ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿ, ಬೈಕ್ ಸವಾರ ಸಾವು

ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ.

ದೇಬಶೀಶ್ ಬೆಹ್ರಾ (28) ಮೃತ ವ್ಯಕ್ತಿಯಾಗಿದ್ದಾರೆ. ನಿನ್ನೆ ಮಧ್ಯಾಹ್ನ 12.30ರ ಸುಮಾರಿಗೆ ಹೊಸ್ಮಾಟ್ ಜಂಕ್ಷನ್‌ನಲ್ಲಿ ಘಟನೆ ನಡೆದಿದೆ.

ಸಂಗ್ರಹ ಚಿತ್ರ
WPL 2024: ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿದ ವ್ಯಕ್ತಿಯ ಬಂಧನ

ಡಿಪೋ ನಂ. 47ಕ್ಕೆ ಸೇರಿದ ಬಿಎಂಟಿಸಿ ಬಸ್ ಜ್ಯೋತಿಪುರದಿಂದ ಕೆ.ಆರ್.ಮಾರುಕಟ್ಟೆಗೆ ತೆರಳುತ್ತಿತ್ತು, ಈ ವೇಳೆ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಕೆಳಗೆ ಬಿದ್ದ ದೇಬಶೀಶ್ ಬೆಹ್ರಾ ಅವರ ಮೇಲೆ ಬಸ್ ಹರಿದಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅಷ್ಟರಲ್ಲಾಗಲೇ ಮೃತಪಟ್ಟಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಹಲಸೂರು ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಬಸ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com