ಅಂಗಾಂಗ ದಾನದಲ್ಲಿ ಕರ್ನಾಟಕಕ್ಕೆ ದೇಶದಲ್ಲಿಯೇ 2ನೇ ಸ್ಥಾನ: ಸಿಎಂ ಸಿದ್ದರಾಮಯ್ಯ

ಅಂಗಾಂಗ ದಾನದಲ್ಲಿ ಕರ್ನಾಟಕ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ದಾನಿಗಳ ಕುಟುಂಬಕ್ಕೆ ಯಾವುದೇ ತೊಂದರೆಯಾಗದಂತೆ ಸರ್ಕಾರ ನೋಡಿಕೊಳ್ಳಲಿದೆ. ಅಂಗಾಂಗ ದಾನಿಗಳ ಪರ ಸರ್ಕಾರ ನಿಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಮತ್ತಿತರರು
ಸಿಎಂ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಮತ್ತಿತರರು

ಬೆಂಗಳೂರು: ಅಂಗಾಂಗ ದಾನದಲ್ಲಿ ಕರ್ನಾಟಕ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ದಾನಿಗಳ ಕುಟುಂಬಕ್ಕೆ ಯಾವುದೇ ತೊಂದರೆಯಾಗದಂತೆ ಸರ್ಕಾರ ನೋಡಿಕೊಳ್ಳಲಿದೆ. ಅಂಗಾಂಗ ದಾನಿಗಳ ಪರ ಸರ್ಕಾರ ನಿಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮುಖ್ಯಮಂತ್ರಿ ಅಧಿಕೃತ ನಿವಾಸ ಕಾವೇರಿಯಲ್ಲಿ ಅಂಗಾಂಗ ದಾನಿಗಳ ಕುಟುಂಬದವರಿಗೆ ಪ್ರಶಂಸನಾ ಪತ್ರ ವಿತರಿಸಿ ಮಾತನಾಡಿದ ಮುಖ್ಯಮಂತ್ರಿ, ಒಬ್ಬರ ಜೀವ ಹೋದ ಸಂದರ್ಭದಲ್ಲಿ ಮತ್ತೋರ್ವರ ಜೀವ ಉಳಿಸುವ ಬಗ್ಗೆ ಯೋಚಿಸುವುದು ಸಾಮಾನ್ಯ ಸಂಗತಿಯಲ್ಲ. ಅಂಗಾಂಗ ದಾನ ಹೆಚ್ಚಾಗಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಒತ್ತು ನೀಡಿದ್ದಾರೆ ಎಂದು ತಿಳಿಸಿದರು.

ನೀವು ಕೈಗೊಂಡ ನಿರ್ಧಾರ ಸುಲಭವಲ್ಲ.ಆದರೆ, ಇತರರ ಜೀವ ಉಳಿಸುವ ಕೆಲಸ ಮಾಡಿದ್ದೀರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಸಿದ್ದರಾಮಯ್ಯ, ಸಂಕಷ್ಟದ ಸಂದರ್ಭದಲ್ಲಿ ಸರ್ಕಾರ ನಿಮ್ಮ ಜೊತೆಗೆ ಇರಲಿದೆ ಎಂದು ಧೈರ್ಯ ತುಂಬಿದರು. ತಮ್ಮ ಹಿಂದಿನ ಅವಧಿಯಲ್ಲಿ ಅಂಗಾಂಗ ದಾನಕ್ಕೆ ಸೊಸೈಟಿ ಸ್ಥಾಪಿಸಿದ್ದನ್ನು ಸ್ಮರಿಸಿದ ಸಿಎಂ, ಇನ್ನಷ್ಟು ಜನರು ಅಂಗಾಂಗ ದಾನಕ್ಕೆ ಮುಂದಾಗಬೇಕೆಂದು ಕರೆ ನೀಡಿದರು.

ಸಿಎಂ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಮತ್ತಿತರರು
ಅಂಗಾಂಗ ದಾನ ಮಾಡುವವರಿಗೆ ಅಂತ್ಯಕ್ರಿಯೆ ವೇಳೆ ಸರ್ಕಾರಿ ಗೌರವ: ಹೊಸ ನೀತಿ ಜಾರಿಗೆ ಸರ್ಕಾರ ಮುಂದು!

ಇದಕ್ಕೂ ಮುನ್ನ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಅಂಗಾಂಗ ದಾನ ಕೋರಿ ನೋಂದಾಯಿಸಿಕೊಂಡವರ ಸಂಖ್ಯೆ 8,000ಕ್ಕೂ ಹೆಚ್ಚಿದ್ದು, ಕಳೆದೊಂದು ವರ್ಷದಲ್ಲಿ ಕೇವಲ 178 ಅಂಗಾಂಗ ದಾನ ನಡೆದಿದೆ. ಜನರಲ್ಲಿ ಅಂಗಾಂಗ ದಾನ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಅಂಗಾಂಗ ದಾನಿಗಳ ಕುಟುಂಬಸ್ಥರಿಗೆ ಪ್ರಶಂಸನಾ ಪತ್ರ ನೀಡುವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com