
ಬೆಂಗಳೂರು: ಮಹಾಮಾರಿ ಡೆಂಗ್ಯೂಗೆ ಬೆಂಗಳೂರಿನಲ್ಲಿ 27 ವರ್ಷದ ಯುವಕ ಬಲಿಯಾಗಿದ್ದನೆ. ಕಗ್ಗದಾಸಪುರ ಮೂಲದವರಾದ 27 ವರ್ಷದ ಯುವಕ ಅಭಿಲಾಷ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮಳೆಗಾಲ ಆರಂಭವಾಗುತ್ತಿದ್ದಂತೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡೆಂಘೀ ಹಾವಳಿ ಹೆಚ್ಚಾಗುತ್ತಿದೆ. ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಲೆ ಇದೆ. ಇದೀಗ, ಡೆಂಗ್ಯೂ ಜ್ವರಕ್ಕೆ ಬೆಂಗಳೂರಿನಲ್ಲಿ ಇಬ್ಬರು ಸಾವನ್ನಪ್ಪಿದ್ದಾನೆ.
ಬಿಬಿಎಂಪಿ ಪೂರ್ವ ವಲಯದಲ್ಲಿ ತಮಿಳುನಾಡು ಮೂಲದ 80 ವರ್ಷದ ವೃದ್ಧೆ ನೀರಜಾ ದೇವಿ ಮತ್ತು ಕಗ್ಗದಾಸಪುರ ಮೂಲದವರಾದ 27 ವರ್ಷದ ಯುವಕ ಅಭಿಲಾಷ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ದೇವಿ ಕೂಡ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಡೆಂಗ್ಯೂಗೆ ಹಾವೇರಿಯಲ್ಲಿ ಮೊದಲ ಸಾವು ಸಂಭವಿಸಿತ್ತು. ಇದೀಗ, ಬೆಂಗಳೂರಿನಲ್ಲಿ ಸಂಭವಿಸಿದೆ. ನಾಳೆ ಬಿಬಿಎಂಪಿ ಅಧಿಕಾರಿಗಳು ಡೆತ್ ಆಡಿಟ್ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ನಾಳೆ ಬಿಬಿಎಂಪಿ ಅಧಿಕಾರಿಗಳು ಡೆತ್ ಆಡಿಟ್ ಮಾಡಲಿದ್ದಾರೆ. ಕಳೆದ ಎರಡು ವಾರಗಳಲ್ಲಿ 1,000 ಗಡಿಯನ್ನು ದಾಟಿದ ಡೆಂಗ್ಯೂ ಪ್ರಕರಣಗಳ ಏರಿಕೆಯ ಮಧ್ಯೆ ಸಾವುಗಳು ವರದಿಯಾಗಿವೆ. ಇದು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಎರಡು ಪಟ್ಟು ಹೆಚ್ಚಾಗಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ 2,457 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಸುಮಾರು 5,187 ಡೆಂಗ್ಯೂ ಕೇಸ್ಗಳಿವೆ. ಹಾವೇರಿ, ಮೈಸೂರು ಸೇರಿದಂತೆ ಜಿಲ್ಲೆ ಜಿಲ್ಲೆಯಲ್ಲೂ ಜನ ಡೆಂಗ್ಯೂಯಿಂದ ಬಳಲುತ್ತಿದ್ದಾರೆ. ಕೇವಲ 6 ತಿಂಗಳಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಶೇ.140ರಷ್ಟು ಹೆಚ್ಚಾಗಿದೆ ಎನ್ನಲಾಗಿದೆ.
Advertisement