ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಪುತ್ರಿ ಹಂಸ ಮೊಯ್ಲಿ ನಿಧನ
ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ(46) ಅವರು ಶನಿವಾರ ರಾತ್ರಿ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಹಂಸ ಮೊಯ್ಲಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ನಿಧನ ಹೊಂದಿದ್ದಾರೆ.
ರಾಜಕೀಯ ಕಾರ್ಯ ಹಿನ್ನೆಲೆಯಲ್ಲಿ ಛತ್ತೀಸ್ಗಢ್ ಪ್ರವಾಸದಲ್ಲಿದ್ದ ವೀರಪ್ಪ ಮೊಯ್ಲಿ ಅವರು ವಿಷಯ ತಿಳಿಯುತ್ತಿದ್ದಂತೆ ರಾತ್ರಿಯೇ ಬೆಂಗಳೂರಿಗೆ ಆಗಮಿಸಿದ್ದಾರೆ. ನಾಳೆ ಬೆಳಗ್ಗೆ ಮಾಜಿ ಸಿಎಂ ಪುತ್ರಿಯ ಅಂತ್ಯಸಂಸ್ಕಾರ ನಡೆಸಲು ತೀರ್ಮಾನಿಸಲಾಗಿದೆ.
ವೀರಪ್ಪಮೊಯ್ಲಿ ಅವರ ಮೂರನೇ ಪುತ್ರಿಯಾಗಿದ್ದ ಹಂಸ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಜನಾನುರಾಗಿ ಎಂಬ ಹೆಸರು ಪಡೆದಿದ್ದ ಅವರು, ತಮದೇ ಆದ ಚೌಕಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.
ಭರತನಾಟ್ಯ ಕಲಾವಿದರಾಗಿದ್ದ ಹಂಸ ಮೊಯ್ಲಿ ಅವರು ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪ್ರದರ್ಶನ ನೀಡಿದ್ದರು. ಕೇವಲ ಭರತನಾಟ್ಯ ಕಲಾವಿದೆ ಅಲ್ಲದೆ ಸಿನಿಮಾನಿ ರಂಗದಲ್ಲೂ ಅವರು ಗುರುತಿಸಿಕೊಂಡಿದ್ದರು. ದೇವದಾಸಿಯರ ಜೀವನಾಧಾರಿತ ತಮಿಳು ಚಿತ್ರ ‘ಶೃಂಗಾರಂ’ನಲ್ಲಿ ಅವರು ಅಭಿನಯಿಸಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ