ನಾನ್ಯಾವ ಜಾತಿ? ಮಾಹಿತಿ ಪಡೆಯಲು ಯಾರೂ ನನ್ನ ಬಳಿ ಬಂದಿಲ್ಲ: ಸಿದ್ದಗಂಗಾ ಶ್ರೀ

ಎಲ್ಲರ ಬಳಿಯೂ ಹೋಗಿ ಸಮೀಕ್ಷೆ ಮಾಡಲಾಗಿದೆ ಎಂದು ಹೇಳುತ್ತಿದ್ದಾರೆ. ಆದರೆ, ನನ್ನ ಬಳಿ ಸಮೀಕ್ಷೆಗೆ ಯಾರೂ ಬಂದಿಲ್ಲ ಎಂದು ಸಿದ್ದಂಗಾ ಮಠದ ಸಿದ್ದಲಿಂಗ ಶ್ರೀಗಳು ಗುರುವಾರ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ತುಮಕೂರು: ಎಲ್ಲರ ಬಳಿಯೂ ಹೋಗಿ ಸಮೀಕ್ಷೆ ಮಾಡಲಾಗಿದೆ ಎಂದು ಹೇಳುತ್ತಿದ್ದಾರೆ. ಆದರೆ, ನನ್ನ ಬಳಿ ಸಮೀಕ್ಷೆಗೆ ಯಾರೂ ಬಂದಿಲ್ಲ ಎಂದು ಸಿದ್ದಂಗಾ ಮಠದ ಸಿದ್ದಲಿಂಗ ಶ್ರೀಗಳು ಗುರುವಾರ ಹೇಳಿದ್ದಾರೆ.

ರಾಜ್ಯ ಸರ್ಕಾರ ಗುರುವಾರ ಜಾತಿ ಸಮೀಕ್ಷಾ ವರದಿ ಸ್ವೀಕಾರ ಮಾಡಿದ ವಿಚಾರಕ್ಕೆ ಸಿದ್ಧಗಂಗಾ ಮಠದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಜಾತಿ ಗಣತಿ ವಿಚಾರದಲ್ಲಿ ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆಯೋ ಗೊತ್ತಿಲ್ಲ. ಇದಕ್ಕೆ ಯಾರೂ ವಿರೋಧ ಮಾಡಲು ಸಾಧ್ಯವಿಲ್ಲ. ಏಕೆಂದರೆ ಜಾತಿ ಆಧಾರದ ಮೇಲೆ ಸವಲತ್ತುಗಳನ್ನು ಕೊಡಬೇಕಾಗುತ್ತದೆ. ವೈಜ್ಞಾನಿಕವಾಗಿ ಆಗಿಲ್ಲ, ವ್ಯಾಪಕವಾಗಿ ಎಲ್ಲರನ್ನೂ ಸಂದರ್ಶನ ಮಾಡಿಲ್ಲ ಎಂಬ ಕೂಗು ಕೇಳಿಬರುತ್ತಿದೆ ಎಂದು ಹೇಳಿದರು.

ಸಂಗ್ರಹ ಚಿತ್ರ
ರಾಜ್ಯ ಸರ್ಕಾರಕ್ಕೆ ಜಾತಿ ಗಣತಿ ವರದಿ ಸಲ್ಲಿಕೆ, ಕ್ಯಾಬಿನೆಟ್ ನಲ್ಲಿ ಚರ್ಚಿಸಿ ಮುಂದಿನ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಗಣತಿ ವಿಚಾರದಲ್ಲಿ ಎಲ್ಲರಿಗೂ ಸಂದರ್ಶನ ಆಗಿದೆಯೋ ಗೊತ್ತಿಲ್ಲ. ನನ್ನನ್ನಂತೂ ಯಾರೂ ಬಂದು ಸಂದರ್ಶನ ಮಾಡಿಲ್ಲ. ಎಲ್ಲರನ್ನೂ ಕೇಳಿ, ಪ್ರತಿಯೊಬ್ಬರನ್ನು ವಿಚಾರಿಸಿ ವರದಿ ಮಾಡಿದರೆ ಸೂಕ್ತ. ಎಲ್ಲರಿಗೂ ಸೌಲಭ್ಯ ಲಭ್ಯವಾಗುವ ರೀತಿಯಲ್ಲಿ ಮಾಡಿದರೆ ಉಪಕಾರವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಪ್ರತಿಯೊಬ್ಬರನ್ನು ಕೇಳುತ್ತಾರಾ? ಅಥವಾ ಸಮಾಜದ ಮುಖಂಡರನ್ನ ಮಾತ್ರ ಕೇಳುತ್ತಾರಾ? ಏನು ಎಂಬುದು ಗೊತ್ತಿಲ್ಲ. ಹಾಗಾಗಿ ನಾನು ಅದರ ಬಗ್ಗೆ ಮಾತನಾಡುವುದಕ್ಕೆ ಹೋಗುವುದಿಲ್ಲ. ಎಲ್ಲರನ್ನೂ ಒಳಗೊಂಡಂತಹ ವರದಿ ಸ್ವೀಕಾರ ಆಗಲಿ. ಆಯಾ ಜಾತಿಯ ಜನಸಂಖ್ಯೆ ಆಧಾರದ ಮೇಲೆ ಸೌಲಭ್ಯಗಳು ವಿತರಣೆ ಆಗಲಿ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com