ಕಲಬುರಗಿ: ಕಣ್ಣಿಗೆ ಖಾರದ ಪುಡಿ ಎರಚಿ ಬಿಜೆಪಿ ಸಂಸದ ಉಮೇಶ್ ಜಾಧವ್ ಬಂಟನ ಬರ್ಬರ ಹತ್ಯೆ!

ಕಲಬುರಗಿಯಲ್ಲಿ ಬಿಜೆಪಿ ಸಂಸದ ಡಾ.ಉಮೇಶ್ ಜಾಧವ್ ಬಲಗೈ ಬಂಟನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ
ಗಿರೀಶ್ ಬಾಬು ಚಕ್ರ ಮತ್ತು ಉಮೇಶ್ ಜಾಧವ್
ಗಿರೀಶ್ ಬಾಬು ಚಕ್ರ ಮತ್ತು ಉಮೇಶ್ ಜಾಧವ್

ಕಲಬುರಗಿ: ಹಿರಿಯ ಬಿಜೆಪಿ ಮುಖಂಡ ಮಹಾಂತಪ್ಪಾ ಆಲೂರೆ ಅವರ ಬರ್ಬರ ಹತ್ಯೆಯ ಬೆನ್ನಲ್ಲೇ ಇದೀಗ ಮತ್ತೊಂದು ಜಿಲ್ಲೆಯಲ್ಲಿ ಮತ್ತೊಂದು ಕೊಲೆ ನಡೆದಿದೆ. ಸಂಸದ ಡಾ.ಉಮೇಶ್ ಜಾಧವ್ ಬಲಗೈ ಬಂಟನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ

ಗಿರೀಶ್ ಬಾಬು ಚಕ್ರ ಕೊಲೆಯಾದ ಬಿಜೆಪಿ ಮುಖಂಡ. ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಸಾಗನೂರ ಗ್ರಾಮದ ಜಮೀನಿನಲ್ಲಿ ಕೊಲೆ ಮಾಡಲಾಗಿದೆ.

ಇತ್ತೀಚೆಗಷ್ಟೇ ಗಿರೀಶ್ ಬಾಬು ಅವರನ್ನು ದೂರ ಸಂಪರ್ಕ ಇಲಾಖೆಯ ಕಲಬುರಗಿ ವಿಭಾಗದ ಸಲಹಾ ಸಮಿತಿ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲಾಗಿತ್ತು. ಹೀಗಾಗಿ ಆತನ ಸ್ನೇಹಿತರು ಪಾರ್ಟಿ ಕೊಡುವುದಾಗಿ ಜಮೀನಿಗೆ ಕರೆಸಿಕೊಂಡು ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಿರೀಶ್ ಬಾಬು ಚಕ್ರ ಮತ್ತು ಉಮೇಶ್ ಜಾಧವ್
ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಮುಖಂಡನ ಬರ್ಬರ ಹತ್ಯೆ

ಕೊಲೆಗೂ ಮುನ್ನ ಕಣ್ಣಿಗೆ ಖಾರದ ಪುಡಿ ಎರಚಿ ನಂತರ ಹತ್ಯೆಗೈಯಲಾಗಿದೆ. ನನ್ನ ತಮ್ಮನನ್ನು ಸುಪಾರಿ ಕೊಟ್ಟು ಕೊಲೆ ಮಾಡಿಸಿದ್ದಾರೆ ಎಂದು ಮೃತ ಬಿಜೆಪಿ ಮುಖಂಡ ಗರೀಶ್‌ ಚಕ್ರ ಸಹೋದರ ಸದಾಶಿವ ಚಕ್ರ ಕಿಡಿಕಾರಿದ್ದಾರೆ.

ನನ್ನ ತಮ್ಮನನ್ನು ಸುಪಾರಿ ಕೊಟ್ಟು ಕೊಲೆ ಮಾಡಿಸಿದ್ದಾರೆ. ರಾತ್ರಿ 10 ಗಂಟೆಗೆ ಸಚಿನ್ ಹಾಗೂ ಸ್ನೇಹಿತರು ಸನ್ಮಾನ‌ ಮಾಡುವುದಾಗಿ ಕರೆದುಕೊಂಡು ಹೋಗಿದ್ದರು. ಕೊಲೆಗೂ‌ ಮುನ್ನಾ ಸನ್ಮಾನ ಮಾಡಿ ನಂತರ ಅತನನ್ನು‌ ಕೊಲೆ ಮಾಡಲಾಗಿದೆ. ನನ್ನ ತಮ್ಮನ‌ ಕೊಲೆಗೆ ಸುಪಾರಿ ನೀಡಿದವರ ಹೆಸರು ಪೊಲೀಸರ ಮುಂದೆ ಹೇಳುತ್ತೇನೆ ಎಂದರು. ಸದ್ಯ ಆರೋಪಿಗಳಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಗಾಣಗಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com