ಜೈಲಲ್ಲಿ ನಟ ದರ್ಶನ್‌ ಭೇಟಿಯಾದ ನಟಿ ರಕ್ಷಿತಾ-ಪ್ರೇಮ್!

ದರ್ಶನ್ ಆರಾಮಾಗಿದ್ದಾರಾ ಎಂಬ ಪ್ರಶ್ನೆಗೆ ಇಂತಹ ಪರಿಸ್ಥಿತಿಯಲ್ಲಿ ಯಾರಾದರೂ ಆರಾಮಾಗಿ ಇರುತ್ತಾರಾ ಎಂದು ಭಾವುಕರಾಗಿ ಪ್ರಶ್ನಿಸಿದರು.
ನಟಿ ರಕ್ಷಿತಾ ಹಾಗೂ ನಿರ್ದೇಶಕ ಪ್ರೇಮ್
ನಟಿ ರಕ್ಷಿತಾ ಹಾಗೂ ನಿರ್ದೇಶಕ ಪ್ರೇಮ್

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ ಅವರನ್ನು ಕೆಲ ಆಪ್ತರು ಭೇಟಿ ಮಾಡುತ್ತಿದ್ದಾರೆ. ಈ ನಡುವೆ ನಟಿ ರಕ್ಷಿತಾ, ಪ್ರೇಮ್ ದಂಪತಿ ಕೂಡ ಶನಿವಾರ ಭೇಟಿಯಾಗಿ ಮಾತುಕತೆ ನಡೆಸಿದರು.

ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಕ್ಷಿತಾ, ಕಾನೂನಿಗಿಂತ ದೊಡ್ಡವರು ಯಾರು ಇಲ್ಲ. ಪ್ರಕರಣ ನ್ಯಾಯಾಲಯದಲ್ಲಿದ್ದು, ಇದರ ಬಗ್ಗೆ ಏನು ಮಾತಾನಾಡುವುದಿಲ್ಲ. ರೇಣುಕಾ ಸ್ವಾಮಿ ಆತ್ಮಕ್ಕೆ ಶಾಂತಿಸಿಗಲಿ ಎಂದು ಹೇಳಿದರು.

ದರ್ಶನ್ ಆರಾಮಾಗಿದ್ದಾರಾ ಎಂಬ ಪ್ರಶ್ನೆಗೆ ಇಂತಹ ಪರಿಸ್ಥಿತಿಯಲ್ಲಿ ಯಾರಾದರೂ ಆರಾಮಾಗಿ ಇರುತ್ತಾರಾ ಎಂದು ಭಾವುಕರಾಗಿ ಪ್ರಶ್ನಿಸಿದರು.

ನಟಿ ರಕ್ಷಿತಾ ಹಾಗೂ ನಿರ್ದೇಶಕ ಪ್ರೇಮ್
'ಕೇಡು ಬಯಸುವವರನ್ನು ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ, ಶಾಂತಿಯಿಂದ ಇರಿ': ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಅಭಿಮಾನಿಗಳಿಗೆ ವಿಜಯಲಕ್ಷ್ಮಿ ಮನವಿ

ನಿರ್ದೇಶಕ ಜೋಗಿ ಪ್ರೇಮ್‌ ಮಾತನಾಡಿ, ನ್ಯಾಯಾಲಯದಲ್ಲಿರುವ ಕಾರಣ ಈ ಸಂದರ್ಭದಲ್ಲಿ ಪ್ರಕರಣದ ಬಗ್ಗೆ ಮಾತನಾಡುವುದು ಸರಿಯಲ್ಲ. ಪ್ರಕರಣ ನ್ಯಾಯಾಲಯದಲ್ಲಿದೆ. ನಾವು ಈ ಸಂದರ್ಭದಲ್ಲಿ ಪ್ರಕರಣದ ಈ ಬಗ್ಗೆ ಮಾತನಾಡುವುದು ಸರಿಯಲ್ಲ. ರೇಣುಕಾಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ, ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ ಎಂದು ಹೇಳಿ, ಜೈಲಿನಲ್ಲಿ ದರ್ಶನ್ ಜತೆ ನಡೆದ ಮಾತುಕತೆ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದರು.

ಇದೇ ವೇಳೆ ಪವಿತ್ರಾ ಗೌಡ ಪರ ವಕೀಲರು ಪವಿತ್ರಾ ಅವರನ್ನು ಭೇಟಿ ಮಾಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪವಿತ್ರಾ ಯಾವುದೇ ತಪ್ಪು ಮಾಡಿಲ್ಲ. ಪ್ರಕರಣದಿಂದ ಶಾಕ್'ಗೆ ಒಳಗಾಗಿದ್ದಾರೆಂದು ಹೇಳಿದರು.

ಪವಿತ್ರಾ ಅವರು ಯಾವುದೇ ತಪ್ಪು ಮಾಡಿಲ್ಲ. ಅವರು ಸ್ವಲ್ಪ ಆಘಾತಕ್ಕೊಳಗಾಗಿದ್ದಾರೆ. ನ್ಯಾಯಾಂಗ ಬಂಧನ ಮುಗಿದ ನಂತರ ನಾವು ಜಾಮೀನಿಗೆ ಅರ್ಜಿ ಸಲ್ಲಿಸುತ್ತೇವೆ. ಜೈಲಿನಲ್ಲಿ ಯಾರಿಗೂ ಸ್ಪೆಷಲ್ ಟ್ರೀಟ್ಮೆಂಟ್ ಕೊಡುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com