್​​ಗಳು ಜಖಂಗೊಂಡಿದೆ. ಈ ಘಟನೆ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನಾ ಸ್ಥಳಕ್ಕೆ ಮಂಡ್ಯ ಎಸ್​ಪಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com